newsfirstkannada.com

ನೀರಜ್ ಚೋಪ್ರಾಗೆ ಶುಭಾಶಯಗಳ ಮಹಾಪೂರ.. ಚಿನ್ನದ ಹುಡುಗನ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

Share :

28-08-2023

    ಮಗನ ಗೆಲುವಿಗೆ ಸಂತಸ ವ್ಯಕ್ತಪಡಿಸಿದ ತಂದೆ ಸತೀಶ್ ಕುಮಾರ್

    ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್​ನಲ್ಲಿ ಚೋಪ್ರಾಗೆ ಚಿನ್ನದ ಪದಕ

    ಚೋಪ್ರಾ ಸಾಧನೆಯ ಬಗ್ಗೆ ಪ್ರಧಾನಿ ಮೋದಿ ಎಕ್ಸ್​ನಲ್ಲಿ ಶ್ಲಾಘನೆ

ಭಾರತದ ಚಿನ್ನದ ಹುಡುಗ ಎಂದೇ ಖ್ಯಾತಿ ಪಡೆದಿರೋ ಚಿನ್ನದ ಹುಡುಗ ಅವರು ಮತ್ತೆ ಬಂಗಾರಕ್ಕೆ ಮುತ್ತಿಕ್ಕುವ ಮೂಲಕ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಹಂಗೇರಿಯ ಬುಡಾಪೆಸ್ಟ್​ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್​ನ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕಕ್ಕೆ ಮುತ್ತಿಡುವ ಮೂಲಕ ದೇಶದ ಕೀರ್ತಿ ಪತಾಕೆ ಹಾರಿಸಿದ್ದಾರೆ. ಫೈನಲ್​ನಲ್ಲಿ ಬರೋಬ್ಬರಿ 88.17 ಮೀಟರ್ ದೂರ ಭರ್ಜಿ ಎಸೆಯೋ ಮೂಲಕ ಪ್ರಥಮ ಸ್ಥಾನ ಪಡೆದುಕೊಂಡರು. ಸದ್ಯ ಪ್ರಧಾನಿ ಮೋದಿಯವರು ನೀರಜ್ ಚೋಪ್ರಾರ ಈ ಸಾಧನೆಯನ್ನು ಹಾಡಿ ಹೊಗಳಿದ್ದಾರೆ.

ಪ್ರಧಾನಿ ಮೋದಿಯವರು ಈ ಬಗ್ಗೆ ತಮ್ಮ ಅಫಿಶಿಯಲ್ ಎಕ್ಸ್ ಅಕೌಂಟ್​ನಲ್ಲಿ ಈ ರೀತಿ ಬರೆದು ಪೋಸ್ಟ್​ ಮಾಡಿದ್ದಾರೆ. ನೀರಜ್ ಚೋಪ್ರಾ ಅವರು ಪ್ರತಿಭಾವಂತ, ಶ್ರೇಷ್ಠತೆಯನ್ನು ಉದಾಹರಿಸುತ್ತಾರೆ. ಅವರ ಆಟದ ಸಮರ್ಪಣೆ, ನಿಖರತೆ ಮತ್ತು ಉತ್ಸಾಹವು ನೀರಜ್​ರನ್ನು ಅಥ್ಲೆಟಿಕ್ಸ್‌ನಲ್ಲಿ ಕೇವಲ ಚಾಂಪಿಯನ್ ಆಗಿರದೆ ಇಡೀ ಕ್ರೀಡಾ ಜಗತ್ತಿನಲ್ಲಿ ಅಪ್ರತಿಮ ಶ್ರೇಷ್ಠತೆಯ ಸಂಕೇತವಾಗಿರಿಸಿದೆ. ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ ಆಗಿದ್ದಕ್ಕೆ ಅಭಿನಂದನೆಗಳು ಎಂದು ಮೋದಿ ಹೇಳಿದ್ದಾರೆ.

ಜಾವೆಲಿನ್ ಥ್ರೋ ವಿನ್ನರ್ ನೀರಜ್ ಚೋಪ್ರಾ

ಚೋಪ್ರಾ ಅವರ ತಂದೆ ಸತೀಶ್ ಕುಮಾರ್ ಹೇಳಿದ್ದೇನು?

ಭರ್ಜಿ ಎಸೆಯುವ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಪಡೆಯುತ್ತಿದ್ದಂತೆ ಇತ್ತ ಅವರ ಪೋಷಕರು, ಊರಿನವರು ಸಖತ್ ಖುಷಿ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ನೀರಜ್ ಚೋಪ್ರಾ ಅವರ ತಂದೆ ಸತೀಶ್ ಕುಮಾರ್, ನಮ್ಮ ಕುಟುಂಬ, ಊರು ಸೇರಿದಂತೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ. ಪೋಷಕರು ಹೆಚ್ಚಿನ ಮಟ್ಟಿಗೆ ತಮ್ಮ ಮಕ್ಕಳ ಆಸೆಗಳಿಗೆ ಪ್ರೋತ್ಸಾಹಿಸಬೇಕು. ಓದುವುದಾಗಲಿ, ಕ್ರೀಡೆಯಾಗಲಿ ಮಕ್ಕಳಿಗೆ ಸಾಥ್ ನೀಡಬೇಕು. ಇನ್ನು ನೀರಜ್ ಚೋಪ್ರಾ ವಿದೇಶದಿಂದ ಬರುತ್ತಿದ್ದಂತೆ ಸೆಲಬ್ರೆಷನ್ ಮಾಡಲಾಗುವುದು ಎಂದು ಹೇಳಿದ್ದಾರೆ.

ನೀರಜ್ ಚೋಪ್ರಾ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ವಿಶ್ವ ಅಥ್ಲೆಟಿಕ್ಸ್​ ಚಾಂಪಿಯನ್​ಶಿಪ್​ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ದಾಖಲೆಯ ಸಾಧನೆ ಮಾಡಿದ್ದಾರೆ. ಈ ಮೂಲಕ ನೀರಜ್ ಚೋಪ್ರಾ ಅವರು ಎಲ್ಲಾ ಗ್ಲೋಬಲ್ ಮೆಡಲ್​​ಗಳನ್ನು ಗೆದ್ದುಕೊಂಡಂತಾಗಿದೆ. ಒಲಿಂಪಿಕ್ ಗೋಲ್ಡ್​ ಮೆಡಲ್, ಡೈಮಂಡ್​ ಟ್ರೋಫಿ, ವರ್ಲ್ಡ್​ ಚಾಂಪಿಯನ್​ಶಿಪ್ ಗೋಲ್ಡ್​ ಮೆಡಲ್ ಹಾಗೂ ವಿಶ್ವ ಅಥ್ಲೆಟಿಕ್ಸ್​ ಚಾಂಪಿಯನ್​ಶಿಪ್​ನಲ್ಲೂ ಪ್ರಶಸ್ತಿಯನ್ನು ಗೆದ್ದುಕೊಂಡಂತಾಗಿದೆ.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

ನೀರಜ್ ಚೋಪ್ರಾಗೆ ಶುಭಾಶಯಗಳ ಮಹಾಪೂರ.. ಚಿನ್ನದ ಹುಡುಗನ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

https://newsfirstlive.com/wp-content/uploads/2023/08/NEERAJ_CHOPRA_PM_MODI.jpg

Load More