ಇಳಿಜಾರಿನಲ್ಲಿ ಬ್ರೇಕ್ ಫೇಲ್​​.. ಗಾಬರಿಯಾದ ಪ್ರಯಾಣಿಕರು ಮಾಡಿದ್ದೇನು ಗೊತ್ತಾ..?

author-image
Ganesh
Updated On
ಇಳಿಜಾರಿನಲ್ಲಿ ಬ್ರೇಕ್ ಫೇಲ್​​.. ಗಾಬರಿಯಾದ ಪ್ರಯಾಣಿಕರು ಮಾಡಿದ್ದೇನು ಗೊತ್ತಾ..?
Advertisment
  • 17 ಮಹಿಳೆಯರು ಸೇರಿ ಒಟ್ಟು 45 ಪ್ರಯಾಣಿಕರು ಇದ್ದರು
  • 6 ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೀತಿದ್ದಾರೆ
  • ಅದೃಷ್ಟವಶಾತ್ ಯಾವುದೇ ಪ್ರಣಾಪಾಯ ಸಂಭವಿಸಿಲ್ಲ

ಬ್ರೇಕ್ ಫೇಲ್ಯೂರ್​ ಆಗಿದ್ರಿಂದ ​ ಚಲಿಸುತ್ತಿರುವ ಬಸ್‌ನಿಂದ ಪ್ರಯಾಣಿಕರು ಜಿಗಿದ ಘಟನೆ ಜಮ್ಮುವಿನ ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಬನಿಹಾಲ್ ಬಳಿ ನಡೆದಿದೆ.

ಶ್ರೀನಗರದಿಂದ ಜಮ್ಮುವಿಗೆ ತೆರಳುತ್ತಿದ್ದ ಬಸ್​ನಲ್ಲಿ 17 ಮಹಿಳೆಯರು ಮತ್ತು 1 ಮಗು ಸೇರಿದಂತೆ ಒಟ್ಟು 45 ಪ್ರಯಾಣಿಕರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ರು. ಇದ್ದಕ್ಕಿದಂತೆ ಬಸ್​ ಬ್ರೇಕ್ ಫೇಲ್ಯೂರ್ ಆಗಿದೆ. ಇದು ಗೊತ್ತಾಗ್ತಿದ್ದಂತೆ ಪ್ರಯಾಣಿಕರು ಗಾಬರಿಯಾಗಿದ್ದಾರೆ.

ಇಳಿಜಾರಿನಲ್ಲಿ ಬಸ್ ನಿಧಾನಗತಿಯಲ್ಲಿ ಚಲಿಸುತ್ತಿದ್ದಾಗ ಪ್ರಯಾಣಿಕರು ಹಿಂದಿನ ಡೋರ್​ನಿಂದ ಜಿಗಿದಿದ್ದಾರೆ. ಪರಿಣಾಮ ಆರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಣಾಪಾಯ ಸಂಭವಿಸಿಲ್ಲ. ಸದ್ಯ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment