/newsfirstlive-kannada/media/media_files/2025/10/15/ips-officer-alok-kumar-2025-10-15-12-16-07.jpg)
ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಗೆ ಬಡ್ತಿ ನೀಡಲು ಸಿಎಟಿ ಆದೇಶ
ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಇಲಾಖಾ ತನಿಖೆಗೆ ಆದೇಶ ನೀಡಿದ್ದ ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಪೋನ್ ಟ್ಯಾಪಿಂಗ್ ಪ್ರಕರಣದಲ್ಲಿ ಅಲೋಕ್ ಕುಮಾರ್ ವಿರುದ್ಧ ಸರ್ಕಾರ ಆದೇಶಿಸಿದ್ದ ಇಲಾಖಾ ತನಿಖೆ ಆದೇಶ ರದ್ದುಗೊಳಿಸಿ ಸಿಎಟಿ ಆದೇಶ ನೀಡಿದೆ. ಸರ್ಕಾರದ ಇಲಾಖಾ ತನಿಖೆ ಆದೇಶ ಪ್ರಶ್ನಿಸಿ ಸಿಎಟಿ( ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ) ಗೆ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅರ್ಜಿ ಸಲ್ಲಿಸಿದ್ದರು. ಇಬ್ಬರು ನ್ಯಾಯಾಧೀಶರ ನಡುವೆ ವಿಭಿನ್ನ ತೀರ್ಪು ಬಂದ ಹಿನ್ನೆಲೆಯಲ್ಲಿ ಸಿಎಟಿ ಮುಖ್ಯಸ್ಥ ನ್ಯಾಯಮೂರ್ತಿ ರಣ್ ಜೀತ್ ಬಳಿ ಕೇಸ್ ಹೋಗಿತ್ತು. ಎರಡೂ ಕಡೆಯ ವಾದ ಪ್ರತಿವಾದ ಆಲಿಸಿ ಸಿಎಟಿ ತೀರ್ಪು ಪ್ರಕಟಿಸಿದೆ. ರಾಜ್ಯ ಸರ್ಕಾರದ ಇಲಾಖಾ ತನಿಖೆ ಆದೇಶ ರದ್ದುಗೊಳಿಸಿ ನ್ಯಾಯಮೂರ್ತಿಗಳು ಆದೇಶ ನೀಡಿದ್ದಾರೆ. ಹಾಗೆಯೇ ಅಲೋಕ್ ಕುಮಾರ್ ಗೆ ಸಲ್ಲಬೇಕಾದ ಬಡ್ತಿ ಸವಲತ್ತುಗಳನ್ನ ನೀಡುವಂತೆ ಆದೇಶ ನೀಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.