/newsfirstlive-kannada/media/media_files/2025/08/11/kn-rajanna-2025-08-11-15-04-06.jpg)
ಬೆಂಗಳೂರು: ಕೆ.ಎನ್ ರಾಜಣ್ಣ ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಸಿಎಂ ಸಿದ್ದರಾಮಯ್ಯನವರು ಇದೀಗ ಅಂಗೀಕರಿಸಿದ್ದಾರೆ. ಸಚಿವ ಕೆ.ಎನ್. ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ಅಂಗೀಕರಿಸಿದ್ದಾರೆ.
ಇದನ್ನೂ ಓದಿ:ರಾಜಣ್ಣ ನುಡಿದ ಸತ್ಯ ಕಾಂಗ್ರೆಸ್ಗೆ ಮೆಣಸಿನಕಾಯಿ ಇಟ್ಟಂಗೆ ಆಗಿದೆ -ಅಶೋಕ್ ವ್ಯಂಗ್ಯ
ರಾಜೀನಾಮೆ ಪತ್ರವನ್ನು ಸಿಎಂ ಸಿದ್ದರಾಮಯ್ಯನವರು ರಾಜ್ಯಪಾಲರಿಗೆ ಅಂಗೀಕಾರಕ್ಕಾಗಿ ರವಾನೆ ಮಾಡಲಿದ್ದಾರೆ. ಸಿಎಂ ಶಿಫಾರಸ್ಸಿನ ಮೇರೆಗೆ ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ನೀಡಿರುವ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಲಿದ್ದಾರೆ.
/filters:format(webp)/newsfirstlive-kannada/media/media_files/2025/08/11/kn-rajanna-3-2025-08-11-16-05-49.jpg)
ರಾಜಣ್ಣ ರಾಜೀನಾಮೆ..
ಸಹಕಾರ ಸಚಿವ ಕೆ.ಎನ್. ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕ್ಯಾಬಿನೆಟ್ ನಲ್ಲಿ 2ನೇ ವಿಕೆಟ್ ಪತನವಾದಂತೆ ಆಗಿದೆ. ಈ ಹಿಂದೆ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಕರ್ನಾಟಕದಲ್ಲಿ ಮತದಾರರ ಪಟ್ಟಿಯಲ್ಲಿ ಲೋಪದೋಷವಾಗಿರುವ ಬಗ್ಗೆ ಕೆ.ಎನ್.ರಾಜಣ್ಣ ಮಾತನಾಡಿದ್ದರು. 2024ರ ಲೋಕಸಭಾ ಚುನಾವಣೆ ನಡೆದಾಗ, ಕರ್ನಾಟಕದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರವೇ ಇತ್ತು. ನಾವೇ ಮತದಾರರ ಪಟ್ಟಿಯ ಬಗ್ಗೆ ನೋಡಿಕೊಳ್ಳಬೇಕಾಗಿತ್ತು. ಇದರಲ್ಲಿ ನಮ್ಮ ತಪ್ಪು ಕೂಡ ಇದೆ. ವೋಟಿಂಗ್ ಲಿಸ್ಟ್ ತಯಾರಾಗಿದ್ದೇ ನಮ್ಮ ಸರ್ಕಾರದ ಅವಧಿಯಲ್ಲಿ. ಮತದಾರರ ಪಟ್ಟಿಯಲ್ಲಿ ಆಕ್ರಮ ನಡೆದಿರೋದು ನಿಜ. ಅದರಲ್ಲಿ ಯಾವುದೇ ಅನುಮಾನ ಇಲ್ಲ. ಮಹದೇವಪುರ ಅಸೆಂಬ್ಲಿಯಲ್ಲಿ ನಮ್ಮ ಲೋಪ ಕೂಡ ಇದೆ. ಲೋಕಸಭೆ ಚುನಾವಣೆ ವೇಳೆ ನಾವೇ ಅಧಿಕಾರದಲ್ಲಿದ್ದೇವು ಎಂದು ಸಹಕಾರ ಸಚಿವ ಕೆ. ಎನ್.ರಾಜಣ್ಣ ಮಾತನಾಡಿದ್ದರು. ಕೆ.ಎನ್. ರಾಜಣ್ಣ ಅವರ ಈ ಹೇಳಿಕೆಯ ವಿರುದ್ಧ ಕಾಂಗ್ರೆಸ್ ನಾಯಕರು ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾಗೆ ದೂರು ನೀಡಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ