ಘಟನೆಯಲ್ಲಿ ಓರ್ವ ಬದುಕಿದ್ದೆ ಪವಾಡ, ಅಪಘಾತ ಆಗಿದ್ದೇಲ್ಲಿ?
ಉರುಳಿ ಬಿದ್ದ ರಭಸಕ್ಕೆ ಬಸ್ ಸಂಪೂರ್ಣವಾಗಿ ನಜ್ಜುಗುಜ್ಜು
ಪಟ್ಟಣದಿಂದ ಜಿಲ್ಲೆಗೆ ತೆರಳುವಾಗ ನಡೆದ ಭಯಾನಕ ಆಕ್ಸಿಡೆಂಟ್
ಪರ್ವತ ಪ್ರದೇಶದಲ್ಲಿ ತೆರಳುತ್ತಿದ್ದ ಬಸ್ವೊಂದು ಕಂದಕಕ್ಕೆ ಉರುಳಿ ಬಿದ್ದು 30 ಪ್ರಯಾಣಿಕರ ಪೈಕಿ 29 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಓರ್ವ ಮಾತ್ರ ಬದುಕುಳಿದಿದ್ದಾನೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಪನಾ ಬ್ರಿಡ್ಜ್ ಬಳಿ ಈ ದುರ್ಘಟನೆ ನಡೆದಿದೆ.
ಪ್ಯಾಸೆಂಜರ್ ಬಸ್ ಪಂಜಾಬ್ನ ಹವೇಲಿ-ಕಹುತದಿಂದ ರಾವಲ್ಪಿಂಡಿ ಕಡೆಗೆ ಹೋಗುತ್ತಿತ್ತು. ಈ ವೇಳೆ ಪನಾ ಬ್ರಿಡ್ಜ್ ಬಳಿ ಬರುತ್ತಿದ್ದಂತೆ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಬಸ್ನಲ್ಲಿದ್ದ ಮೂವತ್ತು ಜನರ ಪೈಕಿ 29 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಒಬ್ಬ ಪ್ರಯಾಣಿಕ ಮಾತ್ರ ಪವಾಡ ರೀತಿಯಲ್ಲಿ ಬದುಕುಳಿದಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ. ಸದ್ಯ ಗಾಯಾಳುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತಕ್ಕೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ ಎಂದು ಹೇಳಲಾಗಿದೆ.
ಇದನ್ನೂ ಓದಿ: ಉರುಳಿ ಬಿದ್ದ ಯಾತ್ರಾರ್ಥಿಗಳ ಬಸ್.. 35 ಜನರು ಸಾವು, 7 ಮಂದಿ ಗಂಭೀರ
ಇನ್ನು ಬಸ್ ಕಂದಕಕ್ಕೆ ಉರುಳಿ ಬಿದ್ದ ಮಾಹಿತಿ ತಿಳಿದು ಸ್ಥಳೀಯ ಗ್ರಾಮದ ಜನರು ಬಂದು ಮೃತದೇಹಗಳನ್ನು ಮೇಲೆತ್ತಿದ್ದಾರೆ. ಬಳಿಕ ಪೊಲೀಸರು ರಕ್ಷಣಾ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಬಸ್ ಮೇಲಿನಿಂದ ಉರುಳಿ ಬಿದ್ದ ರಭಸಕ್ಕೆ ಬಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಹುತದಿಂದ ರಾವಲ್ಪಿಂಡಿ ಜಿಲ್ಲೆಗೆ ಹೋಗಲು ಇದೊಂದೆ ಮಾರ್ಗವಿದ್ದು ಒಂದು ಗಂಟೆ ಸಮಯ ಹಿಡಿಯುತ್ತದೆ. ಆದರೆ ಈ ವೇಳೆ ತೆರಳುವಾಗ ಈ ಬಸ್ ಅಪಘಾತವಾಗಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಭೀಕರ ಬಸ್ ಅಪಘಾತ.. ಸಾವಿನ ಸಂಖ್ಯೆ 28ಕ್ಕೂ ಹೆಚ್ಚು; 23 ಮಂದಿಗೆ ಗಂಭೀರ ಗಾಯ; ಪ್ರಧಾನಿ ತೀವ್ರ ಕಂಬನಿ
ಇರಾಕ್ನಿಂದ ಇರಾನ್ ಮೂಲಕ ಪಾಕಿಸ್ತಾನಕ್ಕೆ ಹಿಂದಿರುಗುತ್ತಿದ್ದ ಶಿಯಾ ಮುಸ್ಲಿಂ ಯಾತ್ರಿಕರ ಬಸ್ವೊಂದು ಕಂದಕಕ್ಕೆ ಬಿದ್ದು ಕನಿಷ್ಠ 12 ಜನರು ಸಾವನ್ನಪ್ಪಿದ್ದರು. ಘಟನೆಯಲ್ಲಿ 32 ಮಂದಿ ಗಾಯಗೊಂಡಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ರಾವಲ್ಪಿಂಡಿ ಜಿಲ್ಲೆಯಲ್ಲಿ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ.
ಮೊನ್ನೆ ಮೊನ್ನೇಯಷ್ಟೇ ಇರಾಕ್ಗೆ ತೆರಳುತ್ತಿರುವಾಗ ನೆರೆಯ ಇರಾನ್ನಲ್ಲಿ ನಡೆದ ಬಸ್ ಅಪಘಾತದಲ್ಲಿ 35 ಪಾಕಿಸ್ತಾನಿ ಯಾತ್ರಾರ್ಥಿಗಳು ಮೃತಪಟ್ಟಿದ್ದರು. 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಇದರ ಬೆನ್ನಲ್ಲೇ ಈ ಅಪಘಾತ ಸಂಭವಿಸಿರುವುದು ಆತಂಕಕ್ಕೆ ಗುರಿಮಾಡಿದೆ. ಈ ಸಂಬಂಧ ಪಾಕ್ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಮೃತರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ