/newsfirstlive-kannada/media/post_attachments/wp-content/uploads/2024/07/Modi-Devegowda.jpg)
ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ನಾಯಕರು ಉಗ್ರ ಹೋರಾಟ ನಡೆಸುತ್ತಿದ್ದಾರೆ. ವಾಲ್ಮೀಕಿ ಬಹುಕೋಟಿ ಹಗರಣ, ಮುಡಾ ಅಕ್ರಮ ಸೈಟು ಹಂಚಿಕೆ ಆರೋಪದಲ್ಲಿ ಕಾಂಗ್ರೆಸ್ ಮೇಲೆ ಕೆಂಡಕಾರುತ್ತಿದ್ದಾರೆ. ರಾಜ್ಯದಲ್ಲಿ ಜಿದ್ದಾಜಿದ್ದಿನ ರಾಜಕೀಯ ನಡೆಯುತ್ತಿರುವಾಗಲೇ ದೆಹಲಿಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ 7, ಲೋಕ ಕಲ್ಯಾಣ್ ಮಾರ್ಗ್‌ನಲ್ಲಿರುವ ನಿವಾಸದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹಾಗೂ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾದರು.
ಈ ಬಗ್ಗೆ ಖುದ್ದು ಮಾಹಿತಿ ಹಂಚಿಕೊಂಡಿರುವ ಮೋದಿ ಅವರು ದೇವೇಗೌಡ ಅವರ ಜೊತೆ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆಸಿದ್ದೇನೆ. ವಿವಿಧ ವಿಷಯಗಳ ಬಗ್ಗೆ ಅವರ ಬುದ್ಧಿವಂತಿಕೆ ಮತ್ತು ದೃಷ್ಟಿಕೋನವು ಮೌಲ್ಯಯುತವಾಗಿದೆ ಎಂದು ಕೊಂಡಾಡಿದ್ದಾರೆ.
ಇದನ್ನೂ ಓದಿ:ಗೋವಿಂದ.. ಗೋವಿಂದ, 187 ಕೋಟಿ ಗೋವಿಂದ.. ಸರ್ಕಾರದ ವಿರುದ್ಧ ಕೇಸರಿ ಪಡೆಯ ಅಹೋರಾತ್ರಿ ಧರಣಿ
ಇದೇ ವೇಳೆ ಹೆಚ್.ಡಿ ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿಗೆ ವಿಶೇಷ ಉಡುಗೊರೆಯನ್ನು ನೀಡಿದ್ದಾರೆ. ಮೋದಿ ಅವರು ಧ್ಯಾನ ಮಾಡುತ್ತಿರುವ ಚಿತ್ರವನ್ನು ಹೆಚ್‌ಡಿಡಿ ಪ್ರಧಾನಿಗೆ ಕೊಟ್ಟಿದ್ದಾರೆ. ಇದನ್ನು ನೋಡಿದ ಮೋದಿ ಅವರು ಬಹಳ ಸಂತಸ ವ್ಯಕ್ತಪಡಿಸಿದ್ದಾರೆ. ಈ ಸುಂದರವಾದ ಕಲಾಚಿತ್ರವನ್ನು ನೋಡಿ ಇತ್ತೀಚೆಗೆ ನಾನು ಕನ್ಯಾಕುಮಾರಿಯಲ್ಲಿ ಮಾಡಿದ ಧ್ಯಾನವೇ ನೆನಪಾಯಿತು ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಶಿರೂರು ಗುಡ್ಡ ಕುಸಿತ ದುರಂತ.. ರಾಜ್ಯಸಭೆಯಲ್ಲಿ ಸಿದ್ದು ಸರ್ಕಾರದ ಮೇಲೆ ಗುಡುಗಿದ HDD; ಹೇಳಿದ್ದೇನು?
ರಾಜ್ಯಸಭೆಯಲ್ಲಿ ಗುಡುಗಿದ್ದ ದೇವೇಗೌಡರು!
ಮಾಜಿ ಪ್ರಧಾನಿ ದೇವೇಗೌಡರು ನಿನ್ನೆಯಷ್ಟೇ ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಸರ್ಕಾರವನ್ನು ಹೊಗಳಿದ್ದರು. ಅಲ್ಲದೇ ಕರ್ನಾಟಕದಲ್ಲಿರುವ ರಾಜ್ಯ ಸರ್ಕಾರ ಏನು ಕೆಲಸ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಗುಡುಗಿದ್ದರು. ಇದಾದ ಬಳಿಕ ಪ್ರಧಾನಿ ಮೋದಿ ಅವರನ್ನು ಹೆಚ್.ಡಿ ದೇವೇಗೌಡ ಹಾಗೂ ಹೆಚ್.ಡಿ ಕುಮಾರಸ್ವಾಮಿ ಅವರು ಭೇಟಿಯಾಗಿ ಮಹತ್ವದ ಮಾತಕತೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ