newsfirstkannada.com

ಭೂತಾನ್‌ನಲ್ಲಿ ಪ್ರಧಾನಿ ಮೋದಿಗೆ ಅತ್ಯುನ್ನತ ಗೌರವ.. ಇತಿಹಾಸದಲ್ಲೇ ಇದೇ ಮೊದಲು; ಏನಿದರ ಸ್ಪೆಷಲ್‌?

Share :

Published March 22, 2024 at 8:04pm

Update March 22, 2024 at 11:08pm

  ‘ಆರ್ಡರ್ ಆಫ್ ದಿ ಡ್ರಕ್ ಗ್ಯಾಲ್ಲೊ’ ಅತ್ಯುನ್ನತ ನಾಗರಿಕ ಪ್ರಶಸ್ತಿ ಸ್ವೀಕಾರ

  ಪ್ರಧಾನಿ ಮೋದಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿದ ಭೂತಾನ್ ದೊರೆ

  ಪ್ರಶಸ್ತಿ ಪಡೆದುಕೊಂಡ ಮೊದಲ ವಿದೇಶಿ ಸರ್ಕಾರದ ಮುಖ್ಯಸ್ಥರಾದ ಮೋದಿ

ಥಿಂಪೂ: ಪ್ರಧಾನಿ ನರೇಂದ್ರ ಮೋದಿ ಅವರು ‘ಆರ್ಡರ್ ಆಫ್ ದಿ ಡ್ರಕ್ ಗ್ಯಾಲ್ಲೊ’ ಎಂಬ ಭೂತಾನ್‌ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಭೂತಾನ್‌ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಭೂತಾನ್ ದೊರೆ ಜಿಗ್ಡೆ ಖೇಸರ್ ನಾಂಗೇಲ್ ವಾಂಗ್‌ಚುಕ್ ಅವರು ನೀಡಿ ಗೌರವಿಸಿದ್ದಾರೆ. ಪ್ರಧಾನಿ ಮೋದಿ ಅವರು ಈ ಪ್ರಶಸ್ತಿಯನ್ನು ಪಡೆದುಕೊಂಡ ಮೊದಲ ವಿದೇಶಿ ಸರ್ಕಾರದ ಮುಖ್ಯಸ್ಥರಾಗಿದ್ದಾರೆ.

ಇದನ್ನು ಓದಿ: ನಿಮಗೂ ರಾಕಿಂಗ್​ ಸ್ಟಾರ್​​ ಯಶ್​ ಸಿನಿಮಾದಲ್ಲಿ ನಟಿಸಲು ಆಸೆ ಇದೆಯೇ? ಹಾಗಾದ್ರೆ ಈ ಸ್ಟೋರಿ ಓದಿ!

ಈ ಪ್ರಶಸ್ತಿಯನ್ನು ಪಡೆಯುವ ಮೂಲಕ ಮೊದಲ ಭೂತನ್ ದೇಶದ ಹೊರಗಿನ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಉಭಯ ನಾಯಕರು ರಾಜಧಾನಿಯಲ್ಲಿ ಭೇಟಿಯಾದ ನಂತರ ಭೂತಾನ್‌ನ ರಾಜ ಜಿಗ್ಮೆ ಅವರು ಪಿಎಂ ಮೋದಿಯವರಿಗೆ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ ಪ್ರಶಸ್ತಿಯನ್ನು ನೀಡಿದ್ದಾರೆ. ಇನ್ನೂ ಆರ್ಡರ್ ಆಫ್ ದ ಡ್ರುಕ್ ಗ್ಯಾಲ್ಪೋ ಅನ್ನು ಜೀವಮಾನದ ಸಾಧನೆಗಾಗಿ ನೀಡುವ ಪ್ರಶಸ್ತಿಯಾಗಿ ಸ್ಥಾಪಿಸಲಾಯಿತು. ಇದು ಭೂತಾನ್‌ನಲ್ಲಿ ಅತ್ಯುನ್ನತ ಗೌರವವಾಗಿದೆ.

ಭೂತಾನ್‌ನ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತಾಡಿದ ಪ್ರಧಾನಿ ಮೋದಿ, ಈ ಗೌರವ ನನ್ನ ವೈಯಕ್ತಿಕ ಸಾಧನೆಯಲ್ಲ. ಇದು ಭಾರತ ಮತ್ತು 140 ಕೋಟಿ ಭಾರತೀಯರ ಗೌರವ. ಭೂತಾನ್‌ನ ಈ ಮಹಾನ್ ಭೂಮಿಯಲ್ಲಿರುವ ಎಲ್ಲಾ ಭಾರತೀಯರ ಪರವಾಗಿ ನಾನು ಈ ಗೌರವವನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ ಮತ್ತು ಈ ಗೌರವಕ್ಕಾಗಿ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಭೂತಾನ್‌ನಲ್ಲಿ ಪ್ರಧಾನಿ ಮೋದಿಗೆ ಅತ್ಯುನ್ನತ ಗೌರವ.. ಇತಿಹಾಸದಲ್ಲೇ ಇದೇ ಮೊದಲು; ಏನಿದರ ಸ್ಪೆಷಲ್‌?

https://newsfirstlive.com/wp-content/uploads/2024/03/pm-modi-2024-03-22T192105.584.jpg

Load More