/newsfirstlive-kannada/media/post_attachments/wp-content/uploads/2025/04/Siddaramaiah-Cabinet-Meet.jpg)
ಕಬ್ಬು ಬೆಲೆ ನಿಗದಿಯ ಅಧಿಕಾರ ಸಿಎಂಗೆ ನೀಡಿದ ಕ್ಯಾಬಿನೆಟ್
ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಕ್ಯಾಬಿನೆಟ್ ಸಭೆ ಮುಕ್ತಾಯವಾಗಿದೆ.
ಕಬ್ಬಿನ ದರ ನಿಗದಿ ಸಂಬಂಧ ಸಿಎಂಗೆ ಪರಮಾಧಿಕಾರವನ್ನು ಸಚಿವ ಸಂಪುಟ ಸಭೆ ನೀಡಿದೆ.
ಕಬ್ಬು ಬೆಳೆಗಾರರ ಹೋರಾಟದ ಬಗ್ಗೆ ಸಂಪುಟ ಸಭೆಯಲ್ಲಿ ಸುಧೀರ್ಘ ಚರ್ಚೆ ನಡೆದಿದೆ. ರೈತರ ಬೇಡಿಕೆಗಳ ಕುರಿತು ಗಂಭೀರ ಸಮಾಲೋಚನೆ ನಡೆದಿದೆ. ಅಂತಿಮವಾಗಿ ದರ ನಿಗದಿಯ ಪರಮಾಧಿಕಾರವನ್ನ ಸಿಎಂಗೆ ಕ್ಯಾಬಿನೆಟ್ ನೀಡಿದೆ.
ಇನ್ನೂ ಕ್ಯಾಬಿನೆಟ್ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಗರಂ ಆಗಿದ್ದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ವಿಜಯೇಂದ್ರ ವಿರುದ್ಧ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಜಯೇಂದ್ರ ರೈತರನ್ನ ರಾಜ್ಯ ಸರ್ಕಾರದ ವಿರುದ್ಧ ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ . ಅನಗತ್ಯವಾಗಿ ಸರ್ಕಾರದ ವಿರುದ್ಧ ರೈತರನ್ನು ಎತ್ತಿಕಟ್ಟುತ್ತಿದ್ದಾರೆ. ನಾವು ರೈತರ ಪರವಾಗಿದ್ದೇವೆ, ಆದರೂ ವಿಜಯೇಂದ್ರ ರೈತರ ಹೋರಾಟದ ಸ್ಥಳಕ್ಕೆ ಹೋಗಿ ಪ್ರಚೋದನೆ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೂ ನಾಳೆ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜೊತೆ ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜೊತೆ ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ. ಸಕ್ಕರೆ ಕಾರ್ಖಾನೆಗಳ ಜೊತೆ ಸಭೆ ನಡೆಸಿ ಸಿಎಂ ಸಿದ್ದರಾಮಯ್ಯ ಕಬ್ಬು ಬೆಲೆ ನಿಗದಿಯ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ. ರಾಜ್ಯದ ಎಲ್ಲಾ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜೊತೆ ಚರ್ಚೆ ನಡೆಸಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜೊತೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತೆ.
ಈ ಹಿಂದೆ ರಾಜ್ಯ ಸರ್ಕಾರವೇ ಟನ್ ಗೆ ಇಂತಿಷ್ಟು ಎಂದು ಬೆಂಬಲ ಬೆಲೆಯ ಹಣವನ್ನು ನೀಡಿತ್ತು. ಈಗ ಮತ್ತೆ ಮತ್ತೆ ಮಾದರಿಯಲ್ಲಿ ನೀಡಲು ಸಾಧ್ಯವೇ ಹೇಗೆ ಎಂಬ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್ ನಾಯಕ ಪ್ರಕಾಶ್ ಹುಕ್ಕೇರಿ ಅವರೇ ಈ ಬಗ್ಗೆ ಸಿಎಂಗೆ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ಗೆ ಪತ್ರ ಬರೆದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us