/newsfirstlive-kannada/media/post_attachments/wp-content/uploads/2025/06/Karwara-baby-Falldown-1.jpg)
ಕಾರವಾರ: ಪೋಷಕರ ನಿರ್ಲಕ್ಷ್ಯಕ್ಕೆ ಪುಟ್ಟ ಮಗು ನಾಲೆಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಆಝಾದ ನಗರದಲ್ಲಿ ನಡೆದಿದೆ.
ಎರಡು ವರ್ಷದ ಹೆಣ್ಣು ಮಗು ಮನೆಯ ಮುಂಭಾಗದಲ್ಲಿ ಆಟವಾಡುತ್ತಿತ್ತು. ಪೋಷಕರು ಮಗುವಿನ ಮೇಲೆ ಗಮನ ಹರಿಸಿಲ್ಲ. ಕಾಲುವೆಗೆ ಬಿದ್ದ ಪುಟಾಣಿ ಮಗು ಕೆಲವೇ ಸೆಕೆಂಡ್‌ಗಳಲ್ಲಿ ನೀರಿನಲ್ಲಿ ಮುಳುಗಿ ಹೋಗಿದೆ.
ಎರಡು ವರ್ಷದ ಪುಟ್ಟ ಮಗು ಕಾಲುವೆಗೆ ಬೀಳುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
/newsfirstlive-kannada/media/post_attachments/wp-content/uploads/2025/06/Karwara-baby-Falldown.jpg)
ತೌಸೀಫ್ ಮತ್ತು ಅರ್ಜು ದಂಪತಿಯ ಎರಡು ವರ್ಷದ ಪುಟ್ಟ ಮಗು ಏಕಾಏಕಿ ನೀರು ತುಂಬಿ ಹರಿಯುತ್ತಿರುವ ಕಾಲುವೆಗೆ ಬಿದ್ದಿದೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋದರು ಮಗು ಬದುಕುಳಿದಿಲ್ಲ.
ಜೂನ್ 14ರ ಮಧ್ಯಾಹ್ನ ಈ ದಾರುಣ ಘಟನೆ ನಡೆದಿದ್ದು, ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us