/newsfirstlive-kannada/media/media_files/2025/11/01/cm_siddaramaiah_dk-2025-11-01-11-03-13.jpg)
ಬೆಂಗಳೂರು: ರಾಜ್ಯ ಸರ್ಕಾರದ ರಚನೆ ವೇಳೆ ಪವರ್ ಶೇರಿಂಗ್ ಒಪ್ಪಂದದ ಮಾತುಕತೆ ಆಗಿತ್ತಾ ಎನ್ನುವ ಚರ್ಚೆ ತೀವ್ರವಾಗುತ್ತಿದೆ. ಹೈಕಮಾಂಡ್ ನಿರ್ಧರಿಸಿದರೆ 5 ವರ್ಷ ನಾನೇ ಮುಂದುವರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಇತ್ತೀಚೆಗೆ ಹೇಳಿದ್ದರು. ಪವರ್ ಶೇರಿಂಗ್ ಈಗಿರುವಾಗಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್​ ಅವರು ನಗು ಮುಖದಲ್ಲಿ ಕಾಣಿಸಿಕೊಂಡಿದ್ದಾರೆ.
/filters:format(webp)/newsfirstlive-kannada/media/media_files/2025/11/01/cm_siddaramaiah_dks-2-2025-11-01-11-03-28.jpg)
ಇಂದು 70 ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ತಾಯಿ ಭುವನೇಶ್ವರಿ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿದರು. ಇದಕ್ಕೂ ಕೆಲ ಕ್ಷಣಗಳು ಮುನ್ನಾ ಭುವನೇಶ್ವರಿ ಪ್ರತಿಮೆ ಬಳಿ ಸಿಎಂ ಸಿದ್ದರಾಮಯ್ಯ ಅವರು ಆಗಮಿಸುತ್ತಿದಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಶುಭ ಕೋರಿದ್ದಾರೆ.
/filters:format(webp)/newsfirstlive-kannada/media/media_files/2025/11/01/cm_siddaramaiah-3-2025-11-01-11-03-39.jpg)
ಇದೇ ವೇಳೆ ಸಿಎಂ ಸಿದ್ದರಾಮಯ್ಯರಿಂದಲೂ ಡಿ.ಕೆ ಶಿವಕುಮಾರ್​ಗೆ ಶುಭಾಶಯ ತಿಳಿಸಲಾಯಿತು. ಇಬ್ಬರು ನಾಯಕರು ಪರಸ್ಪರ ಹಸ್ತಲಾಘವ ನೀಡಿ ಆತ್ಮೀಯತೆಯಿಂದ ಕಾಣಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಉತ್ತರಾಧಿಕಾರಿ ಯಾರು ಎಂದು ದೊಡ್ಡ ಮಟ್ಟದಲ್ಲೇ ಚರ್ಚೆ ಆಗುತ್ತಿದೆ. ಕಾಂಗ್ರೆಸ್​ ನಾಯಕರು ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ಪವರ್ ಶೇರಿಂಗ್ ಚರ್ಚೆ ನಡುವೆಯೂ ನಗು ಮುಖದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರು ಕಾಣಿಸಿದರು. ಇನ್ನು ಸಭಾಪತಿ ಬಸವರಾಜ ಹೊರಟ್ಟಿ, ಸಿ.ಎಸ್ ಶಾಲಿನಿ ರಜನೀಶ್ ಸೇರಿ ಇತರೆ ಗಣ್ಯರು ಉಪಸ್ಥಿತರಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us