‘ಪಾಕ್ ಉಗ್ರ ಪೋಷಕ’ ಎಂದ ಪ್ರಧಾನಿ ಮೋದಿ
ಪಾಕ್ಗೂ, ಭಯೋತ್ಪಾದಕರಿಗೂ ಎಚ್ಚರಿಕೆ
ಏನಿದು ಶಾಂಘೈ ಸಹಕಾರ ಸಂಘಟನೆ..?
ಶಾಂಘೈ ಸಹಕಾರ ಸಂಘಟನೆ (SCO:Shanghai Cooperation Organisation) ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಗ್ರ ಪೋಷಕ ಪಾಕ್ಗೆ ನೇರವಾಗಿ ತರಾಟೆ ತೆಗೆದುಕೊಂಡ್ದಾರೆ. ಈ ಸಭೆಯಲ್ಲಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಇದ್ದರು.
ವರ್ಚ್ಯುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ನಾವು ಉಗ್ರವಾದವನ್ನು ಸಹಿಸುವ ಮಾತೇ ಇಲ್ಲ. ಭಾರತ ನಿರಂತರವಾಗಿ ಭಯೋತ್ಪಾದನೆ ವಿರುದ್ಧ ಹೋರಾಟವನ್ನು ಮುಂದುವರಿಸಿಕೊಂಡು ಬಂದಿದೆ. ಕೆಲವು ದೇಶಗಳು ಗಡಿಯಾಚನೆಗಿನ ಭಯೋತ್ಪಾದನೆಗೆ ಬೆಂಬಲ ನೀಡುತ್ತಿವೆ. ಮತ್ತು ಅದನ್ನೇ ಅಸ್ತ್ರವಾಗಿ ಬಳಸುತ್ತಿವೆ. ಶಾಂಘೈ ಸಹಕಾರ ಶೃಂಗಸಭೆ ಭಯೋತ್ಪಾದನೆ ಪೋಷಿಸುವ ದೇಶವನ್ನು ಖಂಡಿಸುತ್ತದೆ. ಯಾವುದೇ ಕಾರಣಕ್ಕೂ ನಾವು ಇದನ್ನು ಸಹಿಸಲ್ಲ ಎಂಬ ಎಚ್ಚರಿಕೆಯನ್ನು ನೀಡಿದರು.
ಇಂದಿನ ಶೃಂಗಸಭೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಹಾಗೂ ಕಜಕಸ್ತಾನ್, ಕಿರ್ಗಿಸ್ತಾನ್, ತಜಕಿಸ್ತಾನ್, ಉಜ್ಬೇಕಿಸ್ತಾನ ದೇಶಗಳ ಮುಖ್ಯಸ್ಥರು ಭಾಗಿಯಾಗಿದ್ದರು. ಪಾಶ್ಚಿಮಾತ್ಯ ರಾಷ್ಟ್ರಗಳ ಪ್ರಭಾವಕ್ಕೆ ಪ್ರತಿಯಾಗಿ ಶಾಂಘೈ ಸಹಕಾರ ಸಂಘಟನೆ 2001ರಲ್ಲಿ ರಚನೆಯಾಗಿದೆ. ಈ ಸಂಘಟನೆಯಲ್ಲಿ ಭಾರತ, ಚೀನಾ, ಪಾಕಿಸ್ತಾನ, ರಷ್ಯಾ, ಕಜಕಿಸ್ತಾನ, ತಜಿಕಿಸ್ತಾನ, ಉಜ್ಬೆಕಿಸ್ತಾನ ಸೇರಿದಂತೆ ಕಿರ್ಗಿಸ್ತಾನ ಸದಸ್ಯ ರಾಷ್ಟ್ರಗಳಾಗಿವೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ