ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಿಎಂ ಸಿದ್ದರಾಮಯ್ಯರಿಂದ ಚಾಲನೆ

ಕೆ.ಸಿ.ವ್ಯಾಲಿ 2ನೇ ಹಂತದ ಯೋಜನೆಯನ್ನು ಇಂದು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದ್ದಾರೆ. 2ನೇ ಹಂತದ ಯೋಜನೆಯಡಿ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ಅನ್ನು ತುಂಬಿಸಲಾಗುತ್ತೆ. ಬೆಂಗಳೂರಿನ ಕೊಳಚೆ ನೀರು ಅನ್ನು ಬಿಡಬ್ಲ್ಯುಎಸ್‌ಎಸ್‌ಬಿ ಸಂಸ್ಕರಿಸಿ ಕೆರೆಗಳಿಗೆ ಪೂರೈಸುತ್ತಿದೆ.

author-image
Chandramohan
KC VALLEY 2ND STAGE

ಕೆ.ಸಿ.ವ್ಯಾಲಿ 2ನೇ ಹಂತದ ಯೋಜನೆ ಲೋಕಾರ್ಪಣೆ

Advertisment


ಕೆ. ಸಿ ವ್ಯಾಲಿ 2 ನೇ ಹಂತದ ಯೋಜನೆಯಡಿ ಲಕ್ಷ್ಮೀ ಸಾಗರ ಪಂಪ್ ಹೌಸ್ ನಿಂದ ಕೋಲಾರ ಜಿಲ್ಲೆಯ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಇಂದು ಕಾವೇರಿ ನಿವಾಸದಲ್ಲಿ ಲೋಕಾರ್ಪಣೆಗೊಳಿಸಿದರು.
ನಂತರ ಮಾತನಾಡಿದ ಅವರು ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗೆ ನಾವು ಹಿಂದಿನ ಸಲ ಅಧಿಕಾರದಲ್ಲಿದ್ದಾಗ ಕೈಗೊಂಡ ಯೋಜನೆಗಳು ಈ ಭಾಗದ ರೈತರ ಜೀವನ ಮಟ್ಟವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ.   250ಕ್ಕೂ ಹೆಚ್ಚು ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ಪ್ರತಿನಿತ್ಯ ಹರಿಸಲಾಗುತ್ತಿದೆ ಎಂದರು.
      ಕೆ.ಸಿ.ವ್ಯಾಲಿ ಎರಡನೇ ಹಂತದ ಯೋಜನೆಯಡಿ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸಲಾಗುವುದು.  ಮೊದಲನೇ ಹಂತದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಿ  ಕೋಲಾರ, ಚಿಕ್ಕಬಳ್ಳಾಪುರ ಕೆರೆಗಳನ್ನು ಯಶಸ್ವಿಯಾಗಿ ತುಂಬಿಸಲಾಗಿದೆ. ಈ ನೀರನ್ನು ಕುಡಿಯಲು ಬಳಸುವುದಿಲ್ಲ.  ಕೆರೆ ತುಂಬಿಸಿದ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಉತ್ತಮಗೊಂಡಿದೆ ಎಂದರು. 

KC VALLEY 2ND STAGE02

ಸಂಸ್ಕರಿಸಿದ ನೀರು ಬೆಳೆಗಳಿಗೆ ಯೋಗ್ಯವಲ್ಲ ಎನ್ನುವುದು ಅಪಪ್ರಚಾರ: ಇದರಲ್ಲಿ ಸತ್ಯಾಂಶವಿಲ್ಲ

ಯೋಜನೆ ಬಗ್ಗೆ ಕೆಲವರು ಅಪಪ್ರಚಾರ ಮಾಡಿದರೂ, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂಬುವುದು ಈಗಾಗಲೇ ಸಾಬೀತಾಗಿದೆ. ಬೆಳೆಗಳಿಗೆ, ದನಕರುಗಳಿಗೆ ಯಾವುದೇ ತೊಂದರೆ ಇಲ್ಲ ಎಂದು  ನಿರೂಪಿತವಾಗಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ಕೆ.ಸಿ.ವ್ಯಾಲಿ ಎರಡನೇ ಹಂತ ಡಿಸೆಂಬರ್‌ ಅಂತ್ಯದ ಒಳಗೆ ಪೂರ್ಣಗೊಳ್ಳಲಿದ್ದು, ಇದರಿಂದ 272  ಕೆರೆಗಳನ್ನು ತುಂಬಿಸಲು ಸಾಧ್ಯವಿದೆ. ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ನದಿಗಳಲಿಲ್ಲದೆ ಇರುವುದರಿಂದ ಯೋಜನೆಯಿಂದ  ರೈತರಿಗೆ  ಅನುಕೂಲವಾಗಲಿದ್ದು,  446 ಕೋಟಿಗಳ ವೆಚ್ಚದಲ್ಲಿ ಇದನ್ನು ಕೈಗೊಳ್ಳಲಾಗಿದೆ ಎಂದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ. 

KC VALLEY 2ND STAGE LAUNCH
Advertisment