newsfirstkannada.com

ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

Share :

Published April 1, 2024 at 12:56pm

    ವರುಣನ ಆರ್ಭಟದಿಂದ ಮನೆ, ಗುಡಿಸಲು ಕಳೆದುಕೊಂಡ ಜನ

    ಮರಗಳು, ಕರೆಂಟ್ ಕಂಬಗಳು ನೆಲಕ್ಕೆ ಉರುಳಿದ್ದರಿಂದ ಆತಂಕ

    ರಾಜ್ಯಗಳಲ್ಲಿ ಭಾರೀ ಮಳೆಯಿಂದ 100ಕ್ಕೂ ಅಧಿಕ ಜನರಿಗೆ ಗಾಯ

ನವದೆಹಲಿ: ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇರುವ ಕಾರಣ ಈಶಾನ್ಯದ ರಾಜ್ಯಗಳಿಗೆ ಆರೆಂಜ್ ಅಲರ್ಟ್​ ಅನ್ನು ಭಾರತದ ಹವಾಮಾನ ಇಲಾಖೆ ಘೋಷಣೆ ಮಾಡಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ ರಾಜ್ಯಗಳಲ್ಲಿ ಈಗಾಗಲೇ ಮಳೆಯಾಗುತ್ತಿದ್ದು ಇದು ಇನ್ನು ಮುಂದುವರೆಯಲಿದೆ ಎಂದು ಹೇಳಲಾಗಿದೆ.

ಹವಾಮಾನ ಇಲಾಖೆಯ ಮಾಹಿತಿಯಂತೆ ಈಶಾನ್ಯದ ರಾಜ್ಯಗಳಲ್ಲಿ ಗುಡುಗು-ಮಿಂಚು ಸಮೇತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಗಂಟೆಗೆ 30-40 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ ಜೊತೆಗೆ ವರುಣ ಆರ್ಭಟ ಮಾಡುವ ಸಾಧ್ಯತೆಯಿದೆ. ಹೀಗಾಗಿ ಜನರು ಆದಷ್ಟು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಇಲಾಖೆ ಮಾಹಿತಿ ನೀಡಿದೆ ಎನ್ನಲಾಗಿದೆ.

ಇದನ್ನೂ ಓದಿ: ಸಚಿವರ ಬೆಂಗಾವಲು ವಾಹನದ ಮೇಲೆ ದುಷ್ಕರ್ಮಿಗಳು ದಾಳಿ.. ಕಾರಿನ ಗ್ಲಾಸ್​ ಪೀಸ್ ಪೀಸ್..!

ನಾಗಲ್ಯಾಂಡ್, ಮಣಿಪುರ, ಮಿಜೋರಾಂ ಹಾಗೂ ತ್ರಿಪುರದಲ್ಲಿ ಭಾನುವಾರ, ಸೋಮವಾರ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿತ್ತು. ಆದರೆ ಇದೀಗ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ. ಅಸ್ಸಾಂನ ಏರ್​ಪೋರ್ಟ್​ನಲ್ಲಿ ಕಟ್ಟಡದ ಸೀಲಿಂಗ್ ಕುಸಿದು ಬಿದ್ದಿದೆ. ಅಲ್ಲದೇ ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದಲ್ಲಿ ಚಂಡಮಾರುತ ಬೀಸುವ ಸಾಧ್ಯತೆ ಇದೆ ಎಂದು ಹೇಳಿದೆ.

ಈಗಾಗಲೇ ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗುತ್ತಿದ್ದು 100ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮರಗಳು, ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿದ್ದು ಜೊತೆಗೆ ಮನೆ, ಗುಡಿಸಲುಗಳನ್ನು ಕಳೆದುಕೊಂಡು ಕರೆಂಟ್ ಇಲ್ಲದೇ ಜನ ಕತ್ತಲಲ್ಲಿ ಒಂದಿನ ಕಳೆದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

https://newsfirstlive.com/wp-content/uploads/2024/04/WEST_BENGAL_RAIN.jpg

Load More