newsfirstkannada.com

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿದ ಆರೋಪ; ಪ್ರತಿಷ್ಠಿತ ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಕೇಸ್ ದಾಖಲು

Share :

20-07-2023

    ಶಿವಮೊಗ್ಗದ ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

    ಆರೋಪಿ ಫಾದರ್‌ ಅವರಿಂದ ರೇಪ್ ಕೇಸ್ ಮುಚ್ಚಿ ಹಾಕುವ ಯತ್ನ

    ಶಿವಮೊಗ್ಗ ಪೊಲೀಸರ ವಶದಲ್ಲಿರುವ ಆರೋಪಿ ಫಾದರ್ ವಿಚಾರಣೆ

ಶಿವಮೊಗ್ಗದ ಪ್ರತಿಷ್ಠಿತ ಚರ್ಚ್ ಫಾದರ್ ವಿರುದ್ಧ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಪ್ರಥಮ ಪಿಯು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಅತ್ಯಾಚಾರ ನಡೆಸಿರುವ ಆರೋಪದಲ್ಲಿ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ಚರ್ಚ್ ಆಡಳಿತಕ್ಕೊಳಪಟ್ಟ ಕಾಲೇಜಿನಲ್ಲಿ ಪ್ರಥಮ ಪಿಯು ಓದುತ್ತಿರುವ ವಿದ್ಯಾರ್ಥಿನಿಯೇ ಫಾದರ್ ವಿರುದ್ಧ ಆರೋಪ ಮಾಡಿದ್ದಾರೆ. ಕಾಲೇಜಿನ ಪ್ರಿನ್ಸಿಪಾಲ್ ಸಹ ಆಗಿರುವ ಈ ಫಾದರ್ ಅತ್ಯಾಚಾರ ನಡೆಸಿ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಸಿದ್ದರು ಎನ್ನಲಾಗಿದೆ.

ಪ್ರತಿಷ್ಠಿತ ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿರೋದು ಶಿವಮೊಗ್ಗದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ವಿದ್ಯಾರ್ಥಿನಿಯ ದೂರು ಪಡೆದು ಪ್ರಕರಣ ದಾಖಲಿಸಿರುವ ಪೊಲೀಸರು ಆರೋಪಿ ಫಾದರ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಪೋಕ್ಸೋ ಜೊತೆ ಅಟ್ರಾಸಿಟಿ ಪ್ರಕರಣ ಸಹ ಆರೋಪಿ ಫಾದರ್ ವಿರುದ್ಧ ದಾಖಲು ಮಾಡಲಾಗಿದೆ.

ಅತ್ಯಾಚಾರ ಆರೋಪಕ್ಕೆ ಗುರಿಯಾಗಿರುವ ಫಾದರ್ ಅನ್ನು ಫ್ರಾನ್ಸಿಸ್ ಫರ್ನಾಂಡಿಸ್ ಎನ್ನಲಾಗಿದೆ. ನಿನ್ನೆ ರಾತ್ರಿ ಶಿವಮೊಗ್ಗದ ಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಫಾದರ್ ಅನ್ನು ಕರೆದುಕೊಂಡು ಹೋಗಿದ್ದಾರೆ. ಅಪ್ರಾಪ್ತ ಯುವತಿಯ ಮೇಲೆ ಫಾದರ್ ಅತ್ಯಾಚಾರ ನಡೆಸಿದ ಆರೋಪಕ್ಕೆ ಪೊಲೀಸ್ ಠಾಣೆ ಹಾಗೂ ಚರ್ಚೆ ಮುಂದೆ ಯುವಕರು ಪ್ರತಿಭಟನೆ ನಡೆಸಿದ್ದಾರೆ. ಫಾದರ್ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಶಿಕ್ಷಣ ಸಂಸ್ಥೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿದ ಆರೋಪ; ಪ್ರತಿಷ್ಠಿತ ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಕೇಸ್ ದಾಖಲು

https://newsfirstlive.com/wp-content/uploads/2023/07/Shivamogga-Father-Case.jpg

Load More