/newsfirstlive-kannada/media/media_files/2025/09/11/state-cabinet-meeting-2025-09-11-20-18-45.jpg)
ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಸಭೆ
ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ರಾಜ್ಯ ಕ್ಯಾಬಿನೆಟ್ ಸಭೆ ನಡೆದಿದೆ. ಕ್ಯಾಬಿನೆಟ್ ಸಭೆಯಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಬೇಕಾದ ಹಲವು ವಿಧೇಯಕಗಳಿಗೆ ಒಪ್ಪಿಗೆ ನೀಡಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಮಂಡಿಸಬೇಕಾದ ಮಸೂದೆಗಳ ಬಗ್ಗೆ ಚರ್ಚಿಸಿ ಅನುಮೋದನೆ ನೀಡಲಾಗಿದೆ.
ಕ್ಯಾಬಿನೆಟ್ ನಲ್ಲಿ ಇಂದು ಅನುಮೋದನೆ ಸಿಕ್ಕ ಮಸೂದೆಗಳೆಂದರೇ,
ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಕ್ಕೆ ಅನುಮೋದನೆ
ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ ಅನುಮೋದನೆ
ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ ಅನುಮೋದನೆ
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ ಅನುಮೋದನೆ
ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಅನುಮೋದನೆ
ಶ್ರೀ ಚಾಮುಂಡೇಶ್ವರಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಮತ್ತು ಇತರೆ ಕಾನೂನುಗಳ (ತಿದ್ದುಪಡಿ) ವಿಧೇಯಕ ಅನುಮೋದನೆ
ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ ಅನುಮೋದನೆ
ಕರ್ನಾಟಕ ಸಾಮಾಜಿಕ ಬಹಿಷ್ಕಾರ ತಡೆಗಟ್ಟುವಿಕೆ ವಿಧೇಯಕಕ್ಕೆ ಅನುಮೋದನೆ
ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ (ತಿದ್ದುಪಡಿ) ವಿಧೇಯಕ-2025ಕ್ಕೆ ಅನುಮೋದನೆ ನೀಡಲಾಗಿದೆ ಎಂದು ಸಚಿವ ಸಂಪುಟ ಸಭೆ ಬಳಿಕ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದಾರೆ.
ದ್ವೇಷ ಭಾಷಣ ಮಸೂದೆ ಬಗ್ಗೆ ನಮಗೆ ಸ್ಪಷ್ಟತೆ ಇದೆ. ಮಸೂದೆಯಲ್ಲಿ ವ್ಯಾಖ್ಯಾನ ಸ್ಪಷ್ಟತೆ ಇದೆ .
ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ್ಕೆ ಕ್ಯಾಬಿನೆಟ್ ನಲ್ಲಿ ಒಪ್ಪಿಗೆ ನೀಡಲಾಗಿದೆ. ಬಯಲುಸೀಮೆ ತಿದ್ದುಪಡಿ ವಿಧೇಯಕಕ್ಕೆ ಒಪ್ಪಿಗೆ ಸಿಕ್ಕಿದೆ. ಮಲೆನಾಡು ಅಭಿವೃದ್ಧಿ ಪ್ರಾಧಿಕಾರ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿದೆ. ಧಾರ್ಮಿಕ ದತ್ತಿ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿದೆ. ಜಾನುವಾರು ಹತ್ಯೆ ಪ್ರತಿಬಂಧಕ ಹತ್ಯೆ ಸಂರಕ್ಷಣೆ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿದೆ. ಸಾಮಾಜಿಕ ಬಹಿಷ್ಕಾರ ನಿಷೇಧ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿದೆ. ಒಟ್ಟು ಎಂಟು ವಿಧೇಯಕಗಳಿಗೆ ಅನುಮೋದನೆ ನೀಡಿದ್ದೇವೆ.
ಮತೀಯ ದ್ವೇಷ ಭಾಷಣವೂ ಇದರಲ್ಲಿ ಸೇರಿದೆ . ದ್ವೇಷ ಭಾಷಣ, ಸೈದ್ಧಾಂತಿಕ ನಿಲುವುಗಳ ಬಗ್ಗೆ ಸ್ಪಷ್ಟವಾಗಿದೆ . ವಿಧೇಯಕದಲ್ಲಿ ಬಹಳ ಸ್ಪಷ್ಟವಾಗಿ ತಿಳಿಸಲಾಗಿದೆ.
ವಿಶ್ವಬಂಡವಾಳ ಹೂಡಿಕೆ ಸಮಾವೇಶ- 2025 ಕಾರ್ಯಕ್ರಮಕ್ಕೆ ತಗುಲಿದ 100.70 ಕೋಟಿಗೆ ಅನುಮೋದನೆ ನೀಡಲಾಗಿದೆ. ರಾಜ್ಯದ 5172 ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ಗಣಕೀಕರಣ ಮಾಡಲು ಪಿಎಸಿಎಸ್ ಸೇವೆಗೆ 13 ಕೋಟಿ ವೆಚ್ಚಕ್ಕೆ ಅನುಮೋದನೆ ನೀಡಲಾಗಿದೆ. ಒಳನಾಡು ಇಲಾಖಾ ನಿಯಮಗಳಿಗೆ ತಿದ್ದುಪಡಿ ಮಾಡಲಾಗುತ್ತಿದೆ.
ಗದಗ,ಕಲಬುರಗಿ,ದಾವಣಗೆರೆ,ಕೆಂಗೇರಿಯಲ್ಲಿ ಕೌಶಲ್ಯಾಧಾರಿತ ಪ್ರಯೋಗಾಲಯಗಳ ಸ್ಥಾಪನೆಗೆ 457 ಕೋಟಿ ಅಂದಾಜು ಮೊತ್ತಕ್ಕೆ ಒಪ್ಪಿಗೆ ನೀಡಲಾಗಿದೆ.
ಕೊಪ್ಪಳ ಜಿಲ್ಲಾಸ್ಪತ್ರೆ ಆವರಣದಲ್ಲಿ ಕಾಮಗಾರಿಗಳಿಗಾಗಿ 28 ಕೋಟಿ ವೆಚ್ಚಕ್ಕೆ ಸಂಪುಟ ಅನುಮೋದನೆ ನೀಡಿದೆ. 19 ಮೊರಾರ್ಜಿ ದೇಸಾಯಿ ಶಾಲೆಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ 304 ಕೋಟಿ ವೆಚ್ಚಕ್ಕೆ ಸಂಪುಟ ಒಪ್ಪಿಗೆ ನೀಡಿದೆ.
ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಗೆ ಅನುಮೋದನೆ ನೀಡಲಾಗಿದೆ. ಕುರಿ, ಮೇಕೆಗಳ ನೀಲಿ ನಾಲಿಗೆ ರೋಗಕ್ಕೆ ಲಸಿಕೆ ಹಾಕಲು, ಹೊಸದಾಗಿ ಲಸಿಕೆ ಕಂಡು ಹಿಡಿಯಲು ಅನುದಾನ ನೀಡಲು ಒಪ್ಪಿಗೆ ನೀಡಲಾಗಿದೆ.
ಹೆಬ್ಬಾಳದಲ್ಲಿ ಪಶುವೈದ್ಯಕೀಯ ವಿವಿಗೆ ಅವಕಾಶ ನೀಡಲು 27 ಕೋಟಿ ವೆಚ್ಚಕ್ಕೆ ಸಂಪುಟ ಅನುಮೋದನೆ ನೀಡಲಾಗಿದೆ.
ದೇವನಹಳ್ಳಿಯಲ್ಲಿ ವಿಶೇಷ ಆರ್ಥಿಕ ವಲಯ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಳ್ಳಲು ಹೊರಟಿದ್ದ 1777 ಎಕರೆ ಭೂಮಿಯನ್ನು ಅಧಿಸೂಚನೆಯಿಂದ ಕೈಬಿಡಲು ಅಧಿಕೃತ ಅಧಿಸೂಚನೆ ಹೊರಡಿಸಲು ಸಂಪುಟ ತೀರ್ಮಾನ ಮಾಡಿದೆ.
/filters:format(webp)/newsfirstlive-kannada/media/media_files/2025/09/12/minister-hk-patil02-2025-09-12-13-33-20.jpg)
ಬೆಂಗಳೂರಿನ ಹೆಬ್ಬಾಳದಿಂದ ಮೇಖ್ರಿ ಸರ್ಕಲ್ ವರೆಗೂ ಅವಳಿ ಸುರಂಗ ರಸ್ತೆ ನಿರ್ಮಾಣ ಮಾಡಲಾಗುತ್ತೆ.
ಪೂರಕವಾಗಿ ಎಲಿವೇಟೆಡ್ ಕಾಮಗಾರಿಗಳ ನಿರ್ಮಾಣಕ್ಕೆ ಸಂಪುಟ ಅನುಮೋದನೆ ನೀಡಿದ್ದು, 2215 ಕೋಟಿ ಅಂದಾಜು ವೆಚ್ಚಕ್ಕೆ ಸಂಪುಟ ಅನುಮೋದನೆ ನೀಡಿದೆ ಎಂದು ರಾಜ್ಯದ ಸಂಸದೀಯ ವ್ಯವಹಾರ ಹಾಗೂ ಕಾನೂನು ಖಾತೆ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us