/newsfirstlive-kannada/media/post_attachments/wp-content/uploads/2024/09/PAK-ARMY-ON-KARGIL-WAR.jpg)
ಪಹಲ್ಗಾಮ್ ದಾಳಿಯ ಬಳಿಕ ಜಮ್ಮು ಕಾಶ್ಮೀರದ ಗಡಿಯಲ್ಲಿ ಗುಂಡಿನ ಚಕಮಕಿ ಮುಂದುವರಿದಿದೆ. ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸುತ್ತಿರುವ ಪಾಕ್ ಸೇನೆಯನ್ನು ಗಡಿಯಲ್ಲಿ ಭಾರತದ ಯೋಧರು ಹಿಮ್ಮೆಟ್ಟಿಸುತ್ತಿದ್ದಾರೆ. ಭಾರತದ ಸೇನೆಯ ಈ ಸಮರಾಭ್ಯಾಸ ಪಾಕಿಸ್ತಾನಕ್ಕೆ ನಡುಕವನ್ನು ಉಂಟು ಮಾಡಿದೆ.
ಭಾರತದಿಂದ ಪಾಕಿಸ್ತಾನದ ಮೇಲೆ ಯಾವುದೇ ಕ್ಷಣದಲ್ಲಾದರೂ ದಾಳಿ ಮಾಡುವ ಭೀತಿ ಎದುರಾಗಿದೆ. ಇದರಿಂದ ಪಾಕಿಸ್ತಾನ ಸೈನಿಕರ ಮನೋಸ್ಥೈರ್ಯ ಸಂಪೂರ್ಣವಾಗಿ ಕುಸಿದಿದೆ. ಇದರ ಪರಿಣಾಮವಾಗಿ ಬರೋಬ್ಬರಿ 1,200 ಮಂದಿ ಪಾಕ್ ಸೇನಾ ಆಫೀಸರ್, ಸೈನಿಕರು ರಾಜೀನಾಮೆ ನೀಡಿದ್ದಾರೆ.
ಇದನ್ನೂ ಓದಿ: ಶೋಯೆಬ್ ಅಖ್ತರ್ಗೆ ಬಿಗ್ ಶಾಕ್ ಕೊಟ್ಟ ಭಾರತ ಸರ್ಕಾರ; ಪಾಕ್ಗೆ ಮತ್ತೊಂದು ಮಾಸ್ಟರ್ ಸ್ಟ್ರೋಕ್..!
ಪಾಕಿಸ್ತಾನದ ಸೇನಾ ಆಫೀಸರ್, ಸೈನಿಕರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇದಕ್ಕೆ ಭಾರತದ ಯುದ್ಧದ ಭೀತಿ ಒಂದು ಕಾರಣವಾದ್ರೆ, ಪಾಕ್ ಸೇನಾ ಮುಖ್ಯಸ್ಥ ಅಸೀಮ್ ಮುನೀರ್ ನಡೆ, ಧೋರಣೆ ಮತ್ತೊಂದು ಪ್ರಮುಖ ಕಾರಣವಾಗಿದೆ.
ಪಾಕ್ ಸೇನಾ ಮುಖ್ಯಸ್ಥ ಅಸೀಮ್ ಮುನೀರ್ ಮೇಲೆ ಸೈನಾಧಿಕಾರಿಗಳು ಅಸಮಾಧಾನಗೊಂಡಿದ್ದಾರೆ. ಈ ಹಿಂದೆಯೇ ಸೇನಾಧಿಕಾರಿಗಳು ಪಾಕ್ ಸೇನಾ ಮುಖ್ಯಸ್ಥ ಅಸೀಮ್ ಮುನೀರ್ ರಾಜೀನಾಮೆಗೆ ಆಗ್ರಹಿಸಿದ್ದರು.
ಈಗ ಭಾರತ- ಪಾಕ್ ಯುದ್ಧ ಭೀತಿಯ ಹಿನ್ನೆಲೆಯಲ್ಲಿ ಏಪ್ರಿಲ್ ತಿಂಗಳಲ್ಲಿ 1,200 ಮಂದಿ ಸೇನಾ ಆಫೀಸರ್, ಸೈನಿಕರು ರಾಜೀನಾಮೆ ಸಲ್ಲಿಸಿದ್ದಾರೆ. ಪಾಕ್ ಸೇನೆಯಲ್ಲಿ ಸೇನಾ ಮುಖ್ಯಸ್ಥರ ವಿರುದ್ಧವೇ ಭಾರೀ ಅಸಮಾಧಾನ ಸ್ಫೋಟವಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ