/newsfirstlive-kannada/media/post_attachments/wp-content/uploads/2025/01/ESHWAR-KHANDRE-2.jpg)
ಬೆಂಗಳೂರು: ಕಾಂತಾರ-2, ಟಾಕ್ಸಿಕ್ ಸಿನಿಮಾ ತಂಡದ ವಿರುದ್ಧ ಅರಣ್ಯ ನಾಶ ಆರೋಪ ಕೇಳಿಬಂದಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಇನ್ಮುಂದೆ ಅರಣ್ಯದಲ್ಲಿ ಶೂಟ್ ಮಾಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅನುಮತಿ ಕಡ್ಡಾಯ ಎಂದು ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಯಾವುದೇ ಅರಣ್ಯ ಪ್ರದೇಶದಲ್ಲಿ ಇನ್ಮುಂದೆ ಸಿನಿಮಾ, ಸಾಕ್ಷ್ಯಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಚಿತ್ರತಂಡದ ಕೋರಿಕೆಗೆ ಅನುಗುಣವಾಗಿ ಸಾಧಕ, ಬಾಧಕಗಳನ್ನು ಪರಿಶೀಲಿಸಿ ಅಧಿಕಾರಿಗಳು ಅನುಮತಿ ನೀಡಬೇಕು ಎಂದು ಅರಣ್ಯ ಸಚಿವರು ತಿಳಿಸಿದ್ದಾರೆ.
ಇದನ್ನೂ ಓದಿ: BBK11; ಪ್ರೇಕ್ಷಕರ ಮುಂದೆ ತಮ್ಮ ಮನದಾಳ ಬಿಚ್ಚಿಟ್ಟ ಭವ್ಯ, ಮಂಜು, ರಜತ್ ಕಿಶನ್.. ಏನಂದ್ರು?
ಅರಣ್ಯ ಪ್ರದೇಶದಲ್ಲಿ ಚಲನಚಿತ್ರ, ದೂರದರ್ಶನ ಸಾಕ್ಷ್ಯಚಿತ್ರ, ಧಾರಾವಾಹಿ ಇತ್ಯಾದಿ ಚಿತ್ರೀಕರಣ ಮಾಡಲಾಗ್ತಿದೆ. ಇನ್ಮುಂದೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯ ಅನುಮತಿ ಪಡೆದು ಚಿತ್ರೀಕರಣ ಮಾಡಬೇಕು. ಶೂಟಿಂಗ್ ವ್ಯಾಪ್ತಿಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ನಿಗದಿತ ಶುಲ್ಕ ಕಟ್ಟಿಸಿಕೊಂಡು ಅನುಮತಿ ನೀಡುತ್ತಿದ್ದಾರೆ. ಇದಲ್ಲದೇ ಸ್ಥಳೀಯ ಮಟ್ಟದಲ್ಲೂ ಅಧಿಕಾರಿಗಳು ಅನುಮತಿ ನೀಡುತ್ತಿದ್ದಾರೆ. ಇದರಿಂದ ಅರಣ್ಯ ಪ್ರದೇಶದ ಗೌಪ್ಯ ಮಾಹಿತಿ ಹೊರ ಜಗತ್ತಿಗೆ ಲಭಿಸುವ ಸಂಭವ ಇದೆ.
ಇದು ಪರಿಸರ ಹಾಗೂ ಜೀವ ವೈವಿಧ್ಯಕ್ಕೂ ಧಕ್ಕೆ ತರುತ್ತದೆ. ಅರಣ್ಯ ವನ್ಯ ಜೀವಿ ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಪ್ರಕೃತಿ ಹಸ್ತಾಂತರಿಸಬೇಕು. ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಯಾವುದೇ ಬಗೆಯ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಸರ್ಕಾರದ ವತಿಯಿಂದ ಅನುಮತಿ ಪಡೆಯಲು ಸೂಕ್ತ ಎಂದು ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಇದನ್ನೂ ಓದಿ: 10 ಸಾವಿರಕ್ಕಿಂತ ಕಮ್ಮಿ ಬೆಲೆಗೆ 5G ಸ್ಮಾರ್ಟ್ ಫೋನ್ಗಳು.. ಮಿಸ್ ಮಾಡಬೇಡಿ!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ