ದುಷ್ಕರ್ಮಿಗಳಿಂದ ಬಲಿಯಾದ ಮಯೂರ್ ಚೌವ್ಹಾಣ್
ಅಕ್ರಮ ಮರಳು ದಂಧೆ ತಡೆಯಲು ಹೋಗಿ ಬಲಿಯಾದರು
ಟ್ರ್ಯಾಕ್ಟರ್ ಹತ್ತಿಸಿ ಹೆಡ್ ಕಾನ್ಸ್ಟೇಬಲ್ನನ್ನು ಕೊಲೆಗೈದ ಕಿರಾತಕರು
ಕಲಬುರಗಿ: ಅಕ್ರಮ ಮರಳು ದಂಧೆ ತಡೆಯಲು ಹೋದ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಮಯೂರ್ ಚೌವ್ಹಾಣ್ ದುಷ್ಕರ್ಮಿಗಳಿಂದ ಬಲಿಯಾಗಿದ್ದಾರೆ. ಟ್ರ್ಯಾಕ್ಟರ್ ಹತ್ತಿಸಿ ಮಯೂರ್ ಅವರನ್ನು ಕಿರಾತಕರು ಕೊಲೆಗೈದಿದ್ದಾರೆ. ಈ ಘಟನೆ ಬೆಳಕಿಗೆ ಬಂದಂತೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮೃತ ಹೆಡ್ ಕಾನ್ಸ್‌ಟೇಬಲ್ ಕುಟುಂಬಕ್ಕೆ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.
ಮಾಧ್ಯಮ ಪ್ರಕಟಣೆ ಮೂಲಕ ಪ್ರಿಯಾಂಕ್ ಖರ್ಗೆ ಪರಿಹಾರದ ಭರವಸೆ ನೀಡಿದ್ದಾರೆ. ಜೊತೆಗೆ ಅಕ್ರಮ ಮರಳು ಸಾಗಾಣಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಆದೇಶ ಹೋರಡಿಸಿದ್ದಾರೆ. ಕಲಬುರಗಿ ಎಸ್ಪಿ ಮತ್ತು ಡಿಸಿ ಅವರಿಗೆ ಕರೆ ಮಾಡಿದ ಪ್ರಿಯಾಂಕ್ ಖರ್ಗೆ ತನಿಖೆಗೆ ಆದೇಶಿಸಿದ್ದಾರೆ. ಜೊತೆಗೆ ಮಯೂರ್ ಚೌವ್ಹಾಣ್ ಸಾವಿಗೆ ಸಂತಾಪ ಸೂಚಿಸಿದ್ದಾರೆ.
ಏನಿದು ಘಟನೆ?
ರಾತ್ರಿ ಸುಮಾರು 11 ಗಂಟೆ ವೇಳೆ ಜೇವರ್ಗಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಮಯೂರ್ ಚವ್ಹಾಣ್ ರಾತ್ರಿ ಟ್ರ್ಯಾಕ್ಟರ್ ನಲ್ಲಿ ಅಕ್ರಮ ಮರಳು ಸಾಗಿಸುತ್ತಿದ್ದವರನ್ನು ತಡೆಯಲು ಮುಂದಾಗಿದ್ದಾರೆ. ಈ ವೇಳೆ ಕಿರಾತಕರು ಟ್ರ್ಯಾಕ್ಟರ್ ನಿಲ್ಲಿಸದೆ ಹೆಡ್ ಕಾನ್ಸ್‌ಟೇಬಲ್ ಮೇಲೆಯೇ ಟ್ರ್ಯಾಕ್ಟರ್ ಹತ್ತಿಸಿ ಎಸ್ಕೇಪ್ ಆಗಿದ್ದಾರೆ. ಪರಿಣಾಮ ಹೆಡ್ ಕಾನ್ಸ್‌ಟೇಬಲ್ ಮಯೂರ್ ಚವ್ಹಾಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ