newsfirstkannada.com

BREAKING: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪವಿತ್ರಾ ಗೌಡ ಜೈಲು ಪಾಲು

Share :

Published June 20, 2024 at 4:13pm

Update June 20, 2024 at 4:22pm

    ಪವಿತ್ರಾ ಗೌಡಗೆ ಅಶ್ಲೀಲ ಫೋಟೋ ಕಳುಹಿಸಿದ್ದ ರೇಣುಕಾಸ್ವಾಮಿ

    ರೇಣುಕಾ ಕೊಲೆ ಕೇಸ್​ನಲ್ಲಿ ಪ್ರಮುಖ ಆರೋಪಿ ಪವಿತ್ರಾ ಗೌಡ

    ನಟಿ ಪವಿತ್ರಾ ಗೌಡ ಮತ್ತು ಆಕೆಯ ಪಿಎ ಪವನ್​ ಜೈಲು ಪಾಲು

ಬೆಂಗಳೂರು: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಕೇಸ್​ ಸಂಬಂಧ ನಟ ದರ್ಶನ್​ ಸೇರಿ ಒಟ್ಟು 13 ಆರೋಪಿಗಳನ್ನು 24 ಎಸಿಎಂಎಂ ಇನ್ಚಾರ್ಜ್ ಕೋರ್ಟ್ ಎಕಾನಾಮಿಕ್ ಆಫೇನ್ಸ್ ಕೋರ್ಟ್​ಗೆ ಹಾಜರು ಪಡಿಸಲಾಗಿತ್ತು.
ಇದೀಗ ಈ ಕೊಲೆ ಕೇಸ್​ ಸಂಬಂಧ ಎ1 ಪವಿತ್ರಾ ಗೌಡ ಜೈಲು ಪಾಲಾಗಿದ್ದಾರೆ.

ಇದನ್ನೂ ಓದಿ: ದರ್ಶನ್‌ ಗ್ಯಾಂಗ್ ವಿರುದ್ಧ 8 ಹೊಸ ಸೆಕ್ಷನ್‌ ಸೇರಿಸಿದ ಪೊಲೀಸರು.. ಯಾವ್ಯಾವ ಸೆಕ್ಷನ್‌ಗೆ ಎಷ್ಟು ವರ್ಷ ಶಿಕ್ಷೆ?

ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ. ಆತನಿಗೆ ಪಾಠ ಕಲಿಸಲು ದರ್ಶನ್​ ಮತ್ತು ಸಹಚರರು ರೇಣುಕಾಸ್ವಾಮಿಯನ್ನು ಅಪಹರಿಸಿ ಬೆಂಗಳೂರಿಗೆ ಕರೆತಂದು ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ ಪವಿತ್ರ ಗೌಡ ಎ1 ದರ್ಶನ್​ ಎ2 ಆಗಿದ್ದರು. ಹೀಗಾಗಿ ಈ ಕೊಲೆಯಲ್ಲಿ ಭಾಗಿಯಾಗಿದ್ದ ಎಲ್ಲ ಆರೋಪಿಗಳನ್ನು ಪೊಲೀಸ್ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಎಲ್ಲ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ದಿನ ಕಳೆದಂತೆ ಸಾಕ್ಷಿಗಳನ್ನು ಪತ್ತೆ ಹಚ್ಚಿದ್ದರು.

ಇದೀಗ 24 ಎಸಿಎಂಎಂ ಇನ್ಚಾರ್ಜ್ ಕೋರ್ಟ್ ಎಕಾನಾಮಿಕ್ ಆಫೇನ್ಸ್ ಕೋರ್ಟ್​ನಲ್ಲಿ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ. ಈ ಕೊಲೆ ಕೇಸ್​ನಲ್ಲಿ ಪವಿತ್ರಾ ಗೌಡಗೆ ಹಾಗೂ ಆಕೆಯ ಪಿಎ ಪವನ್​ಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪವಿತ್ರಾ ಗೌಡ ಜೈಲು ಪಾಲು

https://newsfirstlive.com/wp-content/uploads/2024/06/PAVITRA.jpg

Load More