/newsfirstlive-kannada/media/post_attachments/wp-content/uploads/2025/05/India-strikes-3.jpg)
‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಜೆಎಫ್ -17 ಯುದ್ಧ ವಿಮಾನವನ್ನು ಭಾರತೀಯ ವಾಯುಪಡೆ ಹೊಡೆದುರುಳಿಸಿದೆ. ಪಾಕಿಸ್ತಾನಕ್ಕೆ ಜೆಎಫ್ -17 ಯುದ್ಧ ವಿಮಾನವನ್ನು ಚೀನಾ ನೀಡಿತ್ತು. ಇದೀಗ ಚೀನಾ ನೀಡಿದ್ದ ಯುದ್ಧ ವಿಮಾನ ಉಡೀಸ್ ಆಗಿದೆ.
ಜೆಎಫ್ -17 ಯುದ್ಧ ವಿಮಾನ ಹೊಡೆದುರುಳಿಸಲು ಭಾರತ ರಫೇಲ್ ಯುದ್ಧ ವಿಮಾನ ಬಳಸಿದೆ ಎಂದು ಹೇಳಲಾಗಿದೆ. ಭಾರತೀಯ ವಾಯುಪಡೆಯ ದಾಳಿಗೆ ನೆಲಕ್ಕಪ್ಪಳಿಸಿದ ವಿಡಿಯೋ ಇದೀಗ ವೈರಲ್ ಆಗಿದೆ. ಆಪರೇಷನ್ ಸಿಂಧೂರ್ ಅನ್ನು ಭಾರತೀಯ ಸೇನೆ ಮತ್ತು ಭಾರತೀಯ ವಾಯುಪಡೆ ಜಂಟಿಯಾಗಿ ನಡೆಸಿವೆ. ಐಎಎಫ್ ಫೈಟರ್ ಜೆಟ್‌ಗಳು ವೈಮಾನಿಕ ದಾಳಿ ನಡೆಸಿದರೆ, ಸೇನೆಯು ಕ್ಷಿಪಣಿಗಳನ್ನು ಉಡಾಯಿಸಿದೆ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ, ಈ ದೊಡ್ಡ ದಾಳಿಯಲ್ಲಿ ಸುಮಾರು 70ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ಇದನ್ನೂ ಓದಿ: ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ಅಟ್ಯಾಕ್; ರಕ್ಷಣಾ ಸಚಿವಾಲಯ ನೀಡಿದ ಮಾಹಿತಿ ಏನು..?
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಆಪರೇಷನ್ ಸಿಂಧೂರ್ ಅಡಿಯಲ್ಲಿ 9 ಭಯೋತ್ಪಾದಕ ಅಡಗುತಾಣಗಳನ್ನು ನಾಶಪಡಿಸಿದೆ. ಭಾರತದ ದಾಳಿಗೆ ಬೆಚ್ಚಿಬಿದ್ದಿರುವ ಪಾಕ್, ತನ್ನ ಕರಾಚಿ ಮತ್ತು ಲಾಹೋರ್ ವಾಯುಪ್ರದೇಶವನ್ನು ತರಾತುರಿಯಲ್ಲಿ ಮುಚ್ಚಿದೆ.
ಇದನ್ನೂ ಓದಿ: ಸೇನೆ-ವಾಯುಪಡೆಯಿಂದ ಜಂಟಿ ಆಪರೇಷನ್ ಸಿಂಧೂರ್.. 70ಕ್ಕೂ ಹೆಚ್ಚು ಭಯೋತ್ಪಾದಕರು ಉಡೀಸ್..!
https://twitter.com/madhuriadnal/status/1919887937258586327
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ