/newsfirstlive-kannada/media/post_attachments/wp-content/uploads/2024/06/PAVITRA.jpg)
ಬೆಂಗಳೂರು: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ನಟ ದರ್ಶನ್ ಸೇರಿ ಒಟ್ಟು 13 ಆರೋಪಿಗಳನ್ನು 24 ಎಸಿಎಂಎಂ ಇನ್ಚಾರ್ಜ್ ಕೋರ್ಟ್ ಎಕಾನಾಮಿಕ್ ಆಫೇನ್ಸ್ ಕೋರ್ಟ್ಗೆ ಹಾಜರು ಪಡಿಸಲಾಗಿತ್ತು.
ಇದೀಗ ಈ ಕೊಲೆ ಕೇಸ್ ಸಂಬಂಧ ಎ1 ಪವಿತ್ರಾ ಗೌಡ ಜೈಲು ಪಾಲಾಗಿದ್ದಾರೆ.
ಇದನ್ನೂ ಓದಿ: ದರ್ಶನ್ ಗ್ಯಾಂಗ್ ವಿರುದ್ಧ 8 ಹೊಸ ಸೆಕ್ಷನ್ ಸೇರಿಸಿದ ಪೊಲೀಸರು.. ಯಾವ್ಯಾವ ಸೆಕ್ಷನ್‌ಗೆ ಎಷ್ಟು ವರ್ಷ ಶಿಕ್ಷೆ?
ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ. ಆತನಿಗೆ ಪಾಠ ಕಲಿಸಲು ದರ್ಶನ್ ಮತ್ತು ಸಹಚರರು ರೇಣುಕಾಸ್ವಾಮಿಯನ್ನು ಅಪಹರಿಸಿ ಬೆಂಗಳೂರಿಗೆ ಕರೆತಂದು ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ ಪವಿತ್ರ ಗೌಡ ಎ1 ದರ್ಶನ್ ಎ2 ಆಗಿದ್ದರು. ಹೀಗಾಗಿ ಈ ಕೊಲೆಯಲ್ಲಿ ಭಾಗಿಯಾಗಿದ್ದ ಎಲ್ಲ ಆರೋಪಿಗಳನ್ನು ಪೊಲೀಸ್ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಎಲ್ಲ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ದಿನ ಕಳೆದಂತೆ ಸಾಕ್ಷಿಗಳನ್ನು ಪತ್ತೆ ಹಚ್ಚಿದ್ದರು.
ಇದೀಗ 24 ಎಸಿಎಂಎಂ ಇನ್ಚಾರ್ಜ್ ಕೋರ್ಟ್ ಎಕಾನಾಮಿಕ್ ಆಫೇನ್ಸ್ ಕೋರ್ಟ್ನಲ್ಲಿ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ. ಈ ಕೊಲೆ ಕೇಸ್‌ನಲ್ಲಿ ಪವಿತ್ರಾ ಗೌಡಗೆ ಹಾಗೂ ಆಕೆಯ ಪಿಎ ಪವನ್ಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ