/newsfirstlive-kannada/media/media_files/2025/09/11/state-cabinet-meeting-2025-09-11-20-18-45.jpg)
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ಆರಂಭವಾಗಿದೆ. ವಿಧಾನಸೌಧದ ಸಂಪುಟ ಸಭಾಂಗಣದಲ್ಲಿ ಕ್ಯಾಬಿನೆಟ್ ಸಭೆ ಆರಂಭವಾಗಿದೆ. ಆದರೇ, ಕ್ಯಾಬಿನೆಟ್ ಸಭೆಗೆ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ್ ಗೈರಾಗಿದ್ದಾರೆ. ಶಿವಾನಂದ್ ಪಾಟೀಲ್ ಅವರು ಹುಬ್ಬಳ್ಳಿಯಲ್ಲಿದ್ದಾರೆ. ಬೆಳಗಾವಿಯಲ್ಲಿ ರೈತರ ಪ್ರತಿಭಟನೆಯ ಕಾರಣದಿಂದ ಶಿವಾನಂದ ಪಾಟೀಲ್ ಹುಬ್ಬಳ್ಳಿಯಲ್ಲೇ ವಾಸ್ತವ್ಯ ಹೂಡಿದ್ದಾರೆ.
ಇನ್ನೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿ ಇರುವ ಕಾರಣದಿಂದ ಕ್ಯಾಬಿನೆಟ್ ಸಭೆಗೆ ಹಾಜರಾಗಿಲ್ಲ.
ರಾಜ್ಯದಲ್ಲಿ ರೈತರು ಪ್ರತಿ ಟನ್ ಕಬ್ಬುಗೆ 3,500 ರೂಪಾಯಿ ಬೆಲೆ ನೀಡಬೇಕೆಂದು ಬಿಗಿ ಪಟ್ಟು ಹಿಡಿದು ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ಸಕ್ಕರೆ ಕಾರ್ಖಾನೆಗಳ ಮಾಲೀಕರನ್ನು ಪ್ರತಿ ಟನ್ ಕಬ್ಬುಗೆ 3,200 ರೂಪಾಯಿ ನೀಡಲು ಒಪ್ಪಿಸಿದ್ದೇವು ಎಂದು ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಆದರೇ, ರೈತರು ಪ್ರತಿ ಟನ್ ಕಬ್ಬುಗೆ 3,200 ರೂಪಾಯಿ ಸ್ವೀಕರಿಸಲು ಒಪ್ಪಿಲ್ಲ. ಮಹಾರಾಷ್ಟ್ರದಲ್ಲಿ ಪ್ರತಿ ಟನ್ ಕಬ್ಬುಗೆ 3,500 ರೂಪಾಯಿಗಿಂತ ಹೆಚ್ಚಿನ ಬೆಲೆ ನೀಡುತ್ತಿದ್ದಾರೆ. ಹೀಗಾಗಿ ಕರ್ನಾಟಕದಲ್ಲೂ ಅದೇ ರೇಟ್ ನೀಡಬೇಕೆಂದು ಬಿಗಿ ಪಟ್ಟು ಹಿಡಿದಿದ್ದಾರೆ.
ಹೀಗಾಗಿ ಕಬ್ಬು ಬೆಲೆ ಬಗ್ಗೆ ರಾಜ್ಯ ಕ್ಯಾಬಿನೆಟ್ ನಲ್ಲಿ ಚರ್ಚೆ ನಡೆದು ಯಾವುದಾದರೂ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಜೊತೆಗೆ ಕಬ್ಬು ರೈತರು ಕೂಡ ಇಂದು ರಾತ್ರಿ 8 ಗಂಟೆಯೊಳಗೆ ಪ್ರತಿ ಟನ್ ಕಬ್ಬುಗೆ 3,500 ರೂಪಾಯಿ ನೀಡುವ ತೀರ್ಮಾನ ಕೈಗೊಳ್ಳಬೇಕು , ಇಲ್ಲದಿದ್ದರೇ, ನಾಳೆ( ನವಂಬರ್ 7) ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವ ಎಚ್ಚರಿಕೆ ನೀಡಿದ್ದಾರೆ.
ಹೀಗಾಗಿ ಕ್ಯಾಬಿನೆಟ್ ಸಭೆಯಲ್ಲಿ ಕಬ್ಬು ಬೆಲೆ ಬಗ್ಗೆ ಏನು ತೀರ್ಮಾನ ಕೈಗೊಳ್ಳಲಾಗುತ್ತೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us