HD ದೇವೇಗೌಡರ ಹುಟ್ಟುಹಬ್ಬ ಸಂಭ್ರಮ; ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರಿಂದ ವಿಶ್​

author-image
Bheemappa
Updated On
HD ದೇವೇಗೌಡರ ಹುಟ್ಟುಹಬ್ಬ ಸಂಭ್ರಮ; ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರಿಂದ ವಿಶ್​
Advertisment
  • ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಏನೆಂದು ವಿಶ್ ಮಾಡಿದರು?
  • ತಂದೆಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಹೆಚ್.ಡಿ.ಕುಮಾರಸ್ವಾಮಿ
  • ಈಗ ಹೆಚ್​.ಡಿ ದೇವೇಗೌಡ ಅವರು ಎಷ್ಟನೇ ವರ್ಷಕ್ಕೆ ಕಾಲಿಟ್ಟಿದ್ದಾರೆ?

ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು 93ನೇ ವಸಂತಕ್ಕೆ ಪದಾರ್ಪಣೆ ಮಾಡಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಹೆಚ್.ಡಿ ದೇವೇಗೌಡರಿಗೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಶುಭಾಶಯಗಳು ಕೋರುತ್ತಿದ್ದಾರೆ.

publive-image

ಪ್ರಧಾನಿ ಮೋದಿಯವರು ತಮ್ಮ ಅಧಿಕೃತ ಎಕ್ಸ್​ ಖಾತೆಯ ಮೂಲಕ ಹೆಚ್.ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ಸಾರ್ವಜನಿಕ ಸೇವೆಗಾಗಿ ಎಲ್ಲೆಡೆ ಗೌರವಾನ್ವಿತರಾಗಿದ್ದಾರೆ. ತಮ್ಮ ಮುತ್ಸದ್ದಿತನ ಹಾಗೂ ಜನರ ಸೇವೆಗಾಗಿ ಅವರಲ್ಲಿರುವ ಉತ್ಸಾಹ ಮೆಚ್ಚುವಂತಹದ್ದು. ಹಲವಾರು ವಿಷಯಗಳ ಬಗ್ಗೆ ಕುರಿತು ಅವರ ಬುದ್ಧಿವಂತಿಕೆ, ಒಳನೋಟಗಳು ಶಕ್ತಿಯ ಮೂಲವಾಗಿವೆ. ಅವರಿಗೆ ದೀರ್ಘ, ಆರೋಗ್ಯಕರ ಜೀವನ ಕರುಣಿಸಲಿ ಅಂತ ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ಎಕ್ಸ್​​ನಲ್ಲಿ ಶುಭಾಶಯ ಕೋರಿದ್ದಾರೆ. ನಾಡಿನ ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿಗಳು ಆದ ಹೆಚ್.ಡಿ. ದೇವೇಗೌಡ ಅವರಿಗೆ ಜನ್ಮದಿನದ ಶುಭಾಶಯಗಳು. ಮತ್ತಷ್ಟು ಕಾಲ ತಮಗೆ ಉತ್ತಮ ಆರೋಗ್ಯ ಮತ್ತು ಆಯಸ್ಸನ್ನು ದೇವರು ಕರುಣಿಸಲೆಂದು ಹಾರೈಸುತ್ತೇನೆ ಎಂದು ವಿಶ್ ಮಾಡಿದ್ದಾರೆ.

ಇನ್ನು ಕೇಂದ್ರ ಸಚಿವ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ತಂದೆಯವರಿಗೆ ಭಕ್ತಿಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ. ಪೂಜ್ಯ ತಂದೆಯವರು ನನ್ನ ಶಕ್ತಿ, ನನ್ನ ಧೈರ್ಯ, ನನ್ನ ಸ್ಫೂರ್ತಿ ಆಗಿದ್ದಾರೆ. ಅವರ ಸಂಘರ್ಷದ ಹಾದಿ, ಸಾಧನೆ, ಸೇವಾ ತತ್ಪರತೆ ನನ್ನ ಮೇಲೆ ಅಗಾಧ ಪ್ರಭಾವ ಬೀರಿದೆ. ಇಡೀ ಬದುಕನ್ನು ರಾಷ್ಟ್ರ ಸೇವೆಗೆ ಸಮರ್ಪಿಸಿರುವ ಈ ಮಹಾನ್ ನಾಯಕನ ಕುಡಿಯಾಗಿ ಹುಟ್ಟಿರುವುದು ನನ್ನ ಜನ್ಮಜನ್ಮದ ಸುಕೃತ. ಆ ಭಗವಂತ ನನ್ನ ತಂದೆಯವರಿಗೆ ಇನ್ನೂ ಹೆಚ್ಚಿನ ಆಯುರಾಗ್ಯ ಕರುಣಿಸಲಿ. ಸುದೀರ್ಘ ಕಾಲ ನಮಗೆಲ್ಲಾ ಮಾರ್ಗದರ್ಶನ ಮಾಡಿ, ಜನಸೇವೆ ಮಾಡುವ ಚೈತನ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:RCB ಪ್ಲೇ ಆಫ್ ಸುಲಭವಲ್ಲ, ಮತ್ತಷ್ಟು ಕಷ್ಟ ಕಷ್ಟ.. 5 ಟೀಮ್​ಗಳ ಪಾಯಿಂಟ್ಸ್​ ಹೇಗಿದೆ​?

publive-image

ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಹೆಚ್.ಡಿ ದೇವೇಗೌಡರಿಗೆ ಪ್ರಧಾನಮಂತ್ರಿ, ಮುಖ್ಯಮಂತ್ರಿಗಳಷ್ಟೇ ಅಲ್ಲ, ರಾಜಕೀಯ ಗಣ್ಯರು, ಪಕ್ಷದ ಕಾರ್ಯಕರ್ತರು, ಜನರು, ಅಭಿಮಾನಿಗಳು ವಿಶ್ ಮಾಡುತ್ತಿದ್ದಾರೆ. ಇನ್ನು ಬೆಂಗಳೂರಿನಲ್ಲಿ ವಿವಿಧ ವಿಭಾಗಗಳ ಅಧ್ಯಕ್ಷರು, ವಾರ್ಡ್ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.


">May 18, 2025

ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment