/newsfirstlive-kannada/media/post_attachments/wp-content/uploads/2024/06/PAVITRA.jpg)
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಪವಿತ್ರಗೌಡ ಸೇರಿದಂತೆ ಒಟ್ಟು 13 ಆರೋಪಿಗಳ ಬಂಧನ ಆಗಿದೆ. ಬಂಧಿತರನ್ನು ತೀವ್ರ ತನಿಖೆಗೆ ಒಳಪಡಿಸಿರುವ ಪೊಲೀಸರು ಒಂದೊಂದೇ ವಿಚಾರವನ್ನು ಬಯಲಿಗೆ ಎಳೆಯುತ್ತಿದ್ದಾರೆ.
ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು, ಕೋರ್ಟ್​ಗೆ ಒಪ್ಪಿಸಿ 6 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದರು. ಈ ಅವಧಿಯಲ್ಲಿ ನಿನ್ನೆಯವರೆಗೆ ಸ್ಥಳ ಮಹಜರು ಸೇರಿದಂತೆ ಇತರೆ ವಿಚಾರಣೆಗಳು ಪೂರ್ಣಗೊಂಡಿವೆ. ಸ್ಥಳ ಮಹಜರು ಬಳಿಕ ಆರೋಪಿಗಳ ಹೇಳಿಕೆಯನ್ನು ಪೊಲೀಸರು ಪಡೆದುಕೊಂಡಿದ್ದಾರೆ.
ಇದನ್ನೂ ಓದಿ:ದರ್ಶನ್ ಕೇಸ್​​ನಲ್ಲಿ ಇನ್ನೂ ಮೂವರು ನಿಗೂಢ ನಾಪತ್ತೆ.. ಯಾರು ಅವರು..?
ಪವಿತ್ರ ಗೌಡ ಹೇಳಿದ್ದೇನು..?
ಮಾಹಿತಿಗಳ ಪ್ರಕಾರ.. ಪ್ರಕರಣದ ಮೊದಲ ಆರೋಪಿ ಪವಿತ್ರ ಗೌಡ ಪೊಲೀಸರಿಗೆ ನಡೆದ ವಿಚಾರಗಳ ಬಗ್ಗೆ ಹೇಳಿಕೆ ನೀಡಿದ್ದಾಳೆ. ನನಗೆ ರೇಣುಕಾಸ್ವಾಮಿ ಅಶ್ಲೀಲ ಫೋಟೊ ಹಾಗೂ ಮೆಸೇಜ್​ಗಳನ್ನು ಮಾಡುತ್ತಿದ್ದ. ಇದನ್ನು ನಾನು ಮನೆ ಕೆಲಸದವ ಪವನ್​​ಗೆ ಕಳುಹಿಸಿದ್ದೆ. ಅವನಿಗೆ ಕಳುಹಿಸುವ ಮೊದಲು ಈ ವಿಚಾರ ದರ್ಶನ್​​ಗೆ ಗೊತ್ತಾಗಬಾರದು ಎಂದು ಹೇಳಿದ್ದೆ. ದರ್ಶನ್​ಗೆ ಗೊತ್ತಾದರೆ ಏನಾದರೂ ಅನಾಹುತ ಆಗಬಹುದು ಅಂತಲೂ ಹೇಳಿದ್ದೆ. ನನಗೆ ಕೊಲೆ ಮಾಡ್ತಾರೆ ಎಂಬ ಸಣ್ಣ ಕಲ್ಪನೆಯೂ ಇರಲಿಲ್ಲ. ಅಶ್ಲೀಲ ಮೆಸೇಜ್ ಮಾಡಿದ್ನಲ್ಲಾ ಅಂತಾ ಚಪ್ಪಲಿಯಲ್ಲಿ ಹೊಡೆದು ವಾಪಸ್ ಆಗಿದ್ದೆ. ಕೊಲೆ ಮಾಡ್ತಾರೆ ಅಂದ್ರೆ ನಾನೇ ಕಂಪ್ಲೆಂಟ್ ಕೊಟ್ಟು ಸರಿ ಮಾಡಿಕೊಳ್ತಿದ್ದೆ ಎಂದು ಪೊಲೀಸರ ಮುಂದೆ ಕಣ್ಣೀರು ಇಟ್ಟಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ:ರೇಣುಕಾಸ್ವಾಮಿ ಸಾವಿಗೆ ಕಾರಣವಾಯ್ತಾ ಆ ಒಂದು ಕರೆ..? 20 ನಿಮಿಷ ಅಲ್ಲಿ ನಡೆದಿದ್ದೇನು..?
ಇದನ್ನೂ ಓದಿ:ಕೊಲೆ ಆರೋಪದ ಟೆನ್ಷನ್ ನಡುವೆ ದರ್ಶನ್​ಗೆ ಮತ್ತೊಂದು ಚಿಂತೆ.. ಠಾಣೆಯಲ್ಲಿ ಚಿಂತಾಕ್ರಾಂತ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ