ವಿಧಾನಸೌಧದ ಮುಂದೆ ಬೈಕ್‌ಗೆ ಬೆಂಕಿ ಹಚ್ಚಿದ ಯುವಕನ ಕೋಪತಾಪ; ಕಾರಣವೇನು?

author-image
admin
Updated On
ವಿಧಾನಸೌಧದ ಮುಂದೆ ಬೈಕ್‌ಗೆ ಬೆಂಕಿ ಹಚ್ಚಿದ ಯುವಕನ ಕೋಪತಾಪ; ಕಾರಣವೇನು?
Advertisment
  • ಪೊಲೀಸರ ಮೇಲಿನ ಕೋಪಕ್ಕೆ ಬೈಕ್‌ಗೆ ಬೆಂಕಿ ಹಚ್ಚಿದ ಯುವಕ
  • ಚಳ್ಳಕೆರೆಯಿಂದ ವಿಧಾನಸೌಧಕ್ಕೆ ಬಂದು ಸರ್ಕಾರದ ಮೇಲೆ ಆಕ್ರೋಶ
  • ಚಳ್ಳಕೆರೆ ಠಾಣೆಯ ಪೊಲೀಸರ ವಿರುದ್ಧ ಯುವಕನ ಗಂಭೀರ ಆರೋಪ

ಬೆಂಗಳೂರು: ವಿಧಾನಸೌಧದ ಮುಂದೆಯೇ ಬೈಕ್‌ಗೆ ಬೆಂಕಿ ಹಚ್ಚುವ ಮೂಲಕ ಯುವಕನೊಬ್ಬ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಇವನ ಆಕ್ರೋಶಕ್ಕೆ ಕಾರಣವಾಗಿರೋದು ಪೊಲೀಸರಿಂದ ತಾಯಿಯ ನಿಂದನೆ ಎನ್ನಲಾಗಿದೆ. ಪೊಲೀಸರ ಮೇಲಿನ ಕೋಪಕ್ಕೆ ಯುವಕ ಬೈಕ್‌ಗೆ ಬೆಂಕಿ ಹಚ್ಚಿದ್ದಾನೆ.

ಇದನ್ನೂ ಓದಿ: ನಾಗದರ್ಶನ.. ಕಲಾವಿದರ ಸಂಘದಲ್ಲಿ ಹಿರಿಯ ನಟಿ ಮೈ ಮೇಲೆ ಬಂದ ದೇವರು; ಯಾರು ಈ ಜ್ಯೋತಿ? ಹಿನ್ನೆಲೆ ಏನು?

ವಿಧಾನಸೌಧದ ಮುಂದೆ ಬೈಕ್‌ಗೆ ಬೆಂಕಿ ಹಚ್ಚಿದ ಯುವಕನನ್ನು ಚಳ್ಳಕೆರೆ ಮೂಲದ ಪೃಥ್ವಿರಾಜ್ ಎಂದು ಗುರುತಿಸಲಾಗಿದೆ. ಪೃಥ್ವಿ ಟ್ರಕ್ಕಿಂಗ್‌ಗೆ ಹೋಗಿದ್ದ ವೇಳೆ ನಾಪತ್ತೆಯಾಗಿದ್ದ. ಅದಕ್ಕೆ ಗಾಬರಿಯಾದ ಪೃಥ್ವಿ ಅವರ ತಾಯಿ ಚಳ್ಳಕೆರೆ ಪೊಲೀಸರ ಮೊರೆ ಹೋಗಿದ್ದಾರೆ.

publive-image

ಯುವಕನ ತಾಯಿ ದೂರು ನೀಡಲು ಚಳ್ಳಕೆರೆ ಪೊಲೀಸ್ ಠಾಣೆಗೆ ಹೋಗಿದ್ದಾರೆ. ಆಗ ಪೊಲೀಸರು ಪೃಥ್ವಿ ತಾಯಿನ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಅಂತ ಯುವಕ ಆರೋಪಿಸಿದ್ದಾನೆ. ಪೊಲೀಸರ ಮೇಲಿನ ಆ ಕೋಪಕ್ಕೆ ವಿಧಾನಸೌಧ ಮುಂಭಾಗ ಬೈಕ್ ನಿಲ್ಲಿಸಿ ಬೆಂಕಿ ಇಟ್ಟಿದ್ದಾನೆ.

ಇದನ್ನೂ ಓದಿ: Bengaluru Rains: ಬೆಂಗಳೂರಲ್ಲಿ 5 ದಿನ ಭರ್ಜರಿ ಮಳೆ; ಈ ರಸ್ತೆಗಳಲ್ಲಿ ಓಡಾಡೋ ಮುನ್ನ ಎಚ್ಚರ! 

ಬೈಕ್‌ಗೆ ಬೆಂಕಿ ಹಚ್ಚಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಯುವಕನನ್ನು ವಿಧಾನಸೌಧ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವಕನ ಆರೋಪದ ಹಿನ್ನೆಲೆಯಲ್ಲಿ ಮುಂದಿನ ವಿಚಾರಣೆ ಕೈಗೊಳ್ಳಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment