/newsfirstlive-kannada/media/media_files/2025/11/04/hy-meti-no-more-2025-11-04-12-38-01.jpg)
ಬೆಂಗಳೂರಿನಲ್ಲಿ ಶಾಸಕ ಎಚ್.ವೈ.ಮೇಟಿ ನಿಧನ
ಮಾಜಿ ಸಚಿವ ಹೆಚ್​ವೈ ಮೇಟಿ ನಿಧನ ಹೊಂದಿದ್ದಾರೆ. ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಹೆಚ್​ವೈ.ಮೇಟಿ, ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.
ಹೆಚ್‌ವೈ ಮೇಟಿ (ಹುಲ್ಲಪ್ಪ ಯಮನಪ್ಪ ಮೇಟಿ) 2023ರ ವಿಧಾನಸಭೆ ಚುನಾವಣೆಯಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ  ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಜೆಪಿಯ ವೀರಣ್ಣ ಚರಂತಿಮಠರನ್ನು ಸೋಲಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು. 
ಈ ಹಿಂದೆ 2013 ರಿಂದ 2016 ರವರೆಗಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಹೆಚ್.ವೈ.ಮೇಟಿ ಅಬಕಾರಿ ಖಾತೆ ಮಂತ್ರಿಯಾಗಿದ್ದರು. ಆ ವೇಳೆ ಲೈಂಗಿಕ ಹಗರಣದಲ್ಲಿ ಸಿಲುಕಿ ಕ್ಯಾಬಿನೆಟ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
H.Y. ಮೇಟಿ ಅವರಿಗೆ 79 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಹೆಚ್.ವೈ. ಮೇಟಿ ಅವರನ್ನು ಮೊನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.
ಇದನ್ನೂ ಓದಿ: ರಾಜಾರಾಣಿ ಖ್ಯಾತಿಯ ಹರ್ಷಿತಾ-ವಿನಯ್ ಬಾಳಲ್ಲಿ ಹೊಸ ಬೆಳಕು..!
ಹೆಚ್.ವೈ. ಮೇಟಿ ಅವರು ತಮ್ಮ ರಾಜಕೀಯ ಜೀವನದಲ್ಲಿ ಐದು ಭಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಗುಳೇದಗುಡ್ಡ ವಿಧಾನಸಭಾ ಕ್ಷೇತ್ರದಿಂದ ಮೂರು ಭಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಬಳಿಕ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಿಂದ ಎರಡು ಭಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1996ರ ಲೋಕಸಭಾ ಚುನಾವಣೆಯಲ್ಲಿ ಬಾಗಲ ಕೋಟೆ ಕ್ಷೇತ್ರದಿಂದ ಲೋಕಸಭೆಗೂ ಜನತಾದಳದಿಂದ ಆಯ್ಕೆಯಾಗಿದ್ದರು.
ರಾಜ್ಯ ಸರ್ಕಾರದಲ್ಲಿ ಎರಡು ಭಾರಿ ಸಚಿವರಾಗಿ ಕಾರ್ಯನಿರ್ವಹಣೆ ಮಾಡಿದ್ದರು. ಹೆಚ್.ವೈ. ಮೇಟಿ ಅಕಾಲಿಕ ನಿಧನದಿಂದ ಈಗ ಬಾಗಲಕೋಟೆ ವಿಧಾನಸಭೆ ಕ್ಷೇತ್ರ ತೆರವಾಗಿದೆ. ಮುಂದಿನ 6 ತಿಂಗಳೊಳಗೆ ಕೇಂದ್ರ ಚುನಾವಣಾ ಆಯೋಗ ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಿಸಲಿದೆ.
ಇದನ್ನೂ ಓದಿ:ಸುಪ್ರೀಂಕೋರ್ಟ್‌ಗೆ ಜಾಮೀನು ಕೋರಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ ನಟಿ ಪವಿತ್ರಾಗೌಡ : ಜೈಲಿನಲ್ಲಿ ರಿಲ್ಯಾಕ್ಸ್ ಮೂಡ್ ನಲ್ಲಿ ನಟ ದರ್ಶನ್ 
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ. 
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
 Follow Us