ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಪ್ರಧಾನಿ ಮೋದಿ ಕಂಬನಿ.. ಟ್ವೀಟ್ ಮಾಡಿ ಏನಂದ್ರು..?

author-image
Ganesh
Updated On
ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಪ್ರಧಾನಿ ಮೋದಿ ಕಂಬನಿ.. ಟ್ವೀಟ್ ಮಾಡಿ ಏನಂದ್ರು..?
Advertisment
  • ಆರ್​ಸಿಬಿ ವಿಕ್ಟರಿ ಸೆಲೆಬ್ರೇಷನ್ ವೇಳೆ ಘೋರ ದುರಂತ
  • ಗಾಯಗೊಂಡವರಿಗೆ ಸರ್ಕಾರದಿಂದ ಉಚಿತ ಚಿಕಿತ್ಸೆ
  • 15 ದಿನದೊಳಗೆ ತನಿಖೆ ನಡೆಸಿ ಸೂಕ್ತ ಕ್ರಮದ ಭರವಸೆ

ಬೆಂಗಳೂರಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ. ಆರ್​ಸಿಬಿ ವಿಕ್ಟರಿ ಸಂಭ್ರಮಾಚರಣೆ ವೇಳೆ ಎಂ.ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನೂಕು ನುಗ್ಗಲು ಸಂಭವಿಸಿ ಭೀಕರ ಕಾಲ್ತುಳಿತ ಉಂಟಾಗಿದೆ. ಈ ದುರಂತದಲ್ಲಿ 10 ಮಂದಿ ಆರ್​ಸಿಬಿ ಅಭಿಮಾನಿಗಳು ಜೀವ ಕಳೆದುಕೊಂಡಿದ್ದಾರೆ. 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೋದಿ ಕಂಬನಿ..

ಬೆಂಗಳೂರಿನಲ್ಲಿ ನಡೆದ ಅವಘಡ ನಿಜಕ್ಕೂ ಹೃದಯವಿದ್ರಾವಕ. ಈ ದುರಂತದ ಸಮಯದಲ್ಲಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಸಾಂತ್ವನಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ- ಪ್ರಧಾನ ಮಂತ್ರಿ

ದುರಂತದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಮರುಗಿದ್ದಾರೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂಪಾಯಿ ಪರಿಹಾರ ನೀಡುತ್ತೇವೆ. ಗಾಯಗೊಂಡವರಿಗೆ ಸರ್ಕಾರದಿಂದ ಉಚಿತ ಚಿಕಿತ್ಸೆ ನೀಡಲಾಗುವುದು. ಪ್ರಕರಣ ಸಂಬಂಧ ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲಾಗುವುದು ಅಂತಾ ತಿಳಿಸಿದ್ದಾರೆ.

ಘಟನೆ ಬಗ್ಗೆ ಸೂಕ್ತ ತನಿಖೆ ಆಗಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೂಚಿಸಿದ್ದಾರೆ. ಇನ್ನು, ವಿಪಕ್ಷಗಳು ದುರ್ಘಟನೆ ಬಗ್ಗೆ ರಾಜ್ಯ ಸರ್ಕಾರದತ್ತ ಬೆಟ್ಟು ಮಾಡಿವೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment