/newsfirstlive-kannada/media/post_attachments/wp-content/uploads/2025/01/KUMBHA_MELA_CM.jpg)
ಲಕ್ನೋ: ಪ್ರಯಾಗ್ರಾಜ್ನ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಬೆನ್ನಲ್ಲೇ ಪ್ರಧಾನಿ ಮೋದಿಯವರು ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ.
ಪ್ರಧಾನಿ ಮೋದಿಯವರು ಘಟನೆ ಹಿನ್ನೆಲೆಯಲ್ಲಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಫೋನ್ ಕರೆ ಮಾಡಿ ಘಟನೆ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಕುಂಭಮೇಳದಲ್ಲಿ ಇನ್ನಷ್ಟು ಭದ್ರತೆ ಹೆಚ್ಚುಸುವಂತೆ ಸಲಹೆ ನೀಡಿದ್ದಾರೆ. ಹೆಚ್ಚಿನ ಭದ್ರತೆ ಒದಗಿಸಿ ಭಕ್ತರಿಗೆ ಎಲ್ಲ ರೀತಿಯಲ್ಲೂ ಅನುಕೂಲವಾಗುವಂತೆ ಎಚ್ಚರಿಕೆ ವಹಿಸಿ ಎಂದು ಹೇಳಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: BREAKING: ಕುಂಭಮೇಳದಲ್ಲಿ ಕಾಲ್ತುಳಿತಕ್ಕೆ ಜೀವ ಕಳೆದುಕೊಂಡ 15 ಯಾತ್ರಿಗಳು
ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಕೋಟ್ಯಂತರ ಭಕ್ತರು ಪ್ರಯಾಗ್ರಾಜ್ ಮಹಾ ಕುಂಭಮೇಳಕ್ಕೆ ಭೇಟಿ ನೀಡುತ್ತಿದ್ದಾರೆ. ಈಗಾಗಲೇ ಕುಂಭಮೇಳಕ್ಕೆ ಭೇಟಿ ನೀಡಿರುವ ಭಕ್ತರು ಮಧ್ಯೆರಾತ್ರಿ 2 ಗಂಟೆ ಸುಮಾರಿಗೆ ಅಮೃತ್ ಸ್ನಾನವನ್ನು ಮಾಡಲು ಸಂಗಮ್ ಪ್ರದೇಶದಲ್ಲಿ ತೆರಳುವಾಗ ಏಕಾಏಕಿ ಜನರು ನುಗ್ಗಿಕೊಂಡು ಬಂದಿದ್ದಾರೆ. ಇದರಿಂದ 15 ಜನರು ಹಸುನೀಗಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಘಟನೆಯ ಬಗ್ಗೆ ಹೆಚ್ಚಿನ ಕ್ರಮ ತೆಗೆದುಕೊಂಡಿದ್ದಾರೆ. ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ಸೂಕ್ತ ಭದ್ರತೆಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ