/newsfirstlive-kannada/media/post_attachments/wp-content/uploads/2025/06/YOGA_MODI.jpg)
ಅಮರಾವತಿ: ವಿಶಾಖಪಟ್ಟಣಂನಲ್ಲಿ ನಡೆಯಲಿರುವ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಅವರು ಭಾಗಿಯಾಗಲಿದ್ದಾರೆ. ಈ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಸುಮಾರು 5 ಲಕ್ಷಕ್ಕೂ ಅಧಿಕ ಜನರು ಭಾಗವಹಿಸುತ್ತಿದ್ದು ಹಲವು ದಾಖಲೆಗಳು ಆಗಲಿವೆ ಎಂದು ಆಂಧ್ರ ಪ್ರದೇಶದ ಸಿಎಂ ಎನ್ ಚಂದ್ರಬಾಬು ನಾಯ್ಡು ಅವರು ಹೇಳಿದ್ದಾರೆ.
11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ವಿಶಾಖಪಟ್ಟಣಂನಲ್ಲಿ ನಡೆಯಲಿದ್ದು, ಇದು ಆರ್‌ಕೆ ಬೀಚ್‌ನಿಂದ ಭೀಮಿಲಿ ಬೀಚ್‌ವರೆಗೆ ಅಂದರೆ 26 ಕಿಲೋಮೀಟರ್ ವ್ಯಾಪ್ತಿಯಲ್ಲಿ 5,00,000ಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ. ಈ ಬೃಹತ್ ಯೋಗ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಅವರು ಭಾಗಿಯಾಗುತ್ತಿದ್ದಾರೆ. ಇದು ಬೆಳಗ್ಗೆ 6:30 ರಿಂದ 8:00 ಗಂಟೆಯವರೆಗೆ ನಡೆಯಲಿದೆ. ಇದರಲ್ಲಿ ಆಂಧ್ರಪ್ರದೇಶದ ಸಿಎಂ ಎನ್ ಚಂದ್ರಬಾಬು ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಸೇರಿದಂತೆ ರಾಜಕೀಯ ಗಣ್ಯರು ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಇದನ್ನೂ ಓದಿ: ಅಮರನಾಥ ಯಾತ್ರೆ ಭಕ್ತಾದಿಗಳ ಸಂಖ್ಯೆ ಕುಸಿಯುತ್ತಾ.. ಭಾರತದ ಇಂಟಲಿಜೆನ್ಸ್ನಿಂದ ಭಾರೀ ಎಚ್ಚರಿಕೆ!
ಈ ಬೃಹತ್ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ವಿಶಾಖಪಟ್ಟಣಂನಲ್ಲಿ ಮಾತ್ರವಲ್ಲ ಆಂಧ್ರ ಪ್ರದೇಶದ್ಯಾಂತ ಬೇರೆ ಬೇರೆ ಪ್ರದೇಶಗಳಲ್ಲಿ ಸುಮಾರು 20 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ. ಇಷ್ಟೇ ಅಲ್ಲದೇ, ಎನ್ ಚಂದ್ರಬಾಬು ನೇತೃತ್ವದ ಸರ್ಕಾರ 22 ವಿಶ್ವ ದಾಖಲೆಗಳನ್ನು ಬ್ರೇಕ್ ಮಾಡುವ ಗುರಿಯನ್ನು ಹೊಂದಿದೆ ಎಂದು ಹೇಳಲಾಗುತ್ತಿದೆ.
108 ನಿಮಿಷಗಳ ಕಾಲ ಸೂರ್ಯ ನಮಸ್ಕಾರವನ್ನು ಬುಡಕಟ್ಟು ಸಮುದಾಯಕ್ಕೆ ಸೇರಿದ ಸುಮಾರು 25,000 ವಿದ್ಯಾರ್ಥಿಗಳು ಮಾಡಲಿದ್ದಾರೆ. ಈ ಸೂರ್ಯ ನಮಸ್ಕಾರದ ಪ್ರಮುಖ ಉದ್ದೇಶ ಎಂದರೆ ದಾಖಲೆ ಬರೆಯುವುದು ಆಗಿದೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಯೋಗ ದಿನಾಚರಣೆಯಲ್ಲಿ ಭಾಗಿಯಾಗುತ್ತಿದ್ದಾರೆ ಎನ್ನಲಾಗಿದೆ. ರಾಜ್ಯಾದ್ಯಂತ ಸುಮಾರು 1 ಲಕ್ಷ ಕೇಂದ್ರಗಳಲ್ಲಿ ಲಕ್ಷಾಂತರ ಜನರು ಒಂದೇ ಬಾರಿಗೆ ಯೋಗದಲ್ಲಿ ಪಾಲ್ಗೊಳ್ಳಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ