newsfirstkannada.com

ಅಂಗಾಂಗ ದಾನ.. ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Share :

09-08-2023

    ಬೈಕ್​ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕ

    ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆ ಮಗನ ಅಂಗಾಂಗ ದಾನ

    ದುಃಖಿತರಾದ ಪೋಷಕರು, ಇಂದು ಹುಟ್ಟೂರಿನಲ್ಲಿ ಅಂತ್ಯಕ್ರಿಯೆ

ಹಾಸನ: ಅಂಗಾಂಗಳನ್ನು ದಾನ ಮಾಡುವ ಮೂಲಕ ಮಗನ ಸಾವಿನಲ್ಲೂ ಪೋಷಕರು ಸಾರ್ಥಕತೆ ಮೆರೆದಿದ್ದಾರೆ.

ಕಿರಣ್ (23) ಮೃತಪಟ್ಟ ಯುವಕ. ಬೆಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಕಿರಣ್ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಇದರಿಂದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಪೋಷಕರು ಚಿಕಿತ್ಸೆ ಕೊಡಿಸುತ್ತಿದ್ದರು. ಆದ್ರೆ ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಪೋಷಕರು ಮಗನ ಅಂಗಾಂಗಳನ್ನು ದಾನ ಮಾಡಿದ್ದಾರೆ.

ಕಿರಣ್​ ಮೂಲತಹ ಹಾಸನದ ಹೊಳೆನರಸೀಪುರ ತಾಲೂಕಿನ ಹರಳಹಳ್ಳಿ ಗ್ರಾಮದ ಯೋಗೇಶ್-ರಾಣಿ ದಂಪತಿ ಮುದ್ದಿನ ಪುತ್ರ. ಇಂದು ಮಧ್ಯಾಹ್ನ ಹುಟ್ಟೂರು ಹರಳಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅಂಗಾಂಗ ದಾನ.. ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

https://newsfirstlive.com/wp-content/uploads/2023/08/HASAANA_KIRAN.jpg

Load More