/newsfirstlive-kannada/media/post_attachments/wp-content/uploads/2024/07/tumakuru.jpg)
ತುಮಕೂರು: ವೃತ್ತಿಯಲ್ಲಿ ವೈದ್ಯೆಯಾಗಿರುವ ಈಕೆ ಕನ್ನಡತಿ. ಈ ಚೆಲುವೆ ಹೆಸರು ಡಾ. ಶೃತಿ ಹೆಗಡೆ. ಅಮೆರಿಕಾದ ಫ್ಲೋರಿಡಾದಲ್ಲಿ ಜರುಗಿದ ಸೌಂದರ್ಯ ವಿಶ್ವ ಸುಂದರಿ PETITE 2024 ಸ್ಪರ್ಧೆಯಲ್ಲಿ ವಿಜೇತಳಾಗಿದ್ದಾರೆ.
ಇದನ್ನೂ ಓದಿ: ಕಲ್ಪನಾ ರೀ ಕ್ರಿಯೇಟ್ ಮಾಡಿದ ಕಿರುತೆರೆ ನಟಿ; ರಜಿನಿ ಮಿನುಗುತಾರೆ ವಿಡಿಯೋಗೆ ನೆಟ್ಟಿಗರು ಫಿದಾ!
ಡಾ.ಶೃತಿ ಹೆಗಡೆ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮುಂಡಿಗೆಸರದ ಮೂಲದವರು. ಮುಂಡಿಗೆಸರ ಅಜ್ಜೊರಮನೆ ಕುಟುಂಬದವರಾದ ಕೃಷ್ಣ ಹೆಗಡೆ, ಕಮಲಾ ದಂಪತಿಯ ಪುತ್ರಿ ಡಾ.ಶೃತಿ ಹೆಗಡೆ. ಹುಬ್ಬಳ್ಳಿಯಲ್ಲಿ ನೆಲೆಸಿರುವ ಈ ಯುವತಿ ತುಮಕೂರಿನ ಶ್ರೀದೇವಿ ಮೆಡಿಕಲ್ ಕಾಲೇಜಿನಲ್ಲಿ ಚರ್ಮ ರೋಗ ತಜ್ಞೆಯಾಗಿ ಎಂ.ಡಿ. ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅಮೆರಿಕಾದ ಫ್ಲೋರಿಡಾದಲ್ಲಿ ವಿಶ್ವ ಸುಂದರಿಯಾಗಿ ಹೊರಹೊಮ್ಮಿದ್ದಾಳೆ.
/newsfirstlive-kannada/media/post_attachments/wp-content/uploads/2024/07/tumakuru1.jpg)
ಶೃತಿ ಈ ಮೊದಲು 2018ರಲ್ಲಿ ಮಿಸ್ ಕರ್ನಾಟಕ ರನ್ನರ್ ಅಪ್, ಮಿಸ್ ಸೌತ್ ಇಂಡಿಯಾ ವಿಜೇತಳಾಗಿದ್ದರು. 2023ರಲ್ಲಿ ಮಿಸ್ ಏಷ್ಯಾ ಇಂಟರ್ ನ್ಯಾಷನಲ್ ಇಂಡಿಯಾ ಪ್ರಶಸ್ತಿ ಗೆದ್ದಿದ್ದ ಈಕೆ ಇದೀಗ ಕಳೆದ ಜೂನ್‌ನಲ್ಲಿ ಅಮೆರಿಕಾದಲ್ಲಿ ನಡೆದ ವಿಶ್ವ ಸುಂದರಿ (PETITE) 2024ರ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.
/newsfirstlive-kannada/media/post_attachments/wp-content/uploads/2024/07/tumakuru3.jpg)
ಅಮೆರಿಕಾದ ಫ್ಲೋರಿಡಾದಲ್ಲಿ ಕಳೆದ ಜೂ.6 ರಿಂದ 10ರವರೆಗೆ ಆಯೋಜಿಸಲಾಗಿದ್ದ ಸ್ಪರ್ಧೆಯಲ್ಲಿ ಭಾರತ ಸೇರಿದಂತೆ ಒಟ್ಟು 40 ದೇಶಗಳ ಸುಂದರಿಯರು ಪೈಪೋಟಿಯಲ್ಲಿದ್ದರು. ರಾಷ್ಟ್ರೀಯ ಉಡುಗೆ, ಈಜು ಉಡುಗೆ, ಪ್ರಶ್ನೋತ್ತರ, ವೈಯಕ್ತಿಕ ಸಂದರ್ಶನ ಮುಂತಾದ ವಿವಿಧ ಸುತ್ತುಗಳಲ್ಲಿ ಸ್ಪರ್ಧೆ ನಡೆದಿತ್ತು.
/newsfirstlive-kannada/media/post_attachments/wp-content/uploads/2024/07/tumakuru2.jpg)
ಈ ಎಲ್ಲದರಲ್ಲೂ ಉತ್ತಮ ಪ್ರದರ್ಶನ ನೀಡಿ, ಕೊನೆಗೆ ಡಾ.ಶೃತಿ ಹೆಗಡೆ ಗೆಲುವು ಸಾಧಿಸಿದ್ದಾರೆ. ಹುಬ್ಬಳ್ಳಿಯಲ್ಲಿಯೇ ಎಮ್.ಬಿ.ಬಿ.ಎಸ್. ಪೂರೈಸಿರುವ ಡಾ.ಶೃತಿ ಹೆಗಡೆ, ಚರ್ಮ ರೋಗ ತಜ್ಞೆಯಾಗುವ ಹಂಬಲದಿಂದ ತುಮಕೂರಿನ ಶ್ರೀದೇವಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅಂತಿಮ ವರ್ಷದ ಎಂ.ಡಿ. ಸ್ನಾತಕೊತ್ತರ ಪದವಿ ಅಧ್ಯಯನ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಮೈ ಚಳಿ ಬಿಟ್ಟು ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡ ನಿವೇದಿತಾ ಗೌಡ; ವಿಡಿಯೋ ಸಖತ್ ವೈರಲ್!
ವೃತ್ತಿಯಲ್ಲಿ ವೈದ್ಯೆಯಾಗಿದ್ದರು ಈಕೆ ಭರತನಾಟ್ಯ ಕಲಾವಿದೆಯಾಗಿ, ದುಬೈ, ಮಾಲ್ಡೀವ್ಸ್, ಭೂತಾನ್ ಸೇರಿದಂತೆ ಅನೇಕ ದೇಶಗಳಲ್ಲಿ ಪ್ರದರ್ಶನ ನೀಡಿದ್ದಾರೆ. ಈಗಾಗಲೇ ಕೆಲವು ಕನ್ನಡ ಧಾರಾವಾಹಿ, ಕನ್ನಡ ಚಲನಚಿತ್ರಗಳು ಸೇರಿದಂತೆ ವೆಬ್ ಸಿರೀಸ್‌ನಲ್ಲಿ ನಟಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us