ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕಾವು ಜೋರಾಗಿದೆ. ಇತ್ತೀಚೆಗೆ ನಡೆದ ಬಹಿರಂಗ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು, ಸಿ.ಪಿ ಯೋಗೇಶ್ವರ್ ನಮ್ಮ ಪಕ್ಷದಿಂದ ರಾಜಕೀಯ ಶುರು ಮಾಡಿದ್ರು. ಬಳಿಕ ಜೆಡಿಎಸ್‌ಗೆ ಹೋಗಬೇಕು ಎಂದುಕೊಂಡಿದ್ದರು. ಆದರೆ, ಹೆಚ್.ಡಿ ಕುಮಾರಸ್ವಾಮಿ ಬಿಜೆಪಿಗಿಂತಲೂ ಡೇಂಜರ್ ಎಂದಿದ್ದರು. ಇದೇ ಸಂದರ್ಭದಲ್ಲಿ ಕುಮಾರಸ್ವಾಮಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಕೊಟ್ಟಿದ್ರು.
ಏಯ್ ಕುಮಾರಸ್ವಾಮಿ ನಿನಗೆ ಮುಸಲ್ಮಾನರ ಮತ ಬೇಕಾ? ಬಿಜೆಪಿಗೆ ಹೋಗಿ ಮುಸಲ್ಮಾನರನ್ನು ಖರೀದಿ ಮಾಡುತ್ತೀಯಾ? ನಿನ್ನ ರೇಟು ಹೇಳು. ಮುಸಲ್ಮಾನರೇ ಒಂದೊಂದು ಪೈಸೆ ಹಾಕಿ ನಿನ್ನಿಡೀ ಕುಟಂಬವನ್ನೇ ಖರೀದಿ ಮಾಡುತ್ತಾರೆ ಎಂದು ಏಕವಚನದಲ್ಲೇ ದಾಳಿ ನಡೆಸಿದ್ರು ಜಮೀರ್. ಎಚ್.ಡಿ ಕುಮಾರಸ್ವಾಮಿ ಅವರನ್ನು ನಿಂದಿಸಿದ್ದ ಜಮೀರ್ ವಿರುದ್ಧ ಇಡೀ ರಾಜ್ಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಎಚ್ಚೆತ್ತ ಜಮೀರ್ ಅವರು, ನನ್ನ ಹೇಳಿಕೆಯಿಂದ ಯಾರಿಗಾದರೂ ಬೇಸರವಾಗಿದ್ದರೆ ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆ.
ಜಮೀರ್ ವಿರುದ್ಧ ದೂರು
ಸಿ.ಪಿ.ಯೋಗೇಶ್ವರ್ ಪರ ಪ್ರಚಾರ ಮಾಡುತ್ತಾ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದರು ಜಮೀರ್. ಬಿಜೆಪಿಯವರಿಗಿಂತ ಕಾಲಾ ಕುಮಾರಸ್ವಾಮಿ ಡೇಂಜರ್ ಅನ್ನೋ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಜಮೀರ್ ವಿರುದ್ಧ ದೂರು ನೀಡಲಾಗಿದೆ. ವಕೀಲ RLN ಮೂರ್ತಿ ಅವರು ವಿಧಾನಸೌಧ ಠಾಣೆಗೆ ದೂರು ನೀಡಿದ್ದು, ಜಮೀರ್ ವಿರುದ್ದ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಜಾತಿ, ಧರ್ಮಗಳ ಮಧ್ಯೆ ದ್ವೇಷ ಭಾವನೆ ಬಿತ್ತುವ ಪ್ರಯತ್ನ ಜಮೀರ್ ಅವರದ್ದು ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.
ಇದನ್ನೂ ಓದಿ:VIDEO: JDS ಕಾರ್ಯಕರ್ತರ ಕ್ಷಮೆ ಕೋರಿದ ಸಚಿವ ಜಮೀರ್; ದಿಢೀರ್ U ಟರ್ನ್ ಯಾಕೆ?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
HD ಕುಮಾರಸ್ವಾಮಿ ನಿಂದನೆ; ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಪೊಲೀಸ್ ಕಂಪ್ಲೈಂಟ್

LATEST UPDATES