newsfirstkannada.com

ಪ್ರಜ್ವಲ್ ಪ್ರಕರಣದಿಂದ BJP-JDS ಮೈತ್ರಿ ಉಳಿಯುತ್ತಾ? ಆರ್‌. ಅಶೋಕ್ ಸ್ಫೋಟಕ ಸುಳಿವು; ಏನಂದ್ರು?

Share :

Published May 5, 2024 at 1:47pm

Update May 5, 2024 at 1:50pm

    ಸಿಎಂ ಸಿದ್ದರಾಮಯ್ಯ ಕೂಡ ಪ್ರಜ್ವಲ್ ರೇವಣ್ಣ ಪರ ಪ್ರಚಾರ ಮಾಡಿದ್ರು

    ಪ್ರಜ್ವಲ್ ರೇವಣ್ಣ ಅವರು ಹಾಸನದಲ್ಲಿ ಗೆದ್ರೆ ಖಂಡಿತ ಅನರ್ಹ ಮಾಡುತ್ತೇವೆ

    ಬಿಜೆಪಿ, ಜೆಡಿಎಸ್‌ ಮೈತ್ರಿ ಮುಂದುವರಿಕೆಯ ಬಗ್ಗೆ ಆರ್‌. ಅಶೋಕ್ ಹೇಳಿದ್ದೇನು?

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರು ಮುಗಿಬಿದ್ದಿದ್ದಾರೆ. ಹಾಸನ ಅಶ್ಲೀಲ ವಿಡಿಯೋ ಬಗ್ಗೆ ಗೊತ್ತಿದ್ದು NDA ನಾಯಕರು ಟಿಕೆಟ್‌ ಕೊಟ್ಟಿದ್ದಾರೆ. ಪ್ರಜ್ವಲ್ ರೇವಣ್ಣ ಪರ ಮೋದಿಯವರೇ ಪ್ರಚಾರ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸುತ್ತಿದ್ದಾರೆ. ಕಾಂಗ್ರೆಸ್ ನಾಯಕರ ಈ ಆರೋಪಗಳಿಗೆ ವಿಪಕ್ಷ ನಾಯಕ ಆರ್‌.ಅಶೋಕ್ ಅವರು ತಿರುಗೇಟು ಕೊಟ್ಟಿದ್ದಾರೆ. ಇದರ ಜೊತೆಗೆ ಬಿಜೆಪಿ, ಜೆಡಿಎಸ್‌ ಮೈತ್ರಿ ಮುಂದುವರಿಕೆಯ ಬಗ್ಗೆಯೂ ಅಶೋಕ್ ಸ್ಫೋಟಕ ಸುಳಿವು ಬಿಟ್ಟುಕೊಟ್ಟಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಆರ್‌. ಅಶೋಕ್ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪ್ರಜ್ವಲ್ ರೇವಣ್ಣರನ್ನು ಪಕ್ಕದಲ್ಲೇ ಕೂರಿಸ್ಕೊಂಡು ಪ್ರಚಾರ ಮಾಡಿದ್ರು. ಹಾಸನ ಅಭಿವೃದ್ಧಿಗೆ ಪ್ರಜ್ವಲ್ ರೇವಣ್ಣರನ್ನು ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದ್ದಾರೆ. ಯಂಗ್ ಲೀಡರ್, ವಿಜನ್ ಲೀಡರ್ ಎಂದು ಸಿದ್ದರಾಮಯ್ಯ ಆ ಸಂದರ್ಭದಲ್ಲಿ ಹೇಳಿದ್ದಾರೆ. 2019ರಲ್ಲಿ ಸಿದ್ದರಾಮಯ್ಯ, ಹೆಚ್‌.ಡಿ ದೇವೇಗೌಡರು ಪ್ರಜ್ವಲ್ ಪರ ಜಂಟಿ ಪ್ರಚಾರ ಮಾಡಿದ್ದ ವಿಡಿಯೋವನ್ನು ಆರ್‌. ಅಶೋಕ್ ಅವರು ಬಿಡುಗಡೆ ಮಾಡಿದ್ದಾರೆ.

ಜೆಡಿಎಸ್ ಈಗಾಗಲೇ ಪ್ರಜ್ವಲ್ ರೇವಣ್ಣರನ್ನು ಪಕ್ಷದಿಂದ ಅಮಾನತು ಮಾಡಿದೆ. ಭೂಮಿಯಲ್ಲಿ ಇದ್ದಾಗ ಪ್ರಜ್ವಲ್‌ ಅವರನ್ನು ಬಿಟ್ಟಿದ್ದಾರೆ. ರಾಜ್ಯದ ಗುಪ್ತಚರ ಇಲಾಖೆ ಏನು ಮಾಡ್ತಿತ್ತು. ಪೋಲೀಸರು ಪತ್ರ ಬರೆಯಬೇಕಿತ್ತು, ಕೇಂದ್ರಕ್ಕೆ ಪತ್ರ ಕೂಡ ಬರೆದಿಲ್ಲ. ಇನ್ನು ಪಾತಾಳದಿಂದ ಹೇಗೆ ಹಿಡಿದು ತರ್ತಾರೆ. ತಪ್ಪು ಯಾರದು? ಯಾವುದೇ ಸರ್ಕಾರ ಇದ್ರೂ ಡಿಪ್ಲಾಮ್ಯಾಟಿಕ್ ಪಾಸ್‌ಪೋರ್ಟ್ ಬರುತ್ತದೆ. ಪ್ರಧಾನಿ ನರೇಂದ್ರ ಮೋದಿಯವರು ಪಾಸ್ ಪೋರ್ಟ್ ನೀಡಿಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಕಾಂಗ್ರೆಸ್​ ಮುಖಂಡನ ಕಪಾಳಕ್ಕೆ ಬಾರಿಸಿದ DK ಶಿವಕುಮಾರ್​​.. ಅಸಲಿಗೆ ಆಗಿದ್ದೇನು..? Video 

ಹೆಚ್‌.ಡಿ ರೇವಣ್ಣ ಅವರನ್ನು ಬಂಧಿಸಿರುವ ಪೋಲೀಸರ ಕ್ರಮ ಸರಿಯಾಗಿದೆ. ರೇವಣ್ಣ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮೈತ್ರಿ ಮುಂದುವರಿಸುವ ಬಗ್ಗೆ ಕೇಂದ್ರ ನಾಯಕರ ಜೊತೆಗೆ ಚರ್ಚೆ ನಡೆಯುತ್ತಿದೆ. 2-3 ದಿನಗಳಲ್ಲಿ ಈ ಬಗ್ಗೆ ಗೊತ್ತಾಗುತ್ತದೆ. ಮೈತ್ರಿ ದೆಹಲಿ ಮಟ್ಟದಲ್ಲಿ ಆಗಿರೋದು. ಕೇಂದ್ರೀಯ ಸಂಸದೀಯ ಮಂಡಳಿ ಈ ಬಗ್ಗೆ ತೀರ್ಮಾನ ಮಾಡುತ್ತದೆ. ಈ ಬಾರಿ ಹಾಸನ ಲೋಕಸಭಾ ಚುನಾವಣೆಯಲ್ಲಿ NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಗೆದ್ರೆ ಖಂಡಿತ ಅನರ್ಹ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್ ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪ್ರಜ್ವಲ್ ಪ್ರಕರಣದಿಂದ BJP-JDS ಮೈತ್ರಿ ಉಳಿಯುತ್ತಾ? ಆರ್‌. ಅಶೋಕ್ ಸ್ಫೋಟಕ ಸುಳಿವು; ಏನಂದ್ರು?

https://newsfirstlive.com/wp-content/uploads/2024/04/Ashok_Prajwal.jpg

Load More