newsfirstkannada.com

ಚಂದ್ರಯಾನ 3 ಯಶಸ್ವಿ ಉಡಾವಣೆ; ಪ್ರಧಾನಿ ಮೋದಿಯಿಂದ ಅಭಿನಂದನೆ

Share :

14-07-2023

  ಯಶಸ್ವಿಯಾಗಿ ಉಡಾವಣೆಯಾದ ಚಂದ್ರಯಾನ-3

  ಭಾರತದ ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ದಾಖಲೆ

  ಟ್ವೀಟ್​​ ಮೂಲಕ ಅಭಿನಂದನೆ ತಿಳಿಸಿದ ಪ್ರಧಾನಿ ಮೋದಿ

ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷೆ ಯೋಜನೆ ಚಂದ್ರಯಾನ-3 ಉಪಗ್ರಹವನ್ನು ಯಶಸ್ವಿಯಾಗಿ ಇಂದು ಮಧ್ಯಾಹ್ನ ಆಕಾಶಕ್ಕೆ ಕಳುಹಿಸಲಾಯಿತು. ಇದರಿಂದ ಭಾರತದ ಬಾಹ್ಯಾಕಾಶ ಸಂಸ್ಥೆ ಮತ್ತೊಂದು ಮೈಲುಗಲ್ಲು ಸ್ಥಾಪನೆ ಮಾಡಿದಂತೆ ಆಗಿದೆ. ಇವತ್ತು ಕಳುಹಿಸಲಾಗಿರುವ ಚಂದ್ರಯಾನ-3 ಅನ್ನು ಇಡೀ ಭಾರತೀಯರೆಲ್ಲ ನೋಡಿ ಖುಷಿಪಟ್ಟಿದ್ದಾರೆ.

ಇನ್ನು, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್​ ಮಾಡುವ ಮೂಲಕ ಅಭಿನಂದನೆ ತಿಳಿಸಿದ್ದಾರೆ. ಚಂದ್ರಯಾನ-3 ಭಾರತದ ಬಾಹ್ಯಾಕಾಶ ಒಡಿಸ್ಸಿಯಲ್ಲಿ ಹೊಸ ಅಧ್ಯಾಯ ಬರೆಯುತ್ತದೆ. ಇದು ಪ್ರತಿಯೊಬ್ಬ ಭಾರತೀಯನ ಕನಸು ಮತ್ತು ಮಹತ್ವಾಕಾಂಕ್ಷೆಗಳನ್ನು ಎತ್ತರಕ್ಕೆ ಏರಿಸಲಿದೆ. ಈ ಮಹತ್ವದ ಸಾಧನೆಯು ನಮ್ಮ ವಿಜ್ಞಾನಿಗಳ ನಿರಂತರ ಸಮರ್ಪಣೆಗೆ ಸಾಕ್ಷಿಯಾಗಿದೆ. ನಾನು ಅವರ ಚೈತನ್ಯ ಮತ್ತು ಜಾಣ್ಮೆಯನ್ನು ಅಭಿನಂದಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ನರೇಂದ್ರ ಮೋದಿ ಅವರು, 2 ದಿನಗಳ ಫ್ರಾನ್ಸ್ ಪ್ರವಾಸದಲ್ಲಿದ್ದಾರೆ. ಇನ್ನು ಪ್ರಧಾನಿ ಮೋದಿ ಅವರಿಗೆ ಫ್ರಾನ್ಸ್​ ದೇಶದ ಅತ್ಯುನ್ನತ ಮಿಲಿಟರಿ, ನಾಗರಿಕ‌ ಪ್ರಶಸ್ತಿ ‘ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್’ (Grand Cross of the Legion of Honor)  ನೀಡಿ ಗೌರವಿಸಲಾಗಿದೆ. ಮೋದಿಯವರಿಗೆ ಅಲ್ಲಿನ ಅಧ್ಯಕ್ಷ ಇಮ್ಯಾನ್ಯುಯಲ್ ಮ್ಯಾಕ್ರನ್, ಈ ಗೌರವ ನೀಡಿದ್ದಾರೆ.

ಜೊತೆಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯನವರು ಸಹ ಟ್ವೀಟ್​ ಮಾಡುವ ಮೂಲಕ ಸಂತೋಷ ವ್ಯಕ್ತಪಡಿಸಿದ್ದಾರೆ. ಚಂದ್ರಯಾನ 3 ಮಿಷನ್‌ನ ಯಶಸ್ವಿ ಉಡಾವಣೆಗಾಗಿ ಇಸ್ರೋಗೆ ಅಭಿನಂದನೆಗಳು. ಇದು ಭಾರತಕ್ಕೆ ಹೆಮ್ಮೆಯ ಕ್ಷಣ ಮತ್ತು ಭಾರತದ ಬಾಹ್ಯಾಕಾಶ ಸಂಶೋಧನೆ ಮತ್ತು ನಾವೀನ್ಯತೆಯಲ್ಲಿ ಹೊಸ ಮೈಲಿಗಲ್ಲು. ಈ ಸಾಧನೆಯು ಭಾರತದ ಯುವ ಮನಸ್ಸುಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಲು ಪ್ರೇರೇಪಿಸುತ್ತದೆ ಎಂದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಚಂದ್ರಯಾನ 3 ಯಶಸ್ವಿ ಉಡಾವಣೆ; ಪ್ರಧಾನಿ ಮೋದಿಯಿಂದ ಅಭಿನಂದನೆ

https://newsfirstlive.com/wp-content/uploads/2023/07/pm-modi.jpg

Load More