/newsfirstlive-kannada/media/post_attachments/wp-content/uploads/2024/12/Devdutt-Padikkal-RCB-News.jpg)
2025ರ ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಶುರುವಾಗಿದೆ. ಕೆಕೆಆರ್ ವಿರುದ್ಧ ಮೊದಲ ಪಂದ್ಯದಲ್ಲಿ ಗೆದ್ದು ಬೀಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾರ್ಚ್ 28ನೇ ತಾರೀಕು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣಸಾಡಲಿದೆ. ಇದರ ಮಧ್ಯೆ ಆರ್ಸಿಬಿಯಿಂದ ಬಿಗ್ ಅಪ್ಡೇಟ್ ಒಂದಿದೆ.
ದೇವದತ್ ಪಡಿಕ್ಕಲ್ ಕಳಪೆ ಪ್ರದರ್ಶನ
ಕೆಕೆಆರ್ ವಿರುದ್ಧ ಆರ್ಸಿಬಿ 7 ವಿಕೆಟ್ಗಳಿಂದ ಗೆದ್ದು ಬೀಗಿದೆ. ಆರ್ಸಿಬಿ ತಂಡದ ಪರ ಎಲ್ಲ ಆಟಗಾರರು ಉತ್ತಮ ಪ್ರದರ್ಶನ ನೀಡಿದ್ರು. ಆದರೆ, ಕನ್ನಡಿಗ ದೇವದತ್ ಪಡಿಕ್ಕಲ್ ಮಾತ್ರ ಹೇಳಿಕೊಳ್ಳುವಂತ ಪ್ರದರ್ಶನ ನೀಡಲಿಲ್ಲ. ಬದಲಿಗೆ ಕೇವಲ 10 ರನ್ಗೆ ವಿಕೆಟ್ ಒಪ್ಪಿಸಿ ಸಿಕ್ಕ ಸುವರ್ಣಾವಕಾಶ ಕೈ ಚೆಲ್ಲಿದರು. ಹೀಗಾಗಿ ಇವರಿಗೆ ಮುಂದಿನ ಪಂದ್ಯದಲ್ಲಿ ಚಾನ್ಸ್ ಸಿಗೋದು ಡೌಟ್ ಆಗಿದೆ.
ಸ್ಟಾರ್ ಕನ್ನಡಿಗ ದೇವದತ್ ಪಡಿಕ್ಕಲ್ ಆರ್ಸಿಬಿಗೆ ರೀ ಎಂಟ್ರಿ ನೀಡಿದ್ದಾರೆ. ಇವರನ್ನು RCB 2 ಕೋಟಿಗೆ ಖರೀದಿಸಿದೆ. ಆದರೆ ಅವರಿಗೆ ಆಡುವ ಬಳಗದಲ್ಲಿ ಅವಕಾಶ ಸಿಗೋದು ತುಂಬಾ ಕಡಿಮೆ. ಇದಕ್ಕೆ ಕಾರಣ ಅವರ ಕಳಪೆ ಫಾರ್ಮ್. ಕಳೆದ ಸೀಸನ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ನೀಡಿದ ಪ್ರದರ್ಶನ ಅಷ್ಟಕಷ್ಟೇ. RCB ಮಿಡಲ್ ಆರ್ಡರ್ ಬ್ಯಾಟರ್ ಆಗಿ ಲಿಯಾಮ್ ಲಿವಿಂಗ್‌ಸ್ಟೋನ್, ಟಿಮ್ ಡೇವಿಡ್ ಮತ್ತು ಕೃನಾಲ್ ಪಾಂಡ್ಯ ಅವರಂತಹ ಬಲಿಷ್ಠ ಬ್ಯಾಟ್ಸ್‌ಮನ್‌ಗಳ ದಂಡು ಇದೆ. ಇಂತಹ ಪರಿಸ್ಥಿತಿಯಲ್ಲಿ ಪಡಿಕ್ಕಲ್ಗೆ ಅವಕಾಶ ಸಿಗೋದು ಕಷ್ಟ.
80ಕ್ಕೂ ಹೆಚ್ಚು ಕೋಟಿಯೊಂದಿಗೆ ಹರಾಜಿಗೆ ಬಂದ ಆರ್ಸಿಬಿ ಮೊದಲ ದಿನವೇ ಬರೋಬ್ಬರಿ 50 ಕೋಟಿ ಖರ್ಚು ಮಾಡಿತ್ತು. 2ನೇ ದಿನ ಉಳಿದ 30 ಕೋಟಿಯನ್ನು ಆಟಗಾರರ ಮೇಲೆ ಸುರಿಯಿತು. ಈ ಪೈಕಿ ಆರ್ಸಿಬಿ ಜೋಶ್ ಹೇಜಲ್ವುಡ್ಗೆ 12.50 ಕೋಟಿ, ಫಿಲ್ ಸಾಲ್ಟ್ಗೆ 11.50 ಕೋಟಿ ರೂ., ಜಿತೇಶ್ ಶರ್ಮಾಗೆ 11.00 ಕೋಟಿ ರೂ., ಭುವನೇಶ್ವರ್ ಕುಮಾರ್ಗೆ 10.75 ಕೋಟಿ ರೂ., ಲಿಯಾಮ್ ಲಿವಿಂಗ್ಸ್ಟೋನ್ಗೆ ಸುಮಾರು 8.75 ಕೋಟಿ ರೂ. ನೀಡಿ ಖರೀದಿ ಮಾಡಿದೆ. ಕೊನೆಯ ದಿನ ದೇವದತ್ ಪಡಿಕ್ಕಲ್ ಅವರನ್ನು ಆರ್ಸಿಬಿ 2 ಕೋಟಿಗೆ ಖರೀದಿ ಮಾಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ