Advertisment

ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ; CT ರವಿ ವಿರುದ್ಧ FIR​​; ಸದ್ಯದಲ್ಲೇ ಬಂಧನ ಸಾಧ್ಯತೆ

author-image
Ganesh Nachikethu
Updated On
ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ; CT ರವಿ ವಿರುದ್ಧ FIR​​; ಸದ್ಯದಲ್ಲೇ ಬಂಧನ ಸಾಧ್ಯತೆ
Advertisment
  • ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಆರೋಪ
  • ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ನಿಂದಿಸಿದ್ದಾರೆ ಎಂದು ಪ್ರತಿಭಟನೆ
  • ಸಿ.ಟಿ ರವಿ ವಿರುದ್ಧ ಎಫ್​ಐಆರ್​ ಮಾಡಿದ ಬೆಳಗಾವಿ ಪೊಲೀಸ್ರು

ಬೆಂಗಳೂರು: ವಿಧಾನ ಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಬೆನ್ನಲ್ಲೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿ.ಟಿ ರವಿ ವಿರುದ್ಧ ದೂರು ದಾಖಲಿಸಿದ್ದಾರೆ. ಹೆಬ್ಬಾಳ್ಕರ್​ ದೂರಿನ ಆಧಾರದ ಮೇರೆಗೆ ಸಿ.ಟಿ ರವಿ ವಿರುದ್ಧ ಎಫ್​ಐಆರ್​ ಮಾಡಲಾಗಿದೆ.

Advertisment

ಎಂಎಲ್​ಸಿ ಸಿ.ಟಿ ರವಿ ವಿರುದ್ಧ ಬಿಎನ್​ಎಸ್​​​ ಆ್ಯಕ್ಟ್​​​ ಸೆಕ್ಷನ್​​ 75 ಮತ್ತು ಸೆಕ್ಷನ್​​ 79 ಅಡಿಯಲ್ಲಿ ಎಫ್​ಐಆರ್​ ದಾಖಲು ಮಾಡಲಾಗಿದೆ. ಸೆಕ್ಷನ್​​ 75 ಲೈಂಗಿಕ ದೌರ್ಜನ್ಯ ಮತ್ತು ಮಹಿಳೆಗೆ ನಿಂದನೆ ಹಾಗೂ ಸೆಕ್ಷನ್​​ 79 ಕೈ ಸನ್ನೆ ಮತ್ತು ಅಶ್ಲೀಲ ಪದ ಪ್ರಯೋಗ ಆಗಿದ್ದು, ಜಾಮೀನು ರಹಿತ ಕೇಸ್​​ ಇದಾಗಿದೆ. ಹಿರೇಬಾಗೇವಾಡಿ ಠಾಣೆ ಪೊಲೀಸ್ರು ಎಫ್​ಐಆರ್​ ಮಾಡಿದ್ದಾರೆ. ಹೀಗಾಗಿ ಸಿ.ಟಿ ರವಿ ಬಂಧನ ಸಾಧ್ಯತೆ ಇದೆ.

ಏನಿದು ಆರೋಪ?

ವಿಧಾನ ಪರಿಷತ್ ಅಧಿವೇಶನದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ವೇ* ಎಂಬ ಪದ ಬಳಕೆ ಮಾಡಿದ್ದಾರೆಂಬ ಆರೋಪದ ಬೆನ್ನಲ್ಲೇ ಭಾರೀ ಗದ್ದಲ ಎದ್ದಿದೆ. ಸುವರ್ಣ ಸೌಧದೊಳಗೆ ನುಗ್ಗಿದ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಸಿಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದರು. ಸುವರ್ಣ ಸೌಧದಲ್ಲಿ ಭಾರೀ ಭದ್ರತಾ ಲೋಪ ಕಂಡು ಬಂದಿದೆ.

ಸಿ.ಟಿ ರವಿ ಮೇಲೆ ಲಕ್ಷ್ಮೀ ಹೆಬ್ಬಾಳ್ಕರ್ ಕೆಂಡಾಮಂಡಲ

ತನ್ನ ವಿರುದ್ಧ ಮಾತಾಡಿದ್ದ ಸಿ.ಟಿ ರವಿ ಅವರನ್ನು ಲಕ್ಷ್ಮೀ ಹೆಬ್ಬಾಳ್ಕರ್ ಪರಿಷತ್​​ನಲ್ಲೇ ತರಾಟೆಗೆ ತೆಗೆದುಕೊಂಡಿದ್ದಾರೆ. ಏಕವಚನದಲ್ಲೇ ಮಾತಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ನಿನಗೆ ತಾಯಿ ಇಲ್ವಾ? ಹೆಂಡತಿ ಇಲ್ವಾ? ಎಂದು ಸಿ.ಟಿ ರವಿ ಅವರಿಗೆ ಪ್ರಶ್ನೆ ಮಾಡಿದ್ದಾರೆ. ಈ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

Advertisment

ಇದನ್ನೂ ಓದಿ:ನಿನಗೆ ತಾಯಿ ಇಲ್ವೇನೋ? ಹೆಂಡತಿ ಇಲ್ವೇನೋ? ಸಿ.ಟಿ ರವಿಗೆ ಏಕವಚನದಲ್ಲೇ ಬೈದ ಹೆಬ್ಬಾಳ್ಕರ್​​

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment