ಕುಡಿದ ಮತ್ತಿನಲ್ಲಿ ವೇಗವಾಗಿ ಬಂದು ಮರಕ್ಕೆ ಗುದ್ದಿದ ಕಾರು
ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ 2 ಪೀಸ್ ಆದ ಕಾರು
ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ, ಚಾಲಕ ಗಂಭೀರ
ಬೆಂಗಳೂರು: ಕಾರೊಂದು ರಭಸವಾಗಿ ಬಂದು ಮರಕ್ಕೆ ಡಿಕ್ಕಿ ಹೊಡೆದ ಘಟನೆ ಪಾಪರೆಡ್ಡಿ ಪಾಳ್ಯದ ಬಳಿ ನಡೆದಿದೆ. ಭೀಕರ ಅಪಘಾತದಲ್ಲಿ ಕಾರು 2 ಭಾಗವಾಗಿ ಬಿದ್ದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಧ್ಯರಾತ್ರಿ 12.45 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಚಾಲಕ ಯಶಸ್ಗೆ ಎಂಬಾತ ಕಾರು ಚಲಾಯಿಸುತ್ತಿದ್ದು, ವೇಗವಾಗಿ ಬಂದು ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಕಾರು ಛಿದ್ರ ಛಿದ್ರಗೊಂಡಿದ್ದು. ಚಾಲಕ ಯಶಸ್ ಗಂಭೀರ ಗಾಯಗೊಂಡಿದ್ದಾರೆ. ಅಪಫಾತ ಸಂಭವಿಸಿದಂತೆಯೇ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಯಶಸ್ ಕಾರನ್ನ ವೇಗವಾಗಿ ಚಲಾಯಿಸಿಕೊಂಡು ಬಂದಿದ್ದು, ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿರುವ ಶಂಕೆ ವ್ಯಕ್ತವಾಗಿದೆ. ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿಯೋರ್ವ ಕಾರೊಂದನ್ನು ರಭಸವಾಗಿ ಚಲಾಯಿಸಿಕೊಂಡು ಬಂದು ಮರಕ್ಕೆ ಡಿಕ್ಕಿ ಹೊಡೆದ ಘಟನೆ ಪಾಪರೆಡ್ಡಿ ಪಾಳ್ಯದ ಬಳಿ ನಡೆದಿದೆ. ಭೀಕರ ಅಪಘಾತದಲ್ಲಿ ಕಾರು 2 ಭಾಗವಾಗಿ ಬಿದ್ದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.#Bangalore #accident pic.twitter.com/eX5Bad3jTs
— NewsFirst Kannada (@NewsFirstKan) July 1, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ