ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ
ಹೈಕೋರ್ಟ್ ಮೆಟ್ಟಿಲೇರಿದ ಫ್ರೀ ಬಸ್ ಸ್ಕೀಮ್
ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಬಿಗ್ ಶಾಕ್..!
ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಚುನಾವಣೆ ಮುನ್ನ ನೀಡಿದ್ದ ಭರವಸೆಯನ್ನು ಉಳಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಐದು ಗ್ಯಾರಂಟಿಗಳನ್ನು ಜಾರಿಗೆ ಮಾಡಲು ಮುಂದಾಗಿದ್ದಾರೆ. ಈಗಾಗಲೇ ಬಹುತೇಕ ಗ್ಯಾರಂಟಿಗಳ ಜಾರಿಯಾಗಿದ್ದು, ಈ ಪೈಕಿ ಶಕ್ತಿ ಯೋಜನೆಯೂ ಒಂದು.
ಸದ್ಯ ಇಡೀ ರಾಜ್ಯಾದ್ಯಂತ ಶಕ್ತಿ ಯೋಜನೆಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಫ್ರೀ ಬಸ್ನಲ್ಲಿ ರಾಜ್ಯದ ಮಹಿಳೆಯರು ತಮಗೆ ಬೇಕಾದ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಿದ್ದಾರೆ. ಇದರ ಪರಿಣಾಮ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರು ತುಂಬಿ ತುಳುಕುತ್ತಿದ್ದಾರೆ. ಹೀಗಿರುವಾಗಲೇ ಶಕ್ತಿ ಯೋಜನೆ ವಿರುದ್ಧ ಕಾನೂನು ವಿದ್ಯಾರ್ಥಿಗಳು ಕೋರ್ಟ್ಗೆ ಹೋಗಿದ್ದಾರೆ.
ಪಿಐಎಲ್ನಲ್ಲಿ ಏನಿದೆ?
ಶಕ್ತಿ ಯೋಜನೆ ಅವ್ಯವಸ್ಥೆಯನ್ನು ಪ್ರಶ್ನಿಸಿ ಕಾನೂನು ವಿದ್ಯಾರ್ಥಿಗಳು ಹೈಕೋರ್ಟ್ಗೆ ಪಿಐಎಲ್ ಸಲ್ಲಿಸಿದ್ದಾರೆ. ಈ ಸ್ಕೀಮ್ನಿಂದ ಸರ್ಕಾರಿ ಬಸ್ಗಳಲ್ಲಿ ಜನ ದಟ್ಟಣೆ ಹೆಚ್ಚಿದೆ. ಸೀಟಿಗಾಗಿ ಹೊಡೆದಾಟ ನಡೆಯುತ್ತಿದೆ. ಹಿರಿಯ ನಾಗರಿಕರು, ಮಕ್ಕಳು ಬಸ್ ಹತ್ತಲಾಗುತ್ತಿಲ್ಲ. ಕೆಲವೆಡೆ ಬಸ್ ಹತ್ತಲಾಗದೇ ವಿದ್ಯಾರ್ಥಿಗಳು ಬಿದ್ದ ಘಟನೆ ನಡೆದಿವೆ. ಶಾಲಾ ಕಾಲೇಜು ಪರೀಕ್ಷೆಗಳಿಗೆ ಸರಿಯಾದ ವೇಳೆಗೆ ಹೋಗಲಾಗುತ್ತಿಲ್ಲ. ಒಂದೇ ವಾರದಲ್ಲಿ ತೆರಿಗೆದಾರರ 100 ಕೋಟಿ ಹಣ ಬಳಕೆಯಾಗಿದೆ. ಸರ್ಕಾರ ಶಕ್ತಿ ಯೋಜನೆಗೆ ಬಳಕೆಯಾಗಿದೆ ಎಂದು ಉಲ್ಲೇಖಿಸಿದ್ದಾರೆ ಎಂದು ಪಿಐಎಲ್ನಲ್ಲಿ ಉಲ್ಲೇಖಿಸಲಾಗಿದೆ.
ವರ್ಷಕ್ಕೆ 3200 ರಿಂದ 3400 ಕೋಟಿ ರೂಪಾಯಿ ನಷ್ಟವಾಗಲಿದೆ. ಟಿಕೆಟ್ ಖರೀದಿಸಿದವರಿಗೆ ಶೇ.50 ರಷ್ಟು ಸೀಟ್ ಮೀಸಲಿಡಬೇಕು. ದೂರದ ಊರುಗಳಿಗೆ ನಿಂತು ಪ್ರಯಾಣಿಸಲು ಅವಕಾಶ ನೀಡಬಾರದು. ಮಕ್ಕಳು, ವೃದ್ಧರ ಬಸ್ ಪ್ರವೇಶಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ