/newsfirstlive-kannada/media/post_attachments/wp-content/uploads/2025/03/PAK_BAMB.jpg)
ಚಾಂಪಿಯನ್ ಟ್ರೋಫಿ ನಡೆಯುತ್ತಿರುವ ಸಮಯದಲ್ಲಿ ಪಾಕಿಸ್ತಾನದಲ್ಲಿ ಭೀಕರ ಬಾಂಬ್ ದಾಳಿ ನಡೆಸಲಾಗಿದ್ದು ಧರ್ಮಗುರು ಸೇರಿ ಐವರು ಜೀವ ಕಳೆದುಕೊಂಡಿದ್ದಾರೆ. ಈ ಕುರಿತು ಕ್ರಿಕೆಟರ್ಸ್ ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಶುಕ್ರವಾರ ಆದ ಕಾರಣ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಅಕ್ಕೋರಾ ಖಟ್ಟಕ್ ಜಿಲ್ಲೆಯ ಮದರಸಾ ದಾರುಲ್ ಉಲೂಮ್ ಹಕ್ಕಾನಿಯಾದಲ್ಲಿ ಜನರು ಪ್ರಾರ್ಥನೆ ಸಲ್ಲಿಕೆ ಮಾಡುತ್ತಿದ್ದರು. ಇದೇ ಸಮಯದಲ್ಲಿ ಭಯಾನಕವಾಗಿ ಬಾಂಬ್ ಸ್ಫೋಟಗೊಂಡ ಪರಿಣಾಮ ಘಟನೆಯಲ್ಲಿ ಮುಖ್ಯ ಧರ್ಮಗುರು ಮತ್ತು ನಾಲ್ವರು ಆರಾಧಕರು ಪ್ರಾಣ ಬಿಟ್ಟಿದ್ದಾರೆ. 20 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಕರ್ನಾಟಕ ಬಂದ್ ದಿನಾಂಕ ಚೇಂಜ್ ಆಗುತ್ತಾ.. ಆಕ್ಷೇಪ ಯಾಕೆ ಗೊತ್ತಾ?
ಬಾಂಬ್ ಸ್ಫೋಟ ಸಂಭವಿಸುತ್ತಿದ್ದರಿಂದ ಜನರು ಜೀವ ಉಳಿಸಿಕೊಳ್ಳಲು ಸಿಕ್ಕ ಸಿಕ್ಕ ಕಡೆ ಓಡಲು ಪ್ರಾರಂಭಿಸಿದ್ದಾರೆ. ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕೆ 1122 ರಕ್ಷಣಾ ಪಡೆ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸ್ಥಳದಲ್ಲೇ ಭದ್ರತಾ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ ಎಂದು ಹೇಳಲಾಗಿದೆ.
ಬಾಂಬ್ ಬ್ಲಾಸ್ಟ್ನಿಂದ ಐವರು ಜೀವ ಬಿಟ್ಟಿದ್ದು 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನೌಶೆರಾದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಲಾಗಿದೆ ಎಂದು 1122 ರಕ್ಷಣಾ ಪಡೆಯ ವಕ್ತಾರ ಬಿಲಾಲ್ ಫೈಝಿ ಹೇಳಿದ್ದಾರೆ. ಪ್ರಾಥಮಿಕ ತನಿಖೆ ಪ್ರಕಾರ ಇದು ಆತ್ಮಹುತಿ ಬಾಂಬ್ ಎಂದು ಪರಿಗಣಿಸಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಪಾಕಿಸ್ತಾನದ ಪ್ರಧಾನ ಮಂತ್ರಿ ಶೆಹಬಾಜ್ ಷರೀಫ್ ಇದನ್ನು ತೀವ್ರವಾಗಿ ಖಂಡಿಸಿದ್ದಾರೆ.
ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ