/newsfirstlive-kannada/media/post_attachments/wp-content/uploads/2024/07/RADHIK-ANANT.jpg)
ಶ್ರೀಮಂತ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆ ನಾಳೆ ನಡೆಯಲಿದೆ. ಈ ಅದ್ದೂರಿ ಮದುವೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಕೂಡ ಸಾಕ್ಷಿಯಾಗಲಿದ್ದಾರೆ ಎನ್ನಲಾಗಿದೆ.
ಮೋದಿಯವರ ಭೇಟಿ ಸಾಧ್ಯತೆ ಹಿನ್ನೆಲೆಯಲ್ಲಿ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ ಬಿಗಿ ಭದ್ರತೆ ಮಾಡಲಾಗುತ್ತಿದೆ. ಟ್ರೈಡೆಂಟ್ ಹೋಟೆಲ್ (Trident Hotel) ಸುತ್ತಮುತ್ತಲಿನ ಕಟ್ಟಡಗಳ ಬಳಿ ಭದ್ರತಾ ವ್ಯವಸ್ಥೆ ಹೆಚ್ಚಿಸಲಾಗಿದೆ. ಮತ್ತೊಂದು ಕಡೆ ಪ್ರಧಾನಿ ಮೋದಿ ಅವರ ಮಹಾರಾಷ್ಟ್ರ ಪ್ರವಾಸದ ಬಗ್ಗೆ ಸ್ಥಳೀಯ ಆಡಳಿತ ಜಾಗರೂಕವಾಗಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಭೆಯ ಸಿದ್ಧತೆಗಳ ಮೇಲೆ ಕಣ್ಣಿಟ್ಟಿದ್ದಾರೆ. ಮೋದಿ ಭೇಟಿ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ನೀಡಲಾಗುತ್ತಿದೆ. ಮಹಾರಾಷ್ಟ್ರ ಪ್ರವಾಸದ ವೇಳೆ ಮುಕೇಶ್ ಅಂಬಾನಿ ಪುತ್ರನ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಇದನ್ನೂ ಓದಿ:ಕಲಬುರಗಿ ಯುವಕನ ಬರ್ಬರ ಕೊಲೆ ಕೇಸ್ಗೆ ಬಿಗ್ ಟ್ವಿಸ್ಟ್.. ತಂಗಿಯನ್ನು ಪ್ರೀತಿಸಿದ್ಕೆ ರೊಚ್ಚಿಗೆದ್ದ ಅಣ್ಣ..
ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ಅನಂತ್ ಮತ್ತು ರಾಧಿಕಾ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಈ ಮದುವೆಯ ಕಾರ್ಯಕ್ರಮಗಳು ಜೋರಾಗಿ ನಡೆಯುತ್ತಿವೆ. ಈ ವಿಶೇಷ ವಿವಾಹದಲ್ಲಿ ಪಾಲ್ಗೊಳ್ಳಲು ದೇಶ ಮತ್ತು ವಿದೇಶಗಳಿಂದ ದೊಡ್ಡ, ದೊಡ್ಡ ವ್ಯಕ್ತಿಗಳು ಮುಂಬೈ ತಲುಪುತ್ತಿದ್ದಾರೆ.
ನರೇಂದ್ರ ಮೋದಿ ಜುಲೈ 13 ರಂದು ಮುಂಬೈಗೆ ತೆರಳುತ್ತಿದ್ದಾರೆ. ಜುಲೈ 13 ರಂದು ಮುಂಬೈನಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಬೊರಿವಲಿ-ಥಾಣೆ ಲಿಂಕ್ ರಸ್ತೆ ಮತ್ತು ಗೋರೆಗಾಂವ್-ಮುಲುಂಡ್ ಲಿಂಕ್ ರಸ್ತೆಗೆ ಭೂಮಿ ಪೂಜೆ ಮಾಡಲಿದ್ದಾರೆ. ಈ ಎರಡೂ ಯೋಜನೆಗಳ ವೆಚ್ಚ ಸುಮಾರು 14 ಸಾವಿರ ಕೋಟಿ ರೂಪಾಯಿ ಎನ್ನಲಾಗಿದೆ. ಜೊತೆಗೆ ನೆಸ್ಕೋದಲ್ಲಿ ಹಲವು ಹೊಸ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಇದನ್ನೂ ಓದಿ:ಓದಿಸಿ ಸರ್ಕಾರಿ ಕೆಲಸ ಕೊಡಿಸಿದ ಪತಿ.. ಡ್ಯೂಟಿಗೆ ಸೇರ್ತಿದ್ದಂತೆ ಗಂಡನ ಬಿಟ್ಟು ಪತ್ನಿ ಪರಾರಿ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ