/newsfirstlive-kannada/media/media_files/2025/11/15/cm-siddu-meets-rahul-gandhi-at-delhi-2025-11-15-16-23-03.jpg)
ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿಯಾದ ಸಿಎಂ ಸಿದ್ದರಾಮಯ್ಯ
ಇಂದು ಒಂದು ದಿನದ ಭೇಟಿಗಾಗಿ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಸೀದಾ ಜನಪಥ್ , 10 ನೇ ನಂಬರ್ ನಿವಾಸಕ್ಕೆ ತೆರಳಿ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ.
ರಾಹುಲ್ ಗಾಂಧಿ ಜೊತೆಗೆ ರಾಜ್ಯದ ಸಚಿವ ಸಂಪುಟದ ಪುನರ್ ರಚನೆಯ ಬಗ್ಗೆ ವಿಸ್ತೃತ ಚರ್ಚೆ ನಡೆಸುತ್ತಿದ್ದಾರೆ. ಸಚಿವ ಸಂಪುಟ ಪುನರ್ ರಚನೆಗೆ ಒಪ್ಪಿಗೆ ನೀಡಬೇಕೆಂದು ಹೈಕಮ್ಯಾಂಡ್ ನಾಯಕರಾದ ಸೋನಿಯಾಗಾಂಧಿ, ರಾಹುಲ್ ಗಾಂಧಿಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಒಂದು ವೇಳೆ ಸಚಿವ ಸಂಪುಟ ಪುನರ್ ರಚನೆಗೆ ಹೈಕಮ್ಯಾಂಡ್ ಒಪ್ಪಿಗೆ ನೀಡಿದರೇ, ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ ಎಂಬುದು ಸ್ಪಷ್ಟವಾಗುತ್ತೆ. ಮುಂದಿನ ಎರಡೂವರೆ ವರ್ಷಗಳಿಗೂ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಮುಂದುವರಿಯುತ್ತಾರೆ ಎಂಬುದು ಸ್ಪಷ್ಟವಾಗುತ್ತೆ.
ಡಿಸಿಎಂ ಡಿಕೆಶಿ ಬಣ ಈಗ ಯಾವುದೇ ಸಚಿವ ಸಂಪುಟ ಪುನರ್ ರಚನೆ ಬೇಡ. ನೇರವಾಗಿ ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಿ, ಸಿಎಂ ಸ್ಥಾನವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ನೀಡಬೇಕೆಂದು ಪಟ್ಟು ಹಿಡಿದಿದೆ.
ಹೀಗಾಗಿ ಈಗ ಕಾಂಗ್ರೆಸ್ ಹೈಕಮ್ಯಾಂಡ್ ಯಾವ ತೀರ್ಮಾನ ಕೈಗೊಳ್ಳುತ್ತೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಸಿಎಂ ಸಿದ್ದರಾಮಯ್ಯ ಪರವಾಗಿ ರಾಹುಲ್ ಗಾಂಧಿ ಇದ್ದರೇ, ಡಿಕೆಶಿ ಪರವಾಗಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಇದ್ದಾರೆ. ಅಂತಿಮವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆಗೆ ಚರ್ಚೆ ಮಾಡಿ ಕಾಂಗ್ರೆಸ್ ಹೈಕಮ್ಯಾಂಡ್ ತನ್ನ ತೀರ್ಮಾನವನ್ನು ಸಿದ್ದರಾಮಯ್ಯಗೆ ತಿಳಿಸಲಿದೆ.
/filters:format(webp)/newsfirstlive-kannada/media/media_files/2025/11/15/cm-siddu-meets-rahul-gandhi-at-delhi02-2025-11-15-16-25-02.jpg)
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us