/newsfirstlive-kannada/media/post_attachments/wp-content/uploads/2024/09/PDO_JOB.jpg)
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗ ಉದ್ಯೋಗ ಸೌಧ ಬೆಂಗಳೂರು ಇವರು ತಿದ್ದುಪಡಿ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಉಳಿಕೆ ಮೂಲ ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉಲ್ಲೇಖಿತ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್- ಸಿ ಹಾಗೂ ಗ್ರೂಪ್- ಬಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾದ ಅಧಿಸೂಚನೆಗಳಿಗೆ ಹಾಗೂ ಮುಂದಿನ 1 ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲ ಪ್ರವರ್ಗದ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ. ಇದು ಕೇವಲ ಈ ಹುದ್ದೆಗೆ ಮಾತ್ರ ಈ ಬಾರಿಗೆ ಮಾತ್ರ ಅನ್ವಯವಾಗುತ್ತದೆ.
ಶೈಕ್ಷಣಿಕ ಅರ್ಹತೆ: ಪಿಡಿಒ ಹುದ್ದೆಗಳಿಗೆ ಯಾವುದೇ ಪದವಿ (ಡಿಗ್ರಿ) ಪಾಸಾದವರು
ಪಿಡಿಒ ಉಳಿಕೆ ಮೂಲ ವೃಂದದ 150 ಹುದ್ದೆಗಳು
ಹೈದರಾಬಾದ್ ಕರ್ನಾಟಕ ವೃಂದದ 97 ಹುದ್ದೆಗಳು
ಒಟ್ಟು ಹುದ್ದೆಗಳು- 247
ಇದನ್ನೂ ಓದಿ:ಪದವೀಧರರಿಗೆ ಸರ್ಕಾರಿ ಕೆಲಸ.. ಸ್ಯಾಲರಿ ₹95,000; ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಯಾವುದು?
ಅಭ್ಯರ್ಥಿಗಳ ವಯೋಮಿತಿ
- ಅರ್ಜಿ ಸಲ್ಲಿಸಲು ಕನಿಷ್ಠ-18 ವರ್ಷಗಳು ಪೂರ್ಣವಾಗಿರಬೇಕು
- ಸಾಮಾನ್ಯ ವರ್ಗದವರಿಗೆ- 35 ವರ್ಷಗಳು ಇದ್ದಿದ್ದನ್ನ 38 ವರ್ಷಗಳು ಮಾಡಲಾಗಿದೆ.
- 2ಎ, 2ಬಿ, 3ಎ, 3ಬಿ, 38- 38 ವರ್ಷಗಳು ಇರುವುದನ್ನ 41 ವರ್ಷಕ್ಕೆ ಏರಿಕೆ ಮಾಡಿದೆ.
- ಎಸ್​​ಸಿ, ಎಸ್​ಟಿ, ಪ್ರವರ್ಗ1- 40 ವರ್ಷ ಇದ್ದಿದ್ದನ್ನ 43 ವರ್ಷಕ್ಕೆ ಏರಿಸಲಾಗಿದೆ.
ಅಭ್ಯರ್ಥಿಗಳಿಗೆ ವಿಶೇಷ ಸೂಚನೆ;
- ತಾಂತ್ರಿಕ ಕಾರಣದಿಂದ ಈ ಹಿಂದೆ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿ ಮಾಡಲು ಸಾಧ್ಯವಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು.
- ವಯೋಮಿತಿಯನ್ನು ಹೊರತು ಪಡಿಸಿ ಉಳಿದಂತೆ ಆಯೋಗದ ಈ ಮೊದಲು ಹೊರಡಿಸಿದ ಅಧಿಸೂಚನೆಯಲ್ಲಿರುವಂತೆ ಎಲ್ಲ ನಿಯಮಗಳು ಅನ್ವಯವಾಗುತ್ತವೆ.
- ಈಗಾಗಲೇ ಅಯೋಗದ ಅಂತರ್ಜಾಲದಲ್ಲಿ ಪ್ರಕಟಣೆ ಮಾಡಿರುವಂತೆ ಪಿಡಿಒ ಹುದ್ದೆಗಳ ಪರೀಕ್ಷಾ ದಿನಾಂಕಗಳಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ.
ಅರ್ಜಿ ಶುಲ್ಕ ಎಷ್ಟು ಇರುತ್ತದೆ..?
- ಸಾಮಾನ್ಯ ವರ್ಗದ ಅಭ್ಯರ್ಥಿಗಳು- ₹600
- ಇತರೆ ಹಿಂದುಳಿದ ಅಭ್ಯರ್ಥಿಗಳು- ₹300
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ- ₹50
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
ಕೆಪಿಎಸ್‌ಸಿ ವೆಬ್​ಸೈಟ್​ https://www.kpsc.kar.nic.in/ ಭೇಟಿ ನೀಡಿ ಅಪ್ಲೇ ಮಾಡಬಹುದು.
ಪಿಡಿಒ ಹುದ್ದೆಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ- ಸೆಪ್ಟೆಂಬರ್ 18, 2024
ಪಿಡಿಒ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ- ಅಕ್ಟೋಬರ್ 03, 2024
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ