/newsfirstlive-kannada/media/post_attachments/wp-content/uploads/2025/04/JAMMU.jpg)
ಹಾವೇರಿ: ಅನಂತನಾಗ್ ಜಿಲ್ಲೆಯ ಪಹಲ್ಗಾಮ್ದಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ಅಟ್ಟಹಾಸ ಮೆರೆದಿದ್ದಾರೆ. ಇದರಲ್ಲಿ ಕರ್ನಾಟಕದ ಶಿವಮೊಗ್ಗದ ವ್ಯಕ್ತಿಯೊಬ್ಬರು ಜೀವ ಕಳೆದುಕೊಂಡಿದ್ದರು. ಇದರ ಬೆನ್ನಲ್ಲೇ ಮತ್ತೊಬ್ಬ ಕನ್ನಡಿಗ, ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ.
ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಬಿ ಕೋಳಿವಾಡ ಅವರ ಸಂಬಂಧಿ ಆಗಿರುವ ಭರತ್ ಭೂಷಣ್ ಎನ್ನುವರು ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಇವರು ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನವರು ಆಗಿದ್ದಾರೆ. ಆದರೆ ಬೆಂಗಳೂರಿನಲ್ಲಿ ವಾಸವಾಗಿದ್ದರು. 3 ದಿನಗಳ ಹಿಂದಷ್ಟೇ ಜಮ್ಮು ಕಾಶ್ಮೀರಕ್ಕೆ ಪ್ರವಾಸಕ್ಕೆಂದು ಹೋಗಿದ್ದರು. ಆದರೆ ಇಂದು ಉಗ್ರರ ಮಾಡಿರುವ ಹೇಯ ಕೃತ್ಯದಿಂದ ಭರತ್ ಭೂಷಣ್ ಉಸಿರು ನಿಲ್ಲಿಸಿದ್ದಾರೆ.
ಇದನ್ನೂ ಓದಿ: 24 ಮಂದಿಯ ಜೀವ ತೆಗೆದ ಉಗ್ರರು.. ಕಾಶ್ಮೀರದಲ್ಲಿ ಭೀಕರ ದೃಶ್ಯ; ಪ್ರಧಾನಿ ಮೋದಿ ಹೇಳಿದ್ದೇನು?
[caption id="attachment_121001" align="alignnone" width="800"] ಶಿವಮೊಗ್ಗದ ಮಂಜುನಾಥ್[/caption]
ಇಂದು ಮಧ್ಯಾಹ್ನ ನಡೆದ ಭಯೋತ್ಪಾದಕರ ಗುಂಡಿನ ದಾಳಿಗೆ ಶಿವಮೊಗ್ಗದ ಮಂಜುನಾಥ್ ಪ್ರಾಣ ಕಳೆದುಕೊಂಡಿದ್ದಾರೆ. ಇವರು ಪ್ರವಾಸಕ್ಕೆಂದು ತಮ್ಮ ಕುಟುಂಬದ ಜೊತೆ ಜಮ್ಮುಕಾಶ್ಮೀರಕ್ಕೆ ಹೋಗಿದ್ದರು. ಪ್ರವಾಸದ ಖುಷಿಯಲ್ಲಿದ್ದ ಮಂಜುನಾಥ್ ಸೇರಿ ಕೆಲವರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದ ಘಟನೆಯಲ್ಲಿ ಮಂಜುನಾಥ್ ಪ್ರಾಣ ಕಳೆದುಕೊಂಡಿದ್ದರು.
ಕನ್ನಡಿಗರ ಮೇಲೆ ಉಗ್ರರು ದಾಳಿ ಮಾಡಿರುವುದನ್ನು ಸಿಎಂ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ. ಈ ಸಂಬಂಧ ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಸಿಎಂ ತಕ್ಷಣ ಕಾರ್ಯಪ್ರವತ್ತರಾಗುವಂತೆ ಸೂಚನೆ ನೀಡಿದ್ದಾರೆ. ಸಿಎಂ ಅವರ ಸೂಚನೆ ಮೇರೆಗೆ ಅಧಿಕಾರಿಗಳ ಒಂದು ತಂಡ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ.
ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ