ಆರೋಪಿಗಳ ವಿರುದ್ಧ ತನಿಖೆ ಪೂರ್ಣಗೊಳಿಸಿದ ಪೊಲೀಸರು
ಬೆಂಗಳೂರಿನಿಂದ ಬಳ್ಳಾರಿ ಜೈಲಿಗೆ ನಟ ದರ್ಶನ್ ಸ್ಥಳಾಂತರ
ದರ್ಶನ್ ಪರ ವಕೀಲರಿಂದ ಪ್ರಕರಣಕ್ಕೆ ಹೊಸದೊಂದು ಟ್ವಿಸ್ಟ್
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೇಸ್ನಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಈಗಾಗಲೇ ದರ್ಶನ್ ವಿರುದ್ಧ ಪೊಲೀಸರು ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಬೆನ್ನಲ್ಲೇ ದರ್ಶನ್ ಪರ ವಕೀಲರು ಪ್ರಕರಣಕ್ಕೆ ಹೊಸ ಟ್ವಿಸ್ಟ್ ಕೊಡಲು ಮುಂದಾಗಿದ್ದಾರೆ.
ದರ್ಶನ್ ವಿರುದ್ಧ ಪೊಲೀಸರು ಸೂಕ್ತ ತನಿಖೆ ಮಾಡಿ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಆದರೆ ಇದರಲ್ಲಿನ ಗೌಪ್ಯ ಮಾಹಿತಿಗಳು ಬಹಿರಂಗ ಪಡಿಸಬಾರದು ಎಂದು ದರ್ಶನ್ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಚಾರ್ಜ್ಶೀಟ್ನಲ್ಲಿ ಮಾಹಿತಿಗಳನ್ನು ಸೋರಿಕೆ ಮಾಡದಂತೆ ನಿರ್ಬಂಧ ಕೋರಿ ದರ್ಶನ್ ಪರ ವಕೀಲರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ ವಕೀಲರು ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಇದನ್ನೂ ಓದಿ: ದರ್ಶನ್ ಭೇಟಿ ಮಾಡಲು ಬಳ್ಳಾರಿ ಜೈಲಿಗೆ ಬಂದ ಪತ್ನಿ ವಿಜಯಲಕ್ಷ್ಮಿ.. ಕೈಯಲ್ಲಿ ಇದ್ದಿದ್ದು ಏನು?
ರೇಣುಕಾಸ್ವಾಮಿ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು ದರ್ಶನ್ ಸೇರಿ 17 ಆರೋಪಿಗಳ ವಿರುದ್ಧ ಪೊಲೀಸರು 3,991 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. 3991 ಪುಟಗಳ ಚಾರ್ಜ್ಶೀಟ್ ಬಗ್ಗೆ ಕೇಳಿ ಆರೋಪಿ ದರ್ಶನ್ ಶಾಕ್ ಆಗಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ ತೂಗುದೀಪ ಬಳ್ಳಾರಿ ಜೈಲಿಗೆ ಭೇಟಿ ನೀಡಿದ್ದರು. ಈ ವೇಳೆ ಜಾಮೀನು ಅರ್ಜಿಗೆ ಸಹಿ ಹಾಕಿಸಿಕೊಂಡಿದ್ದರು. ಇದರ ಬೆನ್ನಲ್ಲೇ ದರ್ಶನ್ ಪರ ವಕೀಲರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ