/newsfirstlive-kannada/media/post_attachments/wp-content/uploads/2024/09/DARSHAN_BALLARY_JAIL.jpg)
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೇಸ್​ನಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಈಗಾಗಲೇ ದರ್ಶನ್ ವಿರುದ್ಧ ಪೊಲೀಸರು ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. ಬೆನ್ನಲ್ಲೇ ದರ್ಶನ್ ಪರ ವಕೀಲರು ಪ್ರಕರಣಕ್ಕೆ ಹೊಸ ಟ್ವಿಸ್ಟ್​ ಕೊಡಲು ಮುಂದಾಗಿದ್ದಾರೆ.
ದರ್ಶನ್ ವಿರುದ್ಧ ಪೊಲೀಸರು ಸೂಕ್ತ ತನಿಖೆ ಮಾಡಿ ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದ್ದಾರೆ. ಆದರೆ ಇದರಲ್ಲಿನ ಗೌಪ್ಯ ಮಾಹಿತಿಗಳು ಬಹಿರಂಗ ಪಡಿಸಬಾರದು ಎಂದು ದರ್ಶನ್ ಪರ ವಕೀಲರು ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಚಾರ್ಜ್​ಶೀಟ್​ನಲ್ಲಿ ಮಾಹಿತಿಗಳನ್ನು ಸೋರಿಕೆ ಮಾಡದಂತೆ ನಿರ್ಬಂಧ ಕೋರಿ ದರ್ಶನ್ ಪರ ವಕೀಲರು ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ ವಕೀಲರು ಅರ್ಜಿ ಸಲ್ಲಿಕೆ ಮಾಡಿದ್ದಾರೆ.
/newsfirstlive-kannada/media/post_attachments/wp-content/uploads/2024/09/DARSHAN_BALLARY_5.jpg)
ರೇಣುಕಾಸ್ವಾಮಿ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು ದರ್ಶನ್ ಸೇರಿ 17 ಆರೋಪಿಗಳ ವಿರುದ್ಧ ಪೊಲೀಸರು 3,991 ಪುಟಗಳ ಚಾರ್ಜ್​​ಶೀಟ್ ಸಲ್ಲಿಸಿದ್ದಾರೆ. 3991 ಪುಟಗಳ ಚಾರ್ಜ್​​ಶೀಟ್ ಬಗ್ಗೆ ಕೇಳಿ ಆರೋಪಿ ದರ್ಶನ್ ಶಾಕ್ ಆಗಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ ತೂಗುದೀಪ ಬಳ್ಳಾರಿ ಜೈಲಿಗೆ ಭೇಟಿ ನೀಡಿದ್ದರು. ಈ ವೇಳೆ ಜಾಮೀನು ಅರ್ಜಿಗೆ ಸಹಿ ಹಾಕಿಸಿಕೊಂಡಿದ್ದರು. ಇದರ ಬೆನ್ನಲ್ಲೇ ದರ್ಶನ್ ಪರ ವಕೀಲರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us