ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದ ಚುನಾವಣೆ ಧೀಢೀರ್ ಮುಂದೂಡಿಕೆ : ಕಾಂಗ್ರೆಸ್ ನಲ್ಲಿ ಮೂಢದ ಒಮ್ಮತ

ರಾಜ್ಯದ ಪ್ರತಿಷ್ಠಿತ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿತ್ತು. ಆದರೇ, ಕೊನೆ ಕ್ಷಣದಲ್ಲಿ ಅಧ್ಯಕ್ಷ ಸ್ಥಾನದ ಚುನಾವಣೆಯನ್ನು ಮುಂದೂಡಲಾಗಿದೆ. ಅಪೆಕ್ಸ್ ಬ್ಯಾಂಕ್ ನಿರ್ದೇಶಕರುಗಳಲ್ಲಿ 15 ಮಂದಿ ಕಾಂಗ್ರೆಸ್ಸಿಗರು. ಆದರೇ, ಕಾಂಗ್ರೆಸ್ ನಲ್ಲಿ ಅಧ್ಯಕ್ಷ ಸ್ಥಾನಕ್ಕೆ ಒಮ್ಮತ ಮೂಢಿಲ್ಲ.

author-image
Chandramohan
APEX BANK PRESIDENT POST FIGHT (2)
Advertisment

ರಾಜ್ಯದ ಪ್ರತಿಷ್ಠಿತ  ಅಪೆಕ್ಸ್ ಬ್ಯಾಂಕ್  ಅಧ್ಯಕ್ಷ ಸ್ಥಾನದ  ಚುನಾವಣೆಯನ್ನು  ಇಂದು ಮುಂದೂಡಲಾಗಿದೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಇಂದು  ಚುನಾವಣೆ ನಿಗದಿಯಾಗಿತ್ತು. ಆದರೇ, ಕೊನೆಕ್ಷಣದಲ್ಲಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದ ಚುನಾವಣೆಯನ್ನು ಮುಂದೂಡಲಾಗಿದೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕಾಗಿ ಸಿಎಂ ಬೆಂಬಲಿಗ ಶಾಸಕ ಕೆ.ಎನ್.ರಾಜಣ್ಣ ಹಾಗೂ ಡಿಸಿಎಂ ಬೆಂಬಲಿಗ ವಿಧಾನಪರಿಷತ್ ಸದಸ್ಯ ಎಸ್‌.ರವಿ ನಡುವೆ ಫೈಟ್ ನಡೆಯುತ್ತಿದೆ. ಇದರ ಜೊತೆಗೆ ಕಾಂಗ್ರೆಸ್‌ ನ  ವಿಧಾನ ಪರಿಷತ್ ಸದಸ್ಯ ಶರಣಗೌಡ ಭಯ್ಯಾಪುರ ಕೂಡ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ನಾಮಪತ್ರ ಸಲ್ಲಿಸಿದ್ದರು. ಅಪೆಕ್ಸ್ ಬ್ಯಾಂಕ್‌ನ ನಿರ್ದೇಶಕರ ಪೈಕಿ 15 ಮಂದಿ ಕಾಂಗ್ರೆಸ್ ಪಕ್ಷದವರೇ ಆಗಿದ್ದಾರೆ. ಹೀಗಾಗಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಕ್ಷ ಹಾಗೂ ಕಾಂಗ್ರೆಸ್ ನಾಯಕರುಗಳಿಗೆ ಸಿಗಲಿದೆ. ಆದರೇ, ಕಾಂಗ್ರೆಸ್ ಪಕ್ಷವು ಯಾರಿಗೆ ಅಧ್ಯಕ್ಷ ಸ್ಥಾನ ನೀಡಬೇಕೆಂಬ ಬಗ್ಗೆ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಿಲ್ಲ. 
ಇನ್ನೂ ಕಾಂಗ್ರೆಸ್ ನ ರಾಜ್ಯ ನಾಯಕತ್ವ ಹಾಗೂ ಹೈಕಮ್ಯಾಂಡ್ ಯಾರಿಗೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನ ನೀಡಬೇಕು ಎಂಬ ಬಗ್ಗೆ ಸಹಮತಿ ಮೂಢಿರಲಿಲ್ಲ. ಹೀಗಾಗಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದ ಚುನಾವಣೆಯನ್ನು  ಇಂದು ಬೆಳಿಗ್ಗೆ ಧೀಡೀರನೇ ಮುಂದೂಡಲಾಗಿದೆ.  ಕೊನೆ ಕ್ಷಣದಲ್ಲಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದ ಚುನಾವಣೆ ಮುಂದೂಡಿಕೆಯಾಗಿದೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕಾಗಿ  ಸಿಎಂ, ಡಿಸಿಎಂ ಬಣಗಳ‌ ನಡುವೆ ತೀವ್ರ ಪೈಪೋಟಿ ಕಾರಣಕ್ಕೆ ಚುನಾವಣೆ ಮುಂದೂಡಿಕೆ ಮಾಡಲಾಗಿದೆ. 
ಅಧ್ಯಕ್ಷ ಸ್ಥಾನಕ್ಕೆ ಇಂದು ನಾಮಪತ್ರ ಸಲ್ಲಿಸಿ, ಇಂದೇ ಚುನಾವಣೆ ನಡೆಸಬೇಕಾಗಿತ್ತು. ಬಿಜೆಪಿಯ  ಬೆಳ್ಳಿಪ್ರಕಾಶ್,   ಕಾಂಗ್ರೆಸ್‌ನ  ಶರಣಗೌಡ ಬಯ್ಯಾಪೂರ್  ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿದ್ದ ನಾಮಪತ್ರ ವಾಪಸ್ ಪಡೆಯಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಹೀಗಾಗಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಸದ್ಯಕ್ಕೆ ಚುನಾವಣೆ ನಡೆಯಲ್ಲ. 
ಈ ಭಾರಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನ ಯಾರ ಪಾಲಾಗುತ್ತೆ ಎಂಬ ಬಗ್ಗೆ ಇನ್ನೂ ಕುತೂಹಲ ಮುಂದುವರಿದಿದೆ. ಅಪೆಕ್ಸ್ ಬ್ಯಾಂಕ್ ನಲ್ಲಿ 25 ರಿಂದ 30 ಸಾವಿರ ಕೋಟಿ ರೂಪಾಯಿ ಬಂಡವಾಳ ಇದೆ. ನಬಾರ್ಡ್ ಮೂಲಕ ಅಪೆಕ್ಸ್ ಬ್ಯಾಂಕ್ ಗೆ ಸಾಲದ ಹಣ ಮಂಜೂರಾಗಿ ಬರುತ್ತೆ. ಈ ಹಣವನ್ನು ಅಪೆಕ್ಸ್ ಬ್ಯಾಂಕ್ ಮೂಲಕ ಜಿಲ್ಲಾ ಡಿಸಿಸಿ ಬ್ಯಾಂಕ್ ಗಳಿಗೆ ನೀಡಲಾಗುತ್ತೆ. ಸಹಕಾರ ವಲಯದ ಉನ್ನತ ಬ್ಯಾಂಕ್ ಈ ಅಪೆಕ್ಸ್ ಬ್ಯಾಂಕ್. ಹೀಗಾಗಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಲು ಕಾಂಗ್ರೆಸ್ ಪಕ್ಷದಲ್ಲೇ ಭಾರಿ ಪೈಪೋಟಿ ಇದೆ. 
ಕಳೆದ ಭಾರಿ ಬಿಜೆಪಿಯ ಬೆಳ್ಳಿ ಪ್ರಕಾಶ್ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿದ್ದರು. ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ ಎರಡು ಅವಧಿಗೆ  ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿದ್ದರು. ಈಗ ಕೆ.ಎನ್.ರಾಜಣ್ಣ, ಎಸ್‌.ರವಿ  ಹಾಗೂ ಶರಣಗೌಡ ಭಯ್ಯಾಪುರ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು. ಬೆಳ್ಳಿ ಪ್ರಕಾಶ್ ಗೆ ಈ ಭಾರಿ ಹೆಚ್ಚಿನ ನಿರ್ದೇಶಕರ ಬೆಂಬಲ ಇಲ್ಲ. 

APEX BANK PRESIDENT POST FIGHT (3)


ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

DK SURESH MLC S RAVI APEX BANK KMF apex bank
Advertisment