newsfirstkannada.com

ಖರ್ಗೆ ಕೋಟೆಯಿಂದಲೇ ಪ್ರಧಾನಿ ಮೋದಿ ರಣಕಹಳೆ.. ಕರ್ನಾಟಕ ಗೆಲ್ಲಲು BJP ಮಾಸ್ಟರ್‌ ಪ್ಲಾನ್‌; ಏನದು?

Share :

Published March 15, 2024 at 12:19pm

    ‘ಲೋಕ’ ಗೆಲ್ಲಲು ಕಲಬುರಗಿಯಿಂದ ಪ್ರಧಾನಿ ಮೋದಿ ರಣಕಹಣೆ..

    ವೇದಿಕೆ ಮುಂಭಾಗ ಒಟ್ಟು 80 ಸಾವಿರಕ್ಕೂ ಅಧಿಕ ಆಸನಗಳ ವ್ಯವಸ್ಥೆ

    BS ಯಡಿಯೂರಪ್ಪ, ವಿಜಯೇಂದ್ರ, R. ಅಶೋಕ್, ಬೊಮ್ಮಾಯಿ ಭಾಗಿ

ಕಲಬುರಗಿ: 2024ರ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು ರಾಜ್ಯದಲ್ಲಿ ಬಿಜೆಪಿ ಗೆಲ್ಲಲು ರಣತಂತ್ರ ರೂಪಿಸುತ್ತಿದೆ. ಈಗಾಗಲೇ ರಾಜ್ಯದ 20 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ. ಇದರ ಬೆನ್ನಲ್ಲೇ ಕಲಬುರಗಿಯ ಬೃಹತ್ ಕಾರ್ಯಕ್ರಮದಲ್ಲಿ ನಾಳೆ ಪ್ರಧಾನಿ ಮೋದಿಯವರು ಭಾಗಿಯಾಗಿ ಚುನಾವಣೆ ರಣಕಹಳೆ ಮೊಳಗಿಸಲಿದ್ದಾರೆ.

ನಾಳೆ ಮಧ್ಯಾಹ್ನ ನಗರದ ಎನ್​ವಿ ಕಾಲೇಜ್ ಮೈದಾನದಲ್ಲಿ ಬಿಜೆಪಿ ಬೃಹತ್ ಎಲೆಕ್ಷನ್ ಪ್ರಚಾರ ಕಾರ್ಯಕ್ರಮ ಹಮ್ಮಿಕೊಂಡಿದ್ದು ಇದರಲ್ಲಿ ಪ್ರಧಾನಿ ಮೋದಿಯವರು ಭಾಗಿಯಾಗಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ವಿಶೇಷ ವಿಮಾನದ ಮೂಲಕ ಕಲಬುರಗಿಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಅಲ್ಲಿಂದ ಸೇನಾ ಕಾಪ್ಟರ್ ಮೂಲಕ ಮಧ್ಯಾಹ್ನ 1:20ಕ್ಕೆ ಪೊಲೀಸ್ ಪರೇಡ್ ಮೈದಾನಕ್ಕೆ ತಲುಪಲಿದ್ದಾರೆ.

ಇಲ್ಲಿಂದ ಎನ್​ವಿ ಮೈದಾನಕ್ಕೆ ರಸ್ತೆ ಮೂಲಕ ತೆರಳಲಿದ್ದು ಇದು ಸುಮಾರು ಸುಮಾರು 2.5 ರಿಂದ 3 ಕಿ.ಮೀ ಇದ್ದು ಈ ವೇಳೆ ಮೋದಿಯವರು ಸೆಮಿ ರೋಡ್ ಶೋ ಮಾಡಲಿದ್ದಾರೆ. ಸರಿಯಾಗಿ 1:50ಕ್ಕೆ ಎನ್​ವಿ ಮೈದಾನವನ್ನು ಪ್ರಧಾನಿ ಮೋದಿ ತಲುಪಲಿದ್ದು ಬೃಹತ್ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಲೋಕ ಗೆಲ್ಲಲು ಜನರನ್ನುದ್ದೇಶಿಸಿ ಮೋದಿ ಮಾತನಾಡಲಿದ್ದಾರೆ. ಇನ್ನು ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿ ಹಲವು ನಾಯಕರು ಭಾಗಿಯಾಗಲಿದ್ದಾರೆ.

ಬಿಜೆಪಿಯ ಬೃಹತ್ ಕಾರ್ಯಕ್ರಮ ಹಿನ್ನೆಲೆಯಲ್ಲಿ ಎನ್​ವಿ ಮೈದಾನದಲ್ಲಿ ಬೃಹತ್ ವೇದಿಕೆಯನ್ನು ಈಗಾಗಲೇ ಸಿದ್ಧ ಮಾಡಲಾಗುತ್ತಿದೆ. ವೇದಿಕೆಯ ಮುಂಭಾಗದಲ್ಲಿ ಒಟ್ಟು 80 ಸಾವಿರಕ್ಕೂ ಅಧಿಕ ಆಸನಗಳ ವ್ಯವಸ್ಥೆ ಮಾಡಲಾಗುತ್ತಿದ್ದು 2 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಈ ವೇಳೆ ಪೊಲೀಸ್ ಬಿಗಿ ಬಂದೋಬಸ್ತ್ ಇರುತ್ತದೆ. ಕಾರ್ಯಕ್ರಮಕ್ಕೆ ವಾಹನದಲ್ಲಿ ಬರುವವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಖರ್ಗೆ ಕೋಟೆಯಿಂದಲೇ ಪ್ರಧಾನಿ ಮೋದಿ ರಣಕಹಳೆ.. ಕರ್ನಾಟಕ ಗೆಲ್ಲಲು BJP ಮಾಸ್ಟರ್‌ ಪ್ಲಾನ್‌; ಏನದು?

https://newsfirstlive.com/wp-content/uploads/2023/12/Pm-modi-Ayodhya-2.jpg

Load More