ಮಧ್ಯಮ ವರ್ಗಕ್ಕೆ ತೆರಿಗೆಯಿಂದ ಬಿಗ್ ರಿಲೀಫ್..? ಚರ್ಚೆ ಹುಟ್ಟು ಹಾಕಿದ ಮೋದಿಯ ಈ ಹೇಳಿಕೆ

author-image
Ganesh
Updated On
ಕಮಲದ ಬೀಜಗಳು ಜಾಗತಿಕ ಸೂಪರ್ ಫುಡ್ ಆಗಿ ಬೆಳೆದಿದ್ದು ಹೇಗೆ?
Advertisment
  • ನಿರ್ಮಲಾ ಸೀತಾರಾಮನ್ ಅವರಿಂದ ಬಜೆಟ್ ಮಂಡನೆ
  • ಸತತ 8ನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ಸೀತಾರಾಮನ್
  • ನಿನ್ನೆಯ ದಿನ ಪ್ರಧಾನಿ ಮೋದಿ ಏನ್ ಹೇಳಿದ್ದಾರೆ ಗೊತ್ತಾ..?

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ ಎಂಟನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಈ ಬಾರಿ ಬಡ ಮತ್ತು ಮಧ್ಯಮ ವರ್ಗದವರಿಗಾಗಿ ದೊಡ್ಡ ಯೋಜನೆ ಪ್ರಕಟಿಸಬಹುದು ಎಂಬ ನಿರೀಕ್ಷೆಯಲ್ಲಿ ಜನರಿದ್ದಾರೆ.

ಮೋದಿ ಏನ್ ಹೇಳಿದ್ದಾರೆ?

ಬಜೆಟ್ ಅಧಿವೇಶನ ಆರಂಭಕ್ಕೂ ಮುನ್ನ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿರುವ ಪ್ರಧಾನಿ ಮೋದಿ, ಸಂಪತ್ತು ಮತ್ತು ಸಮೃದ್ಧಿಯ ಅಧಿದೇವತೆ ಲಕ್ಷ್ಮಿ ದೇವಿಗೆ ನಮಸ್ಕರಿಸುತ್ತೇನೆ. ದೇಶದ ಬಡ ಮತ್ತು ಮಧ್ಯಮ ವರ್ಗದವರಿಗೆ ಲಕ್ಷ್ಮಿ ದೇವಿಯ ಅನುಗ್ರಹ ಸಿಗಲಿ ಎಂದಿದ್ದಾರೆ.
ಬಜೆಟ್ ಮಂಡನೆಗೆ ಒಂದು ದಿನ ಮುಂಚಿತವಾಗಿ ಪ್ರಧಾನಿಯ ಈ ಹೇಳಿಕೆ, ಬಡವರು ಮತ್ತು ಮಧ್ಯಮ ವರ್ಗದವರಿಗೆ ಏನಾದರೂ ಅನುಕೂಲವಾಗಲಿದೆ ಎಂಬ ಸೂಚನೆ ಎಂದು ಪರಿಗಣಿಸಲಾಗಿದೆ. ಇನ್ನು, ಉಭಯ ಕಲಾಪವನ್ನು ಉದ್ದೇಶಿಸಿ ಮಾತನಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು.. ಮಧ್ಯಮ ವರ್ಗದವರ ಸ್ವಂತ ಮನೆ ಕನಸನ್ನು ನನಸು ಮಾಡಲು ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.

ಇದನ್ನೂ ಓದಿ: Budget : ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿವೆ.. ಮೋದಿ ಬಜೆಟ್​ ಮೇಲೆ ಕರ್ನಾಟಕದ ನಿರೀಕ್ಷೆಗಳು ಏನೇನು..?

ತೆರಿಗೆಗೆ ಸಂಬಂಧಿಸಿ ದೊಡ್ಡ ಘೋಷಣೆ..!

ಸಾಮಾನ್ಯ ಜನರ ತೆರಿಗೆ ಹೊರೆ ಕಡಿಮೆ ಮಾಡಲು ಕಳೆದ ವರ್ಷ ಹೊಸ ಆದಾಯ ತೆರಿಗೆ ಸ್ಲ್ಯಾಬ್ ಪರಿಚಯಿಸಿತ್ತು. ಇದೀಗ ತೆರಿಗೆ ನಿಯಮದಲ್ಲಿ ಇನ್ನಷ್ಟು ಸುಧಾರಿಸಬಹುದು ಎಂಬ ನಿರೀಕ್ಷೆ ಹೆಚ್ಚಾಗಿದೆ. ಶೇಕಡಾ 30ರಷ್ಟು ತೆರಿಗೆ ಸ್ಲ್ಯಾಬ್ ಅನ್ನು ಈಗಿರುವ 15 ಲಕ್ಷ ರೂ.ನಿಂದ 20 ಲಕ್ಷ ರೂಪಾಯಿಗೆ ಹೆಚ್ಚಿಸಬಹುದು. ಹೊಸ ಆದಾಯ ತೆರಿಗೆ ಸ್ಲ್ಯಾಬ್ ವ್ಯವಸ್ಥೆಯಲ್ಲಿ ಸ್ಟ್ಯಾಂಡರ್ಡ್ ಡಿಡಕ್ಷನ್ ಅನ್ನು 50 ಸಾವಿರದಿಂದ 75 ಸಾವಿರಕ್ಕೆ ಹೆಚ್ಚಿಸಿರೋದು ಗಮನಾರ್ಹ.

ಇದನ್ನೂ ಓದಿ: BREAKING: ಬಜೆಟ್​​ಗೂ ಮೊದಲೇ ಗುಡ್​ನ್ಯೂಸ್​.. ಸಿಲಿಂಡರ್ ಬೆಲೆಯಲ್ಲಿ ಕೊಂಚ ಇಳಿಕೆ..

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment