/newsfirstlive-kannada/media/media_files/2025/08/10/siddaramaiah-narendra-modi-1-2025-08-10-16-04-08.jpg)
ಪ್ರಧಾನಿ ನರೇಂದ್ರ ಮೋದಿ ಮತ್ತು ಸಿದ್ದರಾಮಯ್ಯ
ದೆಹಲಿಯಲ್ಲಿರುವ ಸಿಎಂ ಸಿದ್ದರಾಮಯ್ಯ , ಪ್ರಧಾನಿ ಮೋದಿ ಭೇಟಿಗೆ ತೆರಳಿದ್ದಾರೆ. ದೆಹಲಿಯ ಕರ್ನಾಟಕ ಭವನದಿಂದ ಪ್ರಧಾನಿ ಮೋದಿ ಭೇಟಿಯಾಗಲು ಸಿಎಂ ಸಿದ್ದರಾಮಯ್ಯ ಹೊರಟಿದ್ದಾರೆ. ಇಂದು ಸಂಜೆ 5 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಲು ಸಿಎಂ ಸಿದ್ದರಾಮಯ್ಯ ಅವರಿಗೆ ಸಮಯ ನೀಡಿದ್ದಾರೆ. ದೆಹಲಿಯ ಪ್ರಧಾನಿ ಕಚೇರಿಯಲ್ಲಿ ಇಬ್ಬರು ನಾಯಕರ ಭೇಟಿ ನಡೆಯಲಿದೆ.
ಭೇಟಿಯ ಸಂದರ್ಭದಲ್ಲಿ ರಾಜ್ಯದ ಕಬ್ಬು ಬೆಳೆಗಾರರ ವಿಚಾರವನ್ನು ಸಿಎಂ ಸಿದ್ದರಾಮಯ್ಯ ಚರ್ಚೆ ಮಾಡುವರು. ಕಬ್ಬಿಗೆ ಬೆಂಬಲ ಬೆಲೆ ಹೆಚ್ಚಳ ಮತ್ತು ಎಥೆನಾಲ್ ಹೆಚ್ಚಿನ ಪ್ರಮಾಣದಲ್ಲಿ ಖರೀದಿಗೆ ಮನವಿ ಮಾಡುವರು. ಇದೇ ಸಂದರ್ಭದಲ್ಲಿ ಮೇಕೆದಾಟು ಯೋಜನೆಗೆ ಕೇಂದ್ರದಿಂದ ಅನುಮತಿ ಕೋರಿಯೂ ಚರ್ಚೆ ಮಾಡಲಿದ್ದಾರೆ. ಇನ್ನು ರಾಜ್ಯದ ಹಲವು ಯೋಜನೆಗಳ ಬಗ್ಗೆ ಮತ್ತು ಅನುದಾನದ ಬಗ್ಗೆ ಚರ್ಚೆ ನಡೆಸುವರು.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us