newsfirstkannada.com

ಲೋಕಸಭಾ ಎಲೆಕ್ಷನ್​​ನಲ್ಲಿ ಹೆಚ್ಚು ಸ್ಥಾನ ಗೆಲ್ಲದಿದ್ದಕ್ಕೆ ಗ್ಯಾರಂಟಿ ನಿಲ್ಲಿಸೋ ಪ್ಲಾನ್ -BY ವಿಜಯೇಂದ್ರ

Share :

Published June 17, 2024 at 1:15pm

  ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ನಾಯಕರು

  ವಿಜಯೇಂದ್ರ, ಅಶೋಕ್​ ನೇತೃತ್ವದಲ್ಲಿ ನಡೀತ್ತಿರೋ ಪ್ರತಿಭಟನೆ

  ಪೆಟ್ರೋಲ್​, ಡೀಸೆಲ್​ ದರ ಎಷ್ಟು ರೂ. ಹೆಚ್ಚಳ ಮಾಡಲಾಗಿದೆ

ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಇಂದು ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಕೈಗೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ.

ಇದನ್ನೂ ಓದಿ: ಭೀಕರ ರೈಲು ದುರಂತದಲ್ಲಿ ಉಸಿರು ಚೆಲ್ಲಿದ 5 ಪ್ರಯಾಣಿಕರು.. 25 ಮಂದಿ ಗಂಭೀರ; ಸಾವಿನ ಸಂಖ್ಯೆ ಹೆಚ್ಚಾಗೋ ಸಾಧ್ಯತೆ

ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ಪ್ರತಿಭಟನೆ ಮಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ಕಿಡಿ ಕಾರುತ್ತಿದ್ದಾರೆ. ಪ್ರತಿಭಟನೆಯಲ್ಲಿ ಶಾಸಕರಾದ ಭೈರತಿ ಬಸವರಾಜ್, ಎಂಎಲ್​ಸಿ ರವಿ ಕುಮಾರ್ ಹಾಗೂ ಸಿ.ಟಿ ರವಿ ಸೇರಿದಂತೆ ಇನ್ನು ಕೆಲ ನಾಯಕರು ಭಾಗಿಯಾಗಿದ್ದಾರೆ. ರಾಜ್ಯ ಸರ್ಕಾರದ ನಿರ್ಧಾರದಿಂದ ಪೆಟ್ರೋಲ್, ಡೀಸೆಲ್ ದರದಲ್ಲಿ ಏರಿಕೆ ಮಾಡಿದ ಹಿನ್ನೆಲೆಯಲ್ಲಿ ಪೆಟ್ರೋಲ್ ಬೆಲೆ 3 ರೂಪಾಯಿ ಹಾಗೂ ಡೀಸೆಲ್ ಬೆಲೆ 3.50 ಪೈಸೆ ರೂಪಾಯಿ ಹೆಚ್ಚಳವಾಗಿದೆ. ಈ ಹೆಚ್ಚಳವನ್ನು ಖಂಡಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ.

ಇದನ್ನೂ ಓದಿ: ಮಾನವೀಯತೆ ಮೆರೆದ ಡಾ.CN ಮಂಜುನಾಥ್.. ನೂತನ ಸಂಸದರ ಕಾರ್ಯಕ್ಕೆ ಭಾರೀ ಮೆಚ್ಚುಗೆ

ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು, ರಾಜ್ಯ ಸರ್ಕಾರ ತೆಗೆದುಕೊಂಡ ಆತುರದ ನಿರ್ಧಾರ ಅವಿವೇಕವಾಗಿದೆ. ಇದರ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಏಕಾಏಕಿ ನಿರ್ಧಾರ ತೆಗೆದುಕೊಂಡಿದ್ದು ಎಲ್ಲರಿಗೂ ಆಘಾತವಾಗಿದೆ. ಕಾಂಗ್ರೆಸ್​ ಎಲೆಕ್ಷನ್​​ನಲ್ಲಿ ಹೆಚ್ಚಿನ ಲೋಕಸಭಾ ಸ್ಥಾನಗಳನ್ನು ಗೆಲ್ಲದಿದ್ದಕ್ಕೆ ಗ್ಯಾರಂಟಿ ನಿಲ್ಲಿಸುವ ಪ್ಲಾನ್ ನಡೀತಿದೆ. ಚುನಾವಣೆಯಿಂದ ಡಿಸಿಎಂ ಡಿ.ಕೆ ಶಿವಕುಮಾರ್​ಗೂ ಮುಖಭಂಗ ಆಗಿದೆ. ಸಿದ್ದರಾಮಯ್ಯ ಬಂದ ಒಂದೇ ವರ್ಷಕ್ಕೆ ರಾಜ್ಯದ ಬೊಕ್ಕಸದಲ್ಲಿ ಏನು ಇಲ್ಲ ಎಂದು ಹೇಳಿದ್ದಾರೆ.

ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಚಾಮರಾಜನಗರದಲ್ಲೂ ಬಿಜೆಪಿ ಮುಖಂಡರು ಪ್ರತಿಭಟನೆ ಮಾಡಿದರು. ಚಾಮರಾಜೇಶ್ವರ ಸ್ವಾಮಿ ದೇವಾಲಯದಿಂದ ಭುವನೇಶ್ವರಿ ಸರ್ಕಲ್​​ವರೆಗೆ ತಳ್ಳುವ ಗಾಡಿಯ ಮೇಲೆ ಸ್ಕೂಟರ್ ಇರಿಸಿ ಮೆರವಣಿಗೆ ಮಾಡುವ ಮೂಲಕ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಲೋಕಸಭಾ ಎಲೆಕ್ಷನ್​​ನಲ್ಲಿ ಹೆಚ್ಚು ಸ್ಥಾನ ಗೆಲ್ಲದಿದ್ದಕ್ಕೆ ಗ್ಯಾರಂಟಿ ನಿಲ್ಲಿಸೋ ಪ್ಲಾನ್ -BY ವಿಜಯೇಂದ್ರ

https://newsfirstlive.com/wp-content/uploads/2024/06/BJP_PROTEST.jpg

Load More